For Quick Alerts
ALLOW NOTIFICATIONS  
For Daily Alerts
 

Champions Trophy Winners List: 3 ಬಾರಿ ಟ್ರೋಫಿ ಗೆದ್ದ ಭಾರತ: ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡಗಳ ವಿವರ

ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಣ ಚಾಂಪಿಯನ್ಸ್ ಟ್ರೋಫಿ ಫೈನಲ್‌ ಪಂದ್ಯವನ್ನು ರೋಹಿತ್ ಶರ್ಮಾ ಪಡೆ ಜಯ ಸಾಧಿಸಿದೆ. ಈ ಮೂಲಕ ಟೀಮ್ ಇಂಡಿಯಾ ಇತಿಹಾಸ ನಿರ್ಮಿಸಿದೆ ಚಾಂಪಿಯನ್ಸ್ ಟ್ರೋಫಿಯನ್ನು ಹೆಚ್ಚು ಬಾರಿ ಗೆದ್ದ ಹೆಗ್ಗಳಿಕೆಯನ್ನು ತನ್ನದಾಗಿಸಿಕೊಂಡಿದೆ. ಐಸಿಸಿ ಏಕದಿನ ಚಾಂಪಿಯನ್ಸ್‌ ಟ್ರೋಫಿಯನ್ನು ಭಾರತ ಮೂರನೇ ಬಾರಿಗೆ ಗೆದ್ದು ಬೀಗಿದೆ. ಈ ಮೂಲಕ ಇತಿಹಾಸದ ಪುಟಕ್ಕೆ ಎಂಟ್ರಿ ನೀಡಿದೆ.

ದುಬೈನಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನ್ಯೂಜಿಲೆಂಡ್ 50 ಓವರ್‌ಗಳಲ್ಲಿ 7 ವಿಕೆಟ್‌ಗೆ 251 ರನ್‌ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 49 ಓವರ್‌ಗಳಲ್ಲಿ 6 ವಿಕೆಟ್‌ಗೆ 254 ರನ್‌ ಸೇರಿಸಿ ಜಯ ಸಾಧಿಸಿತು. ಈ ಮೂಲಕ ದಾಖಲೆಯ ಮೂರನೇ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿತು.

India Clinches Third Champions Trophy Title in 2025 A Look at All Past Winners

ಒಂಬತ್ತು ಬಾರಿ ಚಾಂಪಿಯನ್ಸ್ ಟ್ರೋಫಿ ಆಡಲಾಗಿದೆ. ಇದರಲ್ಲಿ ಭಾರತ ತಂಡ ಒಟ್ಟಾರೆ ಮೂರು ಬಾರಿ ಚಾಂಪಿಯನ್ಸ್ ಟ್ರೋಫಿ ಗೆದ್ದಿದೆ. 2002ರಲ್ಲಿ ಟೀಮ್ ಇಂಡಿಯಾ ಮೊದಲ ಬಾರಿಗೆ ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟ ದಾಖಲೆಯನ್ನು ತನ್ನದಾಗಿಸಿಕೊಂಡಿದೆ. ಈ ವೇಳೆ ಶ್ರೀಲಂಕಾ ಹಾಗೂ ಭಾರತ ತಂಡಗಳ ನಡುವಿನ ಪಂದ್ಯಕ್ಕೆ ಮಳೆ ಕಾಟ ನೀಡಿದ್ದರಿಂದ ಜಂಟಿ ವಿಜೇತರನ್ನು ಘೋಷಿಸಲಾಯಿತು. ಈ ವೇಳೆ ಟೀಮ್ ಇಂಡಿಯಾ ಮೊದಲ ಬಾರಿಗೆ ಟ್ರೋಫಿಗೆ ಮುತ್ತಿಟ್ಟಿತ್ತು.

2013ರಲ್ಲಿ ಚಾಂಪಿಯನ್

ಮಹೇಂದ್ರ ಸಿಂಗ್ ಧೋನಿ ಮುಂದಾಳತ್ವದಲ್ಲಿ ಟೀಮ್ ಇಂಡಿಯಾ ಅಮೋಘ ಪ್ರದರ್ಶನ ನೀಡಿ ಚಾಂಪಿಯನ್‌ ಪಟ್ಟವನ್ನು ಅಲಂಕರಿಸಿತು. ಮಳೆ ಬಾಧಿತ ಪಂದ್ಯವನ್ನು 20 ಒವರ್‌ಗಳಿಗೆ ಇಳಿಸಿದಾಗ ಮೊದಲು ಬ್ಯಾಟ್ ಮಾಡಿದ ಭಾರತ ನಿಗದಿತ ಓವರ್‌ಗಳಲ್ಲಿ 7 ವಿಕೆಟ್‌ಗೆ 129 ರನ್‌ ಸೇರಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಇಂಗ್ಲೆಂಡ್‌ 20 ಓವರ್‌ಗಳಲ್ಲಿ 8 ವಿಕೆಟ್‌ಗೆ 124 ರನ್‌ ಸೇರಿಸಿ ಸೋಲು ಕಂಡಿತು. ಈ ಮೂಲಕ ಟೀಮ್ ಇಂಡಿಯಾ 5 ರನ್‌ಗಳಿಂದ ಪಂದ್ಯವನ್ನು ಗೆದ್ದು ಎರಡನೇ ಬಾರಿಗೆ ಚಾಂಪಿಯನ್ಸ್‌ ಟ್ರೋಫಿ ಎತ್ತಿ ಸಂಭ್ರಮಿಸಿತು.

ಬ್ಯಾಕ್‌ ಟು ಬ್ಯಾಕ್‌ ಟ್ರೋಫಿ ಗೆದ್ದ ಆಸ್ಟ್ರೇಲಿಯಾ

2006ರಲ್ಲಿ ಭಾರತದಲ್ಲಿ ನಡೆದಿದ್ದ ಚಾಂಪಿಯನ್ಸ್ ಟ್ರೋಫಿಯನ್ನು ಆಸ್ಟ್ರೇಲಿಯಾ ಗೆದ್ದುಕೊಂಡಿತ್ತು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಆಸ್ಟ್ರೇಲಿಯಾ, ವೆಸ್ಟ್‌ ಇಂಡೀಸ್ ತಂಡವನ್ನು ಮಣಿಸಿ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ದಕ್ಷಿಣ ಆಫ್ರಿಕಾದಲ್ಲಿ ನಡೆದಿದ್ದ ಚಾಂಪಿಯನ್ಸ್‌ ಟ್ರೋಫಿಯ ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಆಸೀಸ್‌ 6 ವಿಕೆಟ್‌ಗಳಿಂದ ನ್ಯೂಜಿಲೆಂಡ್ ತಂಡವನ್ನು ಮಣಿಸಿ, ಸತತ ಎರಡು ಬಾರಿ ಟ್ರೋಫಿ ಗೆದ್ದು ಬೀಗಿತು.

ಚಾಂಪಿಯನ್ಸ್ ಟ್ರೋಫಿ ಗೆದ್ದ ತಂಡಗಳ ವಿವರ

  • 1998, ದಕ್ಷಿಣ ಆಫ್ರಿಕಾ
  • 2000, ನ್ಯೂಜಿಲೆಂಡ್‌
  • 2002, ಭಾರತ/ ಶ್ರೀಲಂಕಾ
  • 2004, ವೆಸ್ಟ್ ಇಂಡೀಸ್‌
  • 2006, ಆಸ್ಟ್ರೇಲಿಯಾ
  • 2009, ಆಸ್ಟ್ರೇಲಿಯಾ
  • 2013, ಭಾರತ
  • 2017, ಪಾಕಿಸ್ತಾನ
  • 2025, ಭಾರತ

Story first published: Sunday, March 9, 2025, 22:13 [IST]
Other articles published on Mar 9, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+