For Quick Alerts
ALLOW NOTIFICATIONS  
For Daily Alerts
 

IND vs SA: ಹ್ಯಾಟ್ರಿಕ್‌ ಗೆಲುವಿನ ಕನಸಿನಲ್ಲಿ ಭಾರತ: ಬ್ರಿಟ್ಸ್, ಸ್ಮೃತಿ ಆಕರ್ಷಣೆ

ಮಹಿಳಾ ಏಕದಿನ ವಿಶ್ವಕಪ್‌ ರೋಚಕ ಘಟ್ಟ ತಲುಪಿದೆ. ಟೀಮ್ ಇಂಡಿಯಾ ಈ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡುತ್ತಿದೆ. ಆಡಿದ ಎರಡೂ ಪಂದ್ಯಗಳನ್ನು ಗೆದ್ದಿರುವ ಭಾರತ, ಹ್ಯಾಟ್ರಿಕ್‌ ಗೆಲುವಿನ ಕನಸು ಕಾಣುತ್ತಿದೆ. ವಿಶಾಖಪಟ್ಟಣಂನಲ್ಲಿ ಹರ್ಮನ್ ಪ್ರೀತ್‌ ಪಡೆ, ದಕ್ಷಿಣ ಆಫ್ರಿಕಾ ತಂಡದ ಸವಾಲು ಎದುರಿಸಲಿದೆ. ಉಭಯ ತಂಡಗಳು ಪ್ರಸಕ್ತ ಟೂರ್ನಿಯಲ್ಲಿ ಅಮೋಘ ಪ್ರದರ್ಶನ ನೀಡಿದ್ದು, ಜಿದ್ದಾಜಿದ್ದಿನ ಕದನವನ್ನು ನೋಡಬಹುದಾಗಿದೆ.

ಭಾರತ ಮಹಿಳಾ ಏಕದಿನ ಕ್ರಿಕೆಟ್‌ ಟೂರ್ನಿಯಲ್ಲಿ ಶ್ರೀಲಂಕಾ ವಿರುದ್ಧ ಆಡಿದ ಮೊದಲ ಪಂದ್ಯದಲ್ಲಿ ಜಯ ಸಾಧಿಸಿದ್ದು, ಎರಡನೇ ಪಂದ್ಯದಲ್ಲಿ ಪಾಕ್‌ ವಿರುದ್ಧ ಗೆಲುವು ದಾಖಲಿಸಿ ಈಗ ಅಂಕ ಪಟ್ಟಿಯಲ್ಲಿ 2ನೇ ಸ್ಥಾನದಲ್ಲಿದೆ. ಇಂಗ್ಲೆಂಡ್ ಆಡಿದ ಮೊದಲ ಪಂದ್ಯದದಲ್ಲಿ ಸೋಲು ಕಂಡಿರುವ ದಕ್ಷಿಣ ಆಫ್ರಿಕಾ, ಎರಡನೇ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಗೆಲುವು ದಾಖಲಿಸಿ ಅಬ್ಬರಿಸಿತ್ತು. ಹೀಗಾಗಿ ಉಭಯ ತಂಡಗಳು ಈ ಪಂದ್ಯದಲ್ಲಿ ಗೆಲುವು ದಾಖಲಿಸಲು ಪ್ಲ್ಯಾನ್ ಮಾಡಿಕೊಂಡಿವೆ.

India Eyes Hat-Trick vs South Africa in Women s World Cup Thriller Mandhana Under Pressure

ಟೀಮ್ ಇಂಡಿಯಾದ ಸ್ಟಾರ್‌ ಆಟಗಾರ್ತಿ ಸ್ಮೃತಿ ಮಂಧಾನ ಅವರು ಈ ಟೂರ್ನಿಯಲ್ಲಿ ತಮ್ಮ ಸ್ಥಿರ ಪ್ರದರ್ಶನ ನೀಡುವಲ್ಲಿ ವಿಫಲರಾಗಿದ್ದಾರೆ. ಮೂರನೇ ಪಂದ್ಯದಲ್ಲಿ ಇವರು ಜವಾಬ್ದಾರಿಯುತ ಆಟವನ್ನು ಆಡಬೇಕಿದೆ. ಇನ್ನು ಇನ್ನೋರ್ವ ಆಟಗಾರ್ತಿ ಪ್ರತಿಕಾ ರಾವಲ್‌ ಸಹ ಸಮಯೋಚಿತ ಪ್ರದರ್ಶನ ನೀಡುತ್ತಿದ್ದು ಇದೇ ಪ್ರದರ್ಶನವನ್ನು ಮುಂದುವರೆಸುವ ವಿಶ್ವಾಸವನ್ನು ಹೊಂದಿದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಹರ್ಲಿನ್‌ ಡಿಯೋಲ್‌, ಜೆಮಿಮಾ ರೋಡ್ರಿಗಸ್‌, ಹರ್ಮನ್ ಪ್ರಿತ್ ಕೌರ್‌ ತಮ್ಮ ಘನತೆಗೆ ತಕ್ಕ ಆಟವನ್ನು ಆಡಬೇಕಿದೆ. ಅಂದಾಗ ಮಾತ್ರ ದೊಡ್ಡ ಮೊತ್ತದ ಕನಸು ನನಸಾಗುತ್ತದೆ.

ದೀಪ್ತಿ ಆಕರ್ಷಣೆ

ಪಾಕ್‌ ವಿರುದ್ಧದ ಪಂದ್ಯದಲ್ಲಿ ಅಲಭ್ಯರಾಗಿದ್ದ ಅಮನ್‌ಜೋತ್ ಕೌರ್‌ ಈ ಪಂದ್ಯದಲ್ಲಿ ಕಣಕ್ಕೆ ಇಳಿಯುತ್ತಾರಾ ಎಂಬ ಬಗ್ಗೆ ಪ್ರಶ್ನೆಗಳು ಮೂಡಿವೆ. ಆಲ್‌ರೌಂಡರ್ ದೀಪ್ತಿ ಶರ್ಮಾ ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡದ ಗೆಲುವಿನಲ್ಲಿ ಮಿಂಚುತ್ತಿದ್ದ ಭರವಸೆ ಮೂಡಿಸಿದ್ದಾರೆ. ಯುವ ವೇಗದ ಬೌಲರ್‌ ಕ್ರಾಂತಿ ಗೌಡ ಬಿಗುವಿನ ದಾಳಿ ನಡೆಸುತ್ತಿದ್ದು, ಎದುರಾಳಿಗಳಿಗೆ ನಡುಕ ಹುಟ್ಟಿಸಿದ್ದಾರೆ. ಸ್ನೇಹಾ ರಾಣಾ, ಶ್ರೀ ಚರಣಿ ತಮ್ಮ ಮೇಲೆ ತಂಡ ಇಟ್ಟ ನಂಬಿಕೆಗೆ ಪೂರಕವಾಗಿ ಆಡಬೇಕಿದೆ.

India Eyes Hat-Trick vs South Africa in Women s World Cup Thriller Mandhana Under Pressure

ದಕ್ಷಿಣ ಆಫ್ರಿಕಾ ತಂಡದಲ್ಲೂ ಸ್ಟಾರ್ ಆಟಗಾರರು ಇದ್ದಾರೆ. ಇವರು ತಂಡದ ಗೆಲುವಿನಲ್ಲಿ ಮಹತ್ವದ ಕಾಣಿಕೆ ನೀಡಬೇಕಿದೆ. ನ್ಯೂಜಿಲೆಂಡ್ ವಿರುದ್ಧದ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್ ನಡೆಸಿದ್ದ ತಜ್ಮಿನ್‌ ಬ್ರಿಟ್ಸ್‌ ಅವರ ಮೇಲೆ ಎಲ್ಲರ ಚಿತ್ತ ನೆಟ್ಟಿದೆ. ಉಳಿದಂ ಮ್ಲಾಬಾ ಆಟ ಭರವಸೆ ಹೆಚ್ಚಿಸಿದೆ. ಸಂಘಟಿತ ಆಟವನ್ನು ಆಡಿ ಭಾರತವನ್ನು ಕಟ್ಟಿ ಹಾಕುವ ಆಸೆ ದಕ್ಷಿಣ ಆಫ್ರಿಕಾ ತಂಡದ್ದಾಗಿದೆ.

Story first published: Thursday, October 9, 2025, 7:05 [IST]
Other articles published on Oct 9, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+