For Quick Alerts
ALLOW NOTIFICATIONS  
For Daily Alerts
 

Kabaddi World Cup: ಇಂಗ್ಲೆಂಡ್‌ ಮಣಿಸಿದ ಭಾರತ ಪುರುಷರ ಹಾಗೂ ಮಹಿಳಾ ತಂಡಗಳು ಚಾಂಪಿಯನ್

ಭಾರತದಲ್ಲಿ ಐಪಿಎಲ್‌ ನಡೆಯುತ್ತಿದೆ. ಕ್ರಿಕೆಟ್‌ ಹುಟ್ಟಿ ಬೆಳೆದ ನಾಡಿನಲ್ಲಿ ಕಬಡ್ಡಿ ಟೂರ್ನಿ ಮುಕ್ತಾಯವಾಗಿದೆ. ಇಂಗ್ಲೆಂಡ್‌ ನಡೆದ ಎರಡನೇ ಆವೃತ್ತಿಯ ವಿಶ್ವಕಪ್‌ ಕಬಡ್ಡಿ ಟೂರ್ನಿಯಲ್ಲಿ ಭಾರತ ತನ್ನ ಸ್ಥಿರ ಪ್ರದರ್ಶನವನ್ನು ಮುಂದುವರೆಸಿ, ಸತತ ಎರಡನೇ ಬಾರಿಗೆ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿದೆ. ಫೈನಲ್‌ ಪಂದ್ಯದಲ್ಲಿ ಭಾರತ ಪುರುಷರ ಹಾಗೂ ಮಹಿಳಾ ತಂಡಗಳು ಆತಿಥೇಯ ಇಂಗ್ಲೆಂಡ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟ ತಮ್ಮದಾಗಿಸಿಕೊಂಡವು.

ಭಾನುವಾರ ನಡೆದ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಭಾರತೀಯ ಮಹಿಳಾ ಕಬಡ್ಡಿ ತಂಡವು ಅಂತಿಮ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ಅನ್ನು 57-34 ಅಂತರದಿಂದ ಸೋಲಿಸಿದರೆ, ಪುರುಷರ ತಂಡ 44-41 ಅಂತರದಿಂದ ಫೈನಲ್‌ನಲ್ಲಿ ಇಂಗ್ಲೆಂಡ್ ಮಣಿಸಿತು. ಈ ಮೂಲಕ ಭಾರತ ಟೂರ್ನಿಯಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿ ಪ್ರಶಸ್ತಿಯನ್ನು ಗೆದ್ದಿ ಬೀಗಿದೆ.

India Clinches Back-to-Back Kabaddi World Cup Titles with Dominant Wins Over England

ಲೀಗ್‌ ಹಂತದ ಗುಂಪು ಗುಂಪು ಹಂತದಲ್ಲಿ ಇಟಲಿ, ಹಾಂಗ್ ಕಾಂಗ್ ಮತ್ತು ವೇಲ್ಸ್ ತಂಡಗಳನ್ನು ಸೋಲಿಸಿದ್ದ ಭಾರತ ತಂಡ ಸ್ಕಾಟ್ಲೆಂಡ್ ವಿರುದ್ಧ ಡ್ರಾ ಮಾಡಿಕೊಳ್ಳುವ ಮೂಲಕ ನಾಕೌಟ್ ಪ್ರವೇಶಿಸಿತು. ಭಾರತ ಎಂಟರ ಘಟ್ಟದ ಪಂದ್ಯದಲ್ಲಿ 69-24 ರಿಂದ ಹಂಗೇರಿಯನ್ ತಂಡವನ್ನು ಮಣಿಸಿ, ಸೆಮಿಫೈನಲ್‌ಗೆ ಪ್ರವೇಶ ಪಡೆಯಿತು. ಇನ್ನು ನಾಲ್ಕರ ಘಟ್ಟದ ಪಂದ್ಯದಲ್ಲಿ ಭಾರತ 93-37 ಅಂತರದಿಂದ ವೇಲ್ಸ್ ತಂಡವನ್ನು ಸೋಲಿಸಿ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆಯಿತು. ಫೈನಲ್‌ನಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ ಪ್ರಶಸ್ತಿಗೆ ಮುತ್ತಿಟ್ಟಿತು.

ಪುರುಷರಂತೆ ಮಹಿಳಾ ಕಬಡ್ಡಿ ಆಟಗಾರ್ತಿಯರು ಈ ಟೂರ್ನಿಯಲ್ಲಿ ತಮ್ಮ ಪ್ರಾಬಲ್ಯ ಸಾಧಿಸಿತು. ಮಹಿಳಾ ತಂಡ ಗುಂಪು ಹಂತದಲ್ಲಿ 89-18 ಅಂತರದಿಂದ ವೇಲ್ಸ್ ತಂಡವನ್ನು, 104-15 ಅಂತರದಿಂದ ಪೋಲೆಂಡ್ ತಂಡವನ್ನು ಮಣಿಸಿ ಅಬ್ಬರಿಸಿತು. ಸೆಮಿಫೈನಲ್‌ನಲ್ಲಿ ಭಾರತ ಮಹಿಳಾ ತಂಡ 53-15 ಅಂತರದಿಂದ ಹಾಂಗ್ ಕಾಂಗ್ ಮಣಿಸಿ ಪ್ರಶಸ್ತಿ ಸುತ್ತಿಗೆ ಅರ್ಹತೆ ಪಡೆಯಿತು. ಫೈನಲ್‌ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಭಾರತ 57-34 ಅಂತರದಿಂದ ಆತಿಥೇಯ ಇಂಗ್ಲೆಂಡ್ ತಂಡವನ್ನು ಮಣಿಸಿತು.

Story first published: Monday, March 24, 2025, 1:50 [IST]
Other articles published on Mar 24, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+