ಈ ತಂಡ ಎಲ್ಲಾ ಪರಿಸ್ಥಿತಿಗಳಲ್ಲೂ ಗೆಲ್ಲಬಲ್ಲ ಸಾಮರ್ಥ್ಯವನ್ನು ಹೊಂದಿದೆ ಎಂದ ಮ್ಯಾಥ್ಯೂ ಹೇಡನ್

ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯ ಮೂರನೇ ಪಂದ್ಯದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸಿದೆ. ಎರಡನೇ ದಿನದಲ್ಲಿ ಈ ಪಂದ್ಯ ಅಂತ್ಯವಾಗಿರುವುದು ಒಂದಷ್ಟು ಚರ್ಚೆಗೂ ಕಾರಣವಾಗಿದೆ. ಆದರೆ ಭಾರತ ತಂಡದ ಪ್ರದರ್ಶನದ ಬಗ್ಗೆ ಮೆಚ್ಚುಗೆಗಳು ವ್ಯಕ್ತವಾಗುತ್ತಿದೆ. ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ಮಾಜಿ ಆಟಗಾರ ಮ್ಯಾಥ್ಯೂ ಹೇಡನ್ ಈ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.
ಮ್ಯಾಥ್ಯೂ ಹೇಡನ್ ಟೀಮ್ ಇಂಡಿಯಾ ಎಲ್ಲಾ ರೀತಿಯ ಪರಿಸ್ಥಿತಿಗಳಲ್ಲೂ ಗೆಲುವನ್ನು ಸಾಧಿಸಬಲ್ಲ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಿದ್ದಾರೆ. "ಭಾರತ ತಂಡ ಎಲ್ಲಾ ರೀತಿಯ ಪರಿಸ್ಥಿತಿಗಳಲ್ಲಿ ಎದುರಾಳಿಗಳ ವಿರುದ್ಧ ಗೆಲುವು ಸಾಧಿಸಬಲ್ಲ ಸಾಮರ್ಥ್ಯವನ್ನು ಹೊಂದಿರುವ ಆಧುನಿಕ ತಂಡ" ಎಂದು ಮ್ಯಾಥ್ಯೂ ಹೇಡನ್ ಹೇಳಿದ್ದಾರೆ.

ಆಸಿಸ್ ನೆಲದಲ್ಲಿ ಗೆದ್ದು ಬಂದಿತ್ತು
ಭಾರತ ಇತ್ತೀಚೆಗೆ ಆಸ್ಟ್ರೇಲಿಯಾ ಪ್ರವಾಸ ತೆರಳಿ ಆಸಿಸ್ ತಂಡದ ವಿರುದ್ಧವೇ 2-1 ಅಂತರದಿಂದ ಗೆದ್ದು ಬಂದಿತ್ತು. ಈಗ ಇಂಗ್ಲೆಂಡ್ ವಿರುದ್ಧದ ಸರಣಿಯ ಮೂರನೇ ಪಂದ್ಯದಲ್ಲಿ 10 ವಿಕೆಟ್‌ಗಳ ಗೆಲುವು ಸಾಧಿಸುವ ಮೂಲಕ ಭಾರತ 2-1 ಅಂತರದ ಮುನ್ನಡೆಯನ್ನು ಕಾಯ್ದುಕೊಂಡಿದೆ. ಈ ಹಿನ್ನೆಲೆಯಲ್ಲಿ ಮ್ಯಾಥ್ಯೂ ಹೇಡನ್ ಪಿಟಿಐ ಗೆ ನೀಡಿದ ಪ್ರತಿಕ್ರಿಯೆಯಲ್ಲಿ ಉತ್ತರಿಸಿದ್ದಾರೆ.

ಗೆಲುವಿನ ಕ್ಷಣ ಉಳಿಸಿಕೊಳ್ಳಲು ಇಂಗ್ಲೆಂಡ್ ವಿಫಲ
"ಇಂಗ್ಲೆಂಡ್ ಸರಣಿಯ ಮೊದಲ ಪಂದ್ಯದಲ್ಲಿ ಅದ್ಭುತವಾದ ಗೆಲುವನ್ನು ಸಾಧಿಸಿದ ಬಳಿಕ ಆ ಗೆಲುವಿನ ಕ್ಷಣಗಳನ್ನು ಉಳಿಸಿಕೊಳ್ಳುವಲ್ಲಿ ವಿಫಲವಾಯಿತು. ಆಸ್ಟ್ರೇಲಿಯಾ ತಂಡವು ಕೂಡ ತನ್ನ ಸರಣಿಯಲ್ಲಿ ಇದೇ ಪರಿಸ್ಥಿತಿಯನ್ನು ಎದುರಿಸಿತ್ತು. ಹೀಗಾಗಿ ಸೋಲು ಕಂಡಿತ್ತು. ಮೊದಲ ಇನ್ನಿಂಗ್ಸ್‌ನಲ್ಲಿ ಬೃಹತ್ ಮೊತ್ತವನ್ನು ಕಲೆಹಾಕಲು ತಂಡ ವಿಫಲವಾಯಿತು" ಎಂದು ಹೇಡನ್ ಹೇಳಿದ್ದಾರೆ.

ಆಸ್ಟ್ರೇಲಿಯಾದಲ್ಲಿ ಸಾಕಷ್ಟು ಯುವ ಪ್ರತಿಭೆಗಳಿದ್ದಾರೆ
ಇನ್ನು ಇದೇ ಸಂದರ್ಭದಲ್ಲಿ ಆಸಿಸ್ ಮಾಜಿ ಆಟಗಾರನಿಗೆ ಆಸ್ಟ್ರೇಲಿಯಾ ತಂಡ ಸಮರ್ಥ ಯುವ ಆಟಗಾರರನ್ನು ಹುಡುಕುವಲ್ಲಿ ವಿಫಲವಾಗುತ್ತಿದೆಯೇ ಎಂದು ಪ್ರಶ್ನೆಯನ್ನು ಕೇಳಲಾಯಿತು. ಇದಕ್ಕೆ ಮ್ಯಾಥ್ಯೂ ಹೇಡನ್ "ಖಂಡಿಯಾ ಇಲ್ಲ, ಆಸ್ಟ್ರೇಲಿಯಾ ದೇಶೀಯ ಕ್ರಿಕೆಟ್‌ನಲ್ಲಿ ಹಾಗೂ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಉತ್ತಮ ಪ್ರತಿಭೆಗಳನ್ನು ಸಾಕಷ್ಟು ಹೊಂದಿದೆ" ಎಂದು ಉತ್ತರಿಸಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications