IND vs WI: ಇನಿಂಗ್ಸ್ ಹಾಗೂ 140 ರನ್ ಜಯ ಸಾಧಿಸಿದ ಭಾರತ; ಸರಣಿಯಲ್ಲಿ 1-0 ಮುನ್ನಡೆ
ಭರವಸೆಯ ಆಟಗಾರರಾದ ರವೀಂದ್ರ ಜಡೇಜಾ ಹಾಗೂ ಮೊಹಮ್ಮದ್ ಸಿರಾಜ್ ಅವರ ಬಿಗುವಿನ ದಾಳಿಯ ನೆರವಿನಿಂದ ಟೀಮ್ ಇಂಡಿಯಾ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 140 ರನ್‌ಗಳಿಂದ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ 2 ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸಾಧಿಸಿದೆ.
ಶನಿವಾರ ಮೂರನೇ ದಿನದಾಟದ ಆಟವನ್ನು ಆರಂಭಿಸುವ ಮುನ್ನ ಟೀಮ್ ಇಂಡಿಯಾ 5 ವಿಕೆಟ್‌ಗೆ 448 ರನ್‌ಗಳಿಗೆ ಆಟವನ್ನು ಡಿಕ್ಲೇರ್ ಮಾಡಿಕೊಂಡಿತು. ಎರಡನೇ ಇನಿಂಗ್ಸ್ ಮುಂದುವರೆಸಿದ ವೆಸ್ಟ್ ಇಂಡೀಸ್ 146 ರನ್‌ಗಳಿಗೆ ಆಲೌಟ್ ಆಯಿತು. ಈ ಮೂಲಕ ವಿಂಡಿಸ್ ಎರಡನೇ ಇನಿಂಗ್ಸ್‌ನಲ್ಲೂ ಪುಟಿದೇಳುವ ಆಸೆಯನ್ನು ಕೈ ಬಿಟ್ಟಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಭಾರತ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆದಿದೆ.

ಬುಧವಾರ ಎರಡನೇ ಇನಿಂಗ್ಸ್ ಆರಂಭಿಸಿದ ವಿಂಡೀಸ್ ಮೊದಲಾವಧಿಯ ಆಟದಲ್ಲಿ ಉತ್ತಮ ಆಟವನ್ನು ಆಡುವಲ್ಲಿ ವಿಫಲರಾದರು. ಭೋಜನ ವಿರಾಮದ ವೇಳೆಗೆ ವೆಸ್ಟ್ ಇಂಡೀಸ್ ತಂಡದ ಅರ್ಧ ತಂಡ ಆಗಲೇ ಡ್ರೆಸ್ಸಿಂಗ್ ರೂಮ್‌ನತ್ತ ಮುಖ ಮಾಡಿ ಆಗಿತ್ತು. ಈ ಅವಧಿಯಲ್ಲಿ ಟೀಮ್ ಇಂಡಿಯಾದ ಸ್ಪಿನ್ ಬೌಲರ್ಸ್ ಸ್ಥಿರ ಪ್ರದರ್ಶನ ನೀಡಿ ಅಬ್ಬರಿಸಿದರು. ಇನ್ನು ಡ್ರಿಂಕ್ಸ್ ಅವಧಿಯ ವೇಳೆಗೆ ವಿಂಡೀಸ್ 8 ವಿಕೆಟ್ ಕಳೆದುಕೊಂಡಿತ್ತು. ಅಲಿಕ್ ಅಥನೇಜ್ 38, ಜಸ್ಟಿನ್ ಗ್ರೀವ್ಸ್ 25, ಖಾರಿ ಪಿಯರೆ 13, ಜಾನ್ ಕ್ಯಾಂಪ್‌ಬೆಲ್ 14, ಜೇಡನ್ ಸೀಲ್ಸ್ 22, ಮಾತ್ರ ರನ್ ಕಲೆ ಹಾಕಿದರು. ಉಳಿದ ಬ್ಯಾಟರ್‌ಗಳು ರನ್ ಬರವನ್ನು ಅನುಭವಿಸಿದರು.
ಬೌಲರ್ಸ್ ಅಬ್ಬರ
ಟೀಮ್ ಇಂಡಿಯಾದ ಪರ ವೇಗದ ಬೌಲರ್ ಮೊಹಮ್ಮದ್ ಸಿರಾಜ್ ಇದೇ ಮೊದಲ ಬಾರಿಗೆ ಭಾರತದಲ್ಲಿ ನಡೆದ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್‌ನಲ್ಲಿ ಮೊದಲ ವಿಕೆಟ್ ಪಡೆದರು. ಇವರು ಎರಡನೇ ಇನಿಂಗ್ಸ್‌ನಲ್ಲಿ 31 ರನ್‌ಗೆ 3 ವಿಕೆಟ್ ಪಡೆದರು. ಸ್ಪಿನ್ ಬೌಲರ್ ರವೀಂದ್ರ ಜಡೇಜಾ 54 ರನ್‌ಗಳಿಗೆ 4 ವಿಕೆಟ್ ಕಬಳಿಸಿದರು. ಕುಲ್‌ದೀಪ್ ಯಾದವ್ 2, ವಾಷಿಂಗ್ಟನ್ ಸುಂದರ್ 1 ವಿಕೆಟ್ ಉರುಳಿಸಿದರು.
ಬ್ಯಾಟಿಂಗ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಟೀಮ್ ಇಂಡಿಯಾದ ಆಲ್‌ರೌಂಡರ್ ರವೀಂದ್ರ ಜಡೇಜಾ, ಬೌಲಿಂಗ್‌ನಲ್ಲೂ ಮಿಂಚಿದರು. ಇವರ ಕ್ಲಾಸಿಕ್ ಆಟಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿ ಲಭಿಸಿತು.
WTC ಅಂಕಪಟ್ಟಿಯಲ್ಲಿ ಭಾರತದ ಸ್ಥಾನ
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನ ಅಂಕ ಪಟ್ಟಿಯಲ್ಲಿ ಭಾರತ ಸುಧಾರಣೆ ಕಂಡಿದೆ. ವಿಂಡೀಸ್ ವಿರುದ್ಧದ ಭರ್ಜರಿ ಗೆಲುವಿನ ನಂತರ ಭಾರತದ ಅಂಕ ಪಟ್ಟಿಯಲ್ಲಿ ಬಡ್ತಿ ಪಡೆಯದೇ ಇದ್ದರೂ ಸಹ ಮೂರನೇ ಸ್ಥಾನವನ್ನು ಭಧ್ರ ಪಡಿಸಿಕೊಂಡಿದೆ. ಅಲ್ಲದೆ ಗೆಲುವಿನ ಶೇಕಡಾ ವಾರು ಹೆಚ್ಚಿಸಿಕೊಂಡಿದೆ. ಈ ಸರಣಿ ಆರಂಭವಾಗುವುದಕ್ಕೂ ಮುನ್ನ ಭಾರತದ ಗೆಲುವಿನ ಶೆಕಡಾ 46.67 ಇತ್ತು. ಮೊದಲ ಟೆಸ್ಟ್ ಪಂದ್ಯವನ್ನು ಗೆದ್ದ ಬಳಿಕ ಇದು 55.56 ಏರಿಕೆ ಆಗಿದೆ. ಭಾರತ ಇಲ್ಲಿಯವರೆಗೆ ಆರು ಪಂದ್ಯಗಳನ್ನು ಆಡಿದ್ದು, ಮೂರರಲ್ಲಿ ಜಯ ಸಾಧಿಸಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications