For Quick Alerts
ALLOW NOTIFICATIONS  
For Daily Alerts
 

IND vs ENG: ಭಾರತದಲ್ಲಿ ಇಂಗ್ಲೆಂಡ್ ತಂಡ ವೈಟ್‌ವಾಶ್!

ಭಾರತ ಮತ್ತು ಇಂಗ್ಲೆಂಡ್ ನಡುವಿನ 3 ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯಿತು. ಈ ಪಂದ್ಯದಲ್ಲಿ ಟೀಮ್ ಇಂಡಿಯಾ 142 ರನ್‌ಗಳಿಂದ ಜಯಗಳಿಸಿದೆ. ಈ ಮೂಲಕ ಭಾರತ ಏಕದಿನ ಸರಣಿಯನ್ನು 3-0 ಅಂತರದಿಂದ ಗೆದ್ದಿದೆ. ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಭಾರತ ತಂಡಕ್ಕೆ ಈ ಗೆಲುವು ಮನೋಸ್ಥೈರ್ಯ ತುಂಬಿದೆ. ಆಸ್ಟ್ರೇಲಿಯಾದಲ್ಲಿ ಟೆಸ್ಟ್ ಸರಣಿಯನ್ನು ಸೋತ ನಂತರ ರೋಹಿತ್ ಶರ್ಮಾ ಪಡೆಗೆ ಈ ಗೆಲುವು ಬಹಳ ಮುಖ್ಯವಾಗಿದೆ.

ಮೂರನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ ನಾಯಕ ಜೋಸ್ ಬಟ್ಲರ್ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದರು. ಮೊದಲು ಬ್ಯಾಟಿಂಗ್ ಮಾಡಿದ ಭಾರತ 50 ಓವರ್‌ಗಳಲ್ಲಿ 356 ರನ್‌ಗಳಿಗೆ ಆಲೌಟ್ ಆಯಿತು. ಭಾರತ ನೀಡಿದ 357 ರನ್‌ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ 34.2 ಓವರ್‌ಗಳಲ್ಲಿ 214 ರನ್‌ಗಳಿಗೆ ಆಲೌಟ್ ಆಯಿತು. ಭಾರತದ ಪರ ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ಮತ್ತು ಹಾರ್ದಿಕ್ ಪಾಂಡ್ಯ ತಲಾ 2 ವಿಕೆಟ್‌ ಪಡೆದರು.

India clean sweep ODI series against England in Home

ಇಂಗ್ಲೆಂಡ್ ಪರ ಎಂಟನೇ ಸ್ಥಾನದಲ್ಲಿ ಬ್ಯಾಟಿಂಗ್ ಮಾಡಲು ಬಂದ ಗಸ್ ಅಟ್ಕಿನ್ಸನ್ ಮತ್ತು ಟಾಮ್ ಬ್ಯಾಂಟನ್ ಇಬ್ಬರೂ ತಲಾ 38 ರನ್ ಗಳಿಸಿದರು. ಇವರಿಬ್ಬರನ್ನು ಹೊರತುಪಡಿಸಿ, ಆರಂಭಿಕ ಬ್ಯಾಟರ್ ಬೆನ್ ಡಕೆಟ್ (34) ಮಾತ್ರ 30 ರನ್‌ಗಳ ಗಡಿ ದಾಟಲು ಸಾಧ್ಯವಾಯಿತು.

2011 ರಿಂದೀಚೆಗೆ, ಭಾರತ ತಂಡವು ಇಂಗ್ಲೆಂಡ್ ವಿರುದ್ಧದ ಎಲ್ಲಾ ಏಕದಿನ ಸರಣಿಗಳನ್ನು 3 ಅಥವಾ ಅದಕ್ಕಿಂತ ಹೆಚ್ಚು ಪಂದ್ಯಗಳಿಂದ ಗೆದ್ದಿದೆ. ಕೊನೆಯ ಬಾರಿಗೆ 2011-12ರಲ್ಲಿ ಟೀಮ್ ಇಂಡಿಯಾ ತವರು ನೆಲದಲ್ಲಿ ನಡೆದ 5 ಪಂದ್ಯಗಳ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಅನ್ನು 5-0 ಅಂತರದಿಂದ ಸೋಲಿಸಿತ್ತು. 1984 ರ ನಂತರ ಟೀಮ್ ಇಂಡಿಯಾ ತನ್ನ ತವರು ನೆಲದಲ್ಲಿ ಇಂಗ್ಲೆಂಡ್ ವಿರುದ್ಧ ಒಂದೇ ಒಂದು ಏಕದಿನ ಸರಣಿಯನ್ನು ಸೋತಿಲ್ಲ. ಇದೀಗ ಆ ಅನುಕ್ರಮ ಮುಂದುವರೆದಿದೆ.

ಇದಕ್ಕೂ ಮುನ್ನ ಭಾರತ ಪರ ಶುಭಮನ್ ಗಿಲ್ ( 112) ಶತಕ ಬಾರಿಸಿದರೆ, ವಿರಾಟ್ ಕೊಹ್ಲಿ (52) ಮತ್ತು ಶ್ರೇಯಸ್ ಅಯ್ಯರ್ (78) ಅಯ್ಯರ್ ಅರ್ಧಶತಕ ಗಳಿಸಿದ್ದರು. ಇಂಗ್ಲೆಂಡ್ ಪರ ಸ್ಪಿನ್ನರ್ ಆದಿಲ್ ರಶೀದ್, 10 ಓವರ್‌ಗಳಲ್ಲಿ 64 ರನ್‌ಗಳಿಗೆ 4 ವಿಕೆಟ್‌ಗಳನ್ನು ಕಬಳಿಸಿದರು.

ಚಾಂಪಿಯನ್ಸ್ ಟ್ರೋಫಿ 2025ರಲ್ಲಿ ಭಾರತ ತನ್ನ ಮೊದಲ ಪಂದ್ಯವನ್ನು ಫೆಬ್ರವರಿ 20 ರಂದು ಬಾಂಗ್ಲಾದೇಶ ವಿರುದ್ಧ ಆಡಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಸ್ಟಾರ್ಸ್‌ ಫಾರ್ಮ್‌ಗೆ ಮರಳಿರುವುದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ತಂತಸ ತರಿಸಿದೆ. ಜೊತೆಗೆ ಟೀಮ್ ಇಂಡಿಯಾ ಹೆಡ್‌ಕೋಚ್ ಗೌತಮ್ ಗಂಭೀರ್ ಮುಖದಲ್ಲಿ ಖುಷಿ ತಂದಿದೆ.

Story first published: Wednesday, February 12, 2025, 20:40 [IST]
Other articles published on Feb 12, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+