IND vs NZ: ಶ್ರೀಲಂಕಾ ಸರಣಿ ಆಯ್ತು: ಟೀಮ್ ಇಂಡಿಯಾದ ಮುಂದಿನ ಸರಣಿಯ ಸಂಪೂರ್ಣ ಮಾಹಿತಿ

ಟೀಮ್ ಇಂಡಿಯಾ ಈ ವರ್ಷ ಕೂಡ ಒಂದಾದ ಬಳಿಕ ಮತ್ತೊಂದರಂತೆ ಸಾಲು ಸಾಲು ದ್ವಿಪಕ್ಷಿಐ ಸರಣಿಯಲ್ಲಿ ಭಾಗಿಯಾಗಲಿದೆ. ಈ ವರ್ಷದ ಮೊದಲ ಸರಣಿಯನ್ನು ಶ್ರೀಲಂಕಾ ವಿರುದ್ಧ ಆಡಿದ್ದು ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ ಭರ್ಜರಿಯಾಗಿ ವೈಟ್‌ವಾಶ್ ಮಾಡಿದೆ. ಏಕದಿನ ಸರಣಿಗೂ ಮುನ್ನ ನಡೆದ ಟಿ20 ಸರಣಿ ಕೂಡ 2-1 ಅಂತರದಿಂದ ಭಾರತದ ವಶವಾಗಿದೆ. ಇದೀಗ ಶ್ರೀಲಂಕಾ ವಿರುದ್ಧ ಸರಣಿ ಮುಕ್ತಾಯವಾಗಿದ್ದು ಇದೀಗ ಮತ್ತೊಂದು ಸರಣಿಗೆ ಭಾರತ ತಂಡ ಸಜ್ಜಾಗಿದೆ.
ಟೀಮ್ ಇಂಡಿಯಾಗೆ ಮುಂದಿನ ಸರಣಿಯಲ್ಲಿ ಮುಖಾಮುಖಿಯಾಗಲಿ ಸಜ್ಜಾಗಿರುವುದು ನ್ಯೂಜಿಲೆಂಡ್ ತಂಡ. ಭಾರತದಲ್ಲಿ ಕಿವೀಸ್ ಪಡೆಯನ್ನು ಕೂಡ ಟೀಮ್ ಇಂಡಿಯಾ ಎದುರಿಸಲಿದ್ದು ಏಕದಿನ ಹಾಗೂ ಟಿ20 ಮಾದರಿಗಳ ಸರಣಿಯಲ್ಲಿ ಎರಡು ತಂಡಗಳು ಮುಖಾಮುಖಿಯಾಗಲಿದೆ. ಮೊದಲಿಗೆ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಎರಡು ತಂಡಗಳು ಮುಖಾಮುಖಿಯಾಗಲಿದ್ದು ಬಳಿಕ ಟಿ20 ಸರಣಿಯಲ್ಲಿ ಪರಸ್ಪರ ಸೆಣೆಸಾಡಲಿದೆ. ಈ ವೈಟ್‌ಬಾಲ್ ಸರಣಿಯ ಪ್ರಮುಖ ಮಹತ್ವದ ಮಾಹಿತಿಗಳು ಇಲ್ಲಿದೆ. ಮುಂದೆ ಓದಿ..

ಬುಧವಾರದಿಂದಲೇ ಆರಂಭವಾಗಲಿದೆ ಏಕದಿನ ಸರಣಿ
ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಇನ್ನು ಕೆಲವೇ ಗಂಟೆಗಳು ಬಾಕಿಯಿದೆ. ಜನವರಿ 18 ಬುಧವಾರದಿಂದಲೇ ಈ ಸರಣಿ ಆರಂಭವಾಗಲಿದೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯ ಹೈದರಾಬಾದ್‌ನಲ್ಲಿ ನಡೆಯಲಿದೆ. ಇನ್ನು ಈ ಸರಣಿಯ ಎರಡನೇ ಪಂದ್ಯ ಜನವರಿ 21 ಶನಿವಾರದಂದು ರಾಯ್‌ಪುರದಲ್ಲಿ ನಡೆಯಲಿದೆ. ಮೂರನೇ ಪಂದ್ಯ ಜನವರಿ 24 ಮಂಗಳವಾರ ಇಂದೋರ್‌ನಲ್ಲಿ ಆಯೋಜನೆಯಾಗಲಿದೆ. ಏಕದಿನ ಸರಣಿಯ ಮೂರು ಪಂದ್ಯಗಳು ಕೂಡ ಅಹರ್ನಿಶಿಯಾಗಿ ನಡೆಯಲಿದ್ದು ಧ್ಯಾಹ್ನ 1:30ಕ್ಕೆ ಆರಂಭವಾಗಲಿದೆ.

ಟಿ20 ಸರಣಿಯ ಮಾಹಿತಿ
ಇನ್ನು ಏಕದಿನ ಸರಣಿಯ ಬಳಿಕ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಟಿ20 ಸರಣಿಯಲ್ಲಿ ಮುಖಾಮುಖಿಯಾಗಲಿದೆ. ಮೊದಲ ಪಂದ್ಯ ಜನವರಿ 27ರಂದು ರಾಂಚಿಯ ಜೆಎಸ್‌ಸಿಎ ಕ್ರೀಡಾಂಗಣ ಆತಿಥ್ಯವಹಿಸಿದರೆ ಎರಡನೇ ಪಂದ್ಯ ಜನವರಿ 29 ಭಾನುವಾರದಂದು ನಡೆಯಲಿದೆ. ಲಕ್ನೋದ ಕ್ರೀಡಾಂಗಣದಲ್ಲಿ ಈ ಪಂದ್ಯ ಆಯೋಜನೆಯಾಗಲಿದೆ. ಇನ್ನು ಈ ಸರಣಿಯ ಅಂತಿಮ ಪಂದ್ಯ ಫೆಬ್ರವರಿ 1ರಂದು ನಡೆಯಲಿದ್ದು ಅಹ್ಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಆಯೋಜನೆಯಾಗಲಿದೆ. ಇನ್ನು ಟಿ20 ಸರಣಿಯ ಎಲ್ಲಾ ಪಂದ್ಯಗಳು ಕೂಡ ಸಂಜೆ 7 ಗಂಟೆಗೆ ಆರಂಭವಾಗಲಿದೆ.

ಏಕದಿನ ಸರಣಿಯಲ್ಲಿ ಭಾಗವಹಿಸುವ ಇತ್ತಂಡಗಳ ಸ್ಕ್ವಾಡ್
ಟೀಮ್ ಇಂಡಿಯಾ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಕೆಎಸ್ ಭರತ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪ ನಾಯಕ), ವಾಷಿಂಗ್ಟನ್ ಸುಂದರ್, ಶಹಬಾಜ್ ಅಹ್ಮದ್, ಶಾರ್ದೂಲ್ ಠಾಕೂರ್, ಯುಜ್ವೇಂದ್ರ ಚಹಾಲ್, ಕುಲದೀಪ್ ಯಾದವ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮ್ರಾನ್ ಮಲಿಕ್.
ನ್ಯೂಜಿಲೆಂಡ್: ಟಾಮ್ ಲ್ಯಾಥಮ್ (ನಾಯಕ), ಫಿನ್ ಅಲೆನ್, ಡೌಗ್ ಬ್ರೇಸ್ವೆಲ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಜಾಕೋಬ್ ಡಫಿ, ಲಾಕಿ ಫರ್ಗುಸನ್, ಡ್ಯಾರಿಲ್ ಮಿಚೆಲ್,
ಹೆನ್ರಿ ನಿಕೋಲ್ಸ್, ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್

ಟಿ20 ಸರಣಿಯಲ್ಲಿ ಭಾಗವಹಿಸುವ ಇತ್ತಂಡಗಳ ಸ್ಕ್ವಾಡ್
ಟೀಮ್ ಇಂಡಿಯಾ: ಹಾರ್ದಿಕ್ ಪಾಂಡ್ಯ (ನಾಯಕ), ಸೂರ್ಯಕುಮಾರ್ ಯಾದವ್ (ಉಪ ನಾಯಕ), ಇಶಾನ್ ಕಿಶನ್ (ವಿಕೆಟ್ ಕೀಪರ್), ಋತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ರಾಹುಲ್ ತ್ರಿಪಾಠಿ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯುಜುವೇಂದ್ರ ಚಹಾಲ್, ಅರ್ಶ್‌ದೀಪ್ ಸಿಂಗ್, ಉಮ್ರಾನ್ ಮಲಿಕ್, ಶಿವಂ ಮಾವಿ, ಪೃಥ್ವಿ ಶಾ, ಮುಖೇಶ್ ಕುಮಾರ್
ನ್ಯೂಜಿಲೆಂಡ್: ಮಿಚೆಲ್ ಸ್ಯಾಂಟ್ನರ್ (ನಾಯಕ), ಫಿನ್ ಅಲೆನ್, ಮೈಕೆಲ್ ಬ್ರೇಸ್ವೆಲ್, ಮಾರ್ಕ್ ಚಾಪ್ಮನ್, ಡೇನ್ ಕ್ಲೀವರ್, ಡೆವೊನ್ ಕಾನ್ವೇ, ಜಾಕೋಬ್ ಡಫ್ಫಿ, ಲಾಕಿ ಫರ್ಗುಸನ್, ಬೆನ್ ಲಿಸ್ಟರ್, ಡೇರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕೆಲ್ ರಿಪ್ಪನ್, ಹೆನ್ರಿ ಶಿಪ್ಲಿ, ಇಶ್ ಸೋಧಿ, ಬ್ಲೇರ್ ಟಿಕ್ನರ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications