Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

T20 World Cup 2024: 10 ವರ್ಷಗಳ ನಂತರ ಟಿ20 ವಿಶ್ವಕಪ್‌ ಫೈನಲ್‌ ಪ್ರವೇಶಿಸಿದ ಟೀಮ್‌ ಇಂಡಿಯಾ; ಇತಿಹಾಸ ಮರುಕಳಿಸುವುದೇ?

ಜೂನ್‌ 28 ಶುಕ್ರವಾರ, ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ 2024ರ ಐಸಿಸಿ ಟಿ20 ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಜೋಸ್ ಬಟ್ಲರ್ ನೇತೃತ್ವದ ಇಂಗ್ಲೆಂಡ್ ತಂಡವನ್ನು 68 ರನ್‌ಗಳಿಂದ ಸೋಲಿಸುವ ಮೂಲಕ ಫೈನಲ್‌ಗೆ ಲಗ್ಗೆ ಇಟ್ಟಿದೆ.

10 ವರ್ಷಗಳ ಬಳಿಕ ಭಾರತ ತಂಡ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ ಪ್ರವೇಶಿಸಿದೆ. ಭಾರತ ಕೊನೆಯದಾಗಿ 10 ವರ್ಷಗಳ ಹಿಂದೆ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಅಂದರೆ 2014ರ ಟಿ20 ವಿಶ್ವಕಪ್‌ನಲ್ಲಿ ಆಡಿತ್ತು.

India entered the T20 World Cup final after 10 years

10 ವರ್ಷಗಳ ಹಿಂದೆ ಬಾಂಗ್ಲಾದೇಶ, ಭಾರತ ಮತ್ತು ಶ್ರೀಲಂಕಾ ಆತಿಥ್ಯ ವಹಿಸಿದ್ದ 2014ರ ಟಿ20 ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತ ತಂಡವು ಫೈನಲ್ ತಲುಪಿತ್ತು. ಈ ಟೂರ್ನಿಯಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 20 ಓವರ್‌ಗಳಲ್ಲಿ 4 ವಿಕೆಟ್ ಕಳೆದುಕೊಂಡು 130 ರನ್ ಗಳಿಸಿತು.

ಇದಕ್ಕೆ ಉತ್ತರವಾಗಿ ಶ್ರೀಲಂಕಾ 17.5 ಓವರ್‌ಗಳಲ್ಲಿ 5 ವಿಕೆಟ್‌ ಕಳೆದುಕೊಂಡು 134 ರನ್‌ ಗಳಿಸಿ 2014ರ ಟಿ20 ವಿಶ್ವಕಪ್‌ ಪ್ರಶಸ್ತಿ ಗೆದ್ದುಕೊಂಡಿತು. ಇದೀಗ 10 ವರ್ಷಗಳ ಬಳಿಕ ಭಾರತ ಮತ್ತೊಮ್ಮೆ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ಗೆ ತಲುಪಿದೆ.

ಜೂನ್‌ 29 ಭಾನುವಾರ ನಡೆಯಲಿರುವ ಟಿ20 ವಿಶ್ವಕಪ್‌ ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಭಾರತ ಎದುರಿಸಲಿದೆ. ಟೀಮ್‌ ಇಂಡಿಯಾ ಕಪ್‌ ಗೆಲ್ಲುವ ನೆಚ್ಚಿನ ತಂಡವಾಗಿದ್ದು, ಇತಿಹಾಸ ಮರುಕಳಿಸುವುದೇ ಎಂಬುದನ್ನು ಕಾದು ನೋಡಬೇಕಾಗಿದೆ.

ಆಂಗ್ಲರನ್ನು ಬಗ್ಗು ಬಡಿದ ಟೀಮ್‌ ಇಂಡಿಯಾ

2024ರ ಟಿ20 ವಿಶ್ವಕಪ್‌ನ ಸೆಮಿಫೈನಲ್‌ನಲ್ಲಿ ಭಾರತವು 68 ರನ್‌ಗಳಿಂದ ಇಂಗ್ಲೆಂಡ್ ಅನ್ನು ಸೋಲಿಸಿತು. ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿತು.

ಟೀಮ್ ಇಂಡಿಯಾ ಪರ ರೋಹಿತ್ ಶರ್ಮಾ 57 ರನ್ ಮತ್ತು ಸೂರ್ಯಕುಮಾರ್ ಯಾದವ್ 47 ರನ್ ಗಳಿಸಿದರು. ರೋಹಿತ್ ಶರ್ಮಾ ಜವಾಬ್ದಾರಿಯುತ ಬ್ಯಾಟಿಂಗ್‌ ಮಾಡಿ ತಂಡಕ್ಕೆ ಆಸರೆಯಾದರು.

ಇನ್ನೊಂದೆಡೆ ರೋಹಿತ್‌ ಅವರಿಗೆ ಸೂರ್ಯ ಸಾಥ್‌ ನೀಡಿದರು. ಅಂತಿಮವಾಗಿ ಹಾರ್ದಿಕ್ ಪಾಂಡ್ಯ ಕೂಡ 23 ರನ್ ಗಳಿಸಿ ತಂಡದ ಸ್ಕೋರ್ 171ಕ್ಕೆ ತಲುಪಲು ನೆರವಾದರು.

ಭಾರತ ನೀಡಿದ್ದ 172 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ತಂಡ 16.4 ಓವರ್‌ಗಳಲ್ಲಿ 103 ರನ್‌ಗಳಿಗೆ ಕುಸಿದಿತ್ತು. ಆಂಗ್ಲ ಬ್ಯಾಟರ್‌ಗಳು ಭಾರತದ ಸ್ಪಿನ್ನರ್‌ಗಳ ವಿರುದ್ಧ ರನ್‌ ಗಳಿಸಿಲು ಪರದಾಡಿದರು.

ಟೀಮ್‌ ಇಂಡಿಯಾ ಸ್ಪಿನ್ನರ್‌ಗಳು ಇಂಗ್ಲೆಂಡ್‌ನ ಬ್ಯಾಟರ್‌‌ಗಳಿಗೆ ಕ್ರೀಸ್‌ನಲ್ಲಿ ಹೆಚ್ಚು ಹೊತ್ತು ನೆಲೆಯೂರಲು ಅವಕಾಶ ನೀಡಲಿಲ್ಲ. ಪರಿಣಾಮ ಭಾರತ 68 ರನ್‌ಗಳಿಂದ ಪಂದ್ಯವನ್ನು ಗೆದ್ದಿತು.

ಈ ಮೂಲಕ 10 ವರ್ಷಗಳ ನಂತರ 2024ರ ಟಿ20 ವಿಶ್ವಕಪ್‌ನ ಫೈನಲ್‌ಗೆ ಪ್ರವೇಶಿಸಿತು. ಭಾರತದ ಪರ ಅಕ್ಸರ್ ಪಟೇಲ್ ಮತ್ತು ಕುಲದೀಪ್ ಯಾದವ್ ತಲಾ 3 ವಿಕೆಟ್ ಉರುಳಿಸಿ ಮಿಂಚಿದರು. ಇದಲ್ಲದೆ, ಜಸ್ಪ್ರೀತ್ ಬುಮ್ರಾ ಕೂಡ 2 ವಿಕೆಟ್ ಪಡೆದರು.

Story first published: Friday, June 28, 2024, 8:45 [IST]
Other articles published on Jun 28, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+