ಇಂಗ್ಲೆಂಡ್ ವಿರುಧ್ದದ ಟಿ20 ಸರಣಿಗೆ ಅಶ್ವಿನ್, ಜಡೇಜ ಇಲ್ಲ!
ಬೆಂಗಳೂರು, ಜನವರಿ 23: ಟೀಂ ಇಂಡಿಯಾದ ಹಿರಿಯ ಆಟಗಾರರಾದ ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜ ಅವರಿಗೆ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯಿಂದ ವಿಶ್ರಾಂತಿ ನೀಡಲಾಗಿದೆ.
ಮುಂಬರುವ ಬಾಂಗ್ಲಾದೇಶ ಹಾಗೂ ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ಈ ಕ್ರಮ ಜರುಗಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಸೋಮವಾರ ಪ್ರಕಟಿಸಿದೆ.[ಬೆಂಗಳೂರಿನಲ್ಲಿ ಟಿ20, ಟಿಕೆಟ್ ಮಾರಾಟ ಯಾವಾಗ?]

ಟಿ20 ಪಂದ್ಯಕ್ಕೆ ತಂಡ : ವಿರಾಟ್ ಕೊಹ್ಲಿ (ನಾಯಕ), ಎಂಎಸ್ ಧೋನಿ( ವಿಕೆಟ್ ಕೀಪರ್), ಕೆಎಲ್ ರಾಹುಲ್, ಮನ್ದೀಪ್ ಸಿಂಗ್, ಯುವರಾಜ್ ಸಿಂಗ್, ಸುರೇಶ್ ರೈನಾ, ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ, ಯಜುವೇಂದ್ರ ಚಾಹಲ್, ಮನೀಶ್ ಪಾಂಡೆ, ಜಸ್ಪ್ರೀತ್ ಬೂಮ್ರಾ, ಭುವನೇಶ್ವರ್ ಕುಮಾರ್, ಆಶೀಶ್ ನೆಹ್ರಾ.[ಟಿ20 ಸರಣಿಗೆ ಫುಲ್ ಗೈಡ್]
ಇಂಗ್ಲೆಂಡ್ : ಇಯಾನ್ ಮಾರ್ಗನ್(ನಾಯಕ), ಮೋಯಿನ್ ಅಲಿ, ಜೇಕ್ ಬಾಲ್, ಸ್ಯಾಮ್ ಬಿಲ್ಲಿಂಗ್ಸ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಲಿಯಾಮ್ ಡಾಸನ್, ಅಲೆಕ್ಸ್ ಹೇಲ್ಸ್, ಕ್ರಿಸ್ ಜೋರ್ಡನ್, ಟಿಮಾಲ್ ಮಿಲ್ಸ್,ಲಿಯಾನ್ ಪ್ಲಂಕೆಟ್, ಅದಿಲ್ ರಶೀದ್, ಜೋ ರೂಟ್, ಜಾಸನ್ ರಾಯ್, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ.
ಆರ್ ಅಶ್ವಿನ್ ಹಾಗೂ ರವೀಂದ್ರ ಜಡೇಜ ಬದಲಿಗೆ ಅಮಿತ್ ಮಿಶ್ರಾ ಹಾಗೂ ಪರ್ವೇಜ್ ರಸೂಲ್ ಅವರು ತಂಡವನ್ನು ಸೇರಲಿದ್ದಾರೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎಂಎಸ್ ಕೆ ಪ್ರಸಾದ್ ಹೇಳಿದರು. ಜನವರಿ 26 ರಂದು ಕಾನ್ಪುರ್ ನಲ್ಲಿ ಮೊದಲ ಟಿ20 ಪಂದ್ಯ ನಡೆಯಲಿದೆ. ಎಲ್ಲಾ ಪಂದ್ಯಗಳು ಸ್ಟಾರ್ ಸ್ಫೋರ್ಟ್ಸ್ ಟಿವಿ ನೆಟ್ವರ್ಕ್ ನಲ್ಲಿ ನೇರ ಪ್ರಸಾರವಾಗಲಿದೆ.[ಟೀಂ ಇಂಡಿಯಾಕ್ಕೆ ಸಿಕ್ತು ಸೂಪರ್ ಜರ್ಸಿ!]
ಮುಂದಿನ ತಿಂಗಳು ಹೈದರಾಬಾದಿನಲ್ಲಿ ಬಾಂಗ್ಲಾದೇಶ ವಿರುದ್ಧ ಭಾರತ ಏಕೈಕ ಟೆಸ್ಟ್ ಪಂದ್ಯವಾಡಲಿದೆ. ನಂತರ ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಾಲ್ಕು ಟೆಸ್ಟ್ ಪಂದ್ಯಗಳ ಸರಣಿ ನಿಗದಿಯಾಗಿದೆ. (ಒನ್ಇಂಡಿಯಾ ಸುದ್ದಿ)
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications