Arshdeep Singh: ಬುಮ್ರಾ, ಭುವಿ ದಾಖಲೆಯ ಮೇಲೆ ಅರ್ಷದೀಪ್ ಸಿಂಗ್ ಕಣ್ಣು
ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟಿ20 ಪಂದ್ಯ ಇಂದು ನವ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಸೂರ್ಯಕುಮಾರ್ ಪಡೆ ಗೆಲುವು ಸಾಧಿಸುವ ಕನಸು ಹೊಂದಿದೆ. ಎರಡನೇ ಪಂದ್ಯವನ್ನು ಗೆದ್ದು, ಇನ್ನು ಒಂದು ಪಂದ್ಯ ಬಾಕಿ ಇರುವಂತೆ ಸರಣಿಯನ್ನು ವಶಕ್ಕೆ ಪಡೆಯುವ ಕನಸು ಕಾಣುತ್ತಿದೆ. ಗ್ವಾಲಿಯರ್‌ನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿತ್ತು.
ಟೀಮ್ ಇಂಡಿಯಾ ಪರ ಸ್ಟಾರ್ ವೇಗದ ಬೌಲರ್ ಒಬ್ಬ ಎರಡನೇ ಟಿ20 ಪಂದ್ಯದಲ್ಲಿ ದಾಖಲೆ ನಿರ್ಮಿಸಬಹುದು. ಇನ್ನು ಇವರು ದೆಹಲಿಯಲ್ಲಿ ಬಾಂಗ್ಲಾ ಬ್ಯಾಟರ್‌ಗಳನ್ನು ಕಾಡಿದ್ದೇ ಆದಲ್ಲಿ ಅರ್ಷದೀಪ್ ಸಿಂಗ್ ದಾಖಲೆಯ ಪುಟಕ್ಕೆ ಎಂಟ್ರಿ ನೀಡಬಹುದು. ಹಾಗಿದ್ದರೆ ಟೀಮ್ ಇಂಡಿಯಾದ ವೇಗದ ಬೌಲರ್ ನಿರ್ಮಿಸಲಿರುವ ದಾಖಲೆ ಏನು ಎಂಬ ಬಗ್ಗೆ ವರದಿ ಇಲ್ಲಿದೆ.

ದಾಖಲೆಯ ಸನಿಹದಲ್ಲಿ ವೇಗಿ
ಅರ್ಷದೀಪ್ ಸಿಂಗ್ 2022 ರಲ್ಲಿ ಭಾರತದ ಪರ ಪದಾರ್ಪಣೆ ಮಾಡಿದ್ದು ಭರವಸೆಯನ್ನು ಮೂಡಿಸಿದ್ದಾರೆ. ಸಿಕ್ಕ ಅವಕಾಶವನ್ನು ಎರಡೂ ಕೈಗಳಿಂದ ಬಳಸಿಕೊಂಡ ಅರ್ಷದೀಪ್ ಸಿಂಗ್ ಸದ್ಯ ಚುಟುಕು ಫಾರ್ಮೆಟ್‌ನ ಭರವಸೆಯ ಬೌಲರ್.
ಇವರು ಗ್ವಾಲಿಯರನಲ್ಲಿ ನಡೆದಿದ್ದ ಮೊದಲ ಟಿ20 ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ್ದ ಅರ್ಷದೀಪ್ ಮೂರು ವಿಕೆಟ್ ಕಬಳಿಸಿದ್ದರು. ಈ ಪ್ರದರ್ಶನದ ಫಲವಾಗಿ ಇವರಿಗೆ ಪಂದ್ಯ ಶ್ರೇಷ್ಠ ಗರಿ ಸಂದಿತ್ತು. ಎರಡನೇ ಪಂದ್ಯದಲ್ಲಿ ಅರ್ಷದೀಪ್ ಸಿಂಗ್ ದಾಖಲೆಯ ಪುಟಕ್ಕೆ ಎಂಟ್ರಿ ನೀಡುವ ಸಾಧ್ಯತೆ ಇದೆ.

ಅರ್ಷದೀಪ್ ಟಿ20 ಕ್ರಿಕೆಟ್‌ನಲ್ಲಿ 86 ವಿಕೆಟ್‌ಗಳನ್ನು ಪಡೆದಿದ್ದಾರೆ. ಈ ಸರಣಿಯಲ್ಲಿ ಅರ್ಷದೀಪ್ ಸಿಂಗ್ ದೊಡ್ಡ ಸಾಧನೆಯನ್ನು ಮಾಡಬಹುದು. ಈ ಸರಣಿಯಲ್ಲಿ ಇವರು ಗರಿಷ್ಠ ವಿಕೆಟ್ ಪಡೆದ ಭಾರತದ ಎರಡನೇ ಬೌಲರ್ ಎಂಬ ಹೆಗ್ಗಳಿಕೆ ತಮ್ಮದಾಗಿಸಿಕೊಳ್ಳಬಹುದು.
ಅರ್ಷದೀಪ್, ಬುಮ್ರಾ ಹಾಗೂ ಭವನೇಶ್ವರ್ ಕುಮಾರ್ ಅವರ ದಾಖಲೆಯನ್ನು ಅಳಿಸಿ ಹಾಕಬಹುದು. ಬುಮ್ರಾ ಟಿ20 ಕ್ರಿಕೆಟ್‌ನಲ್ಲಿ 89, ಭುವನೇಶ್ವರ್ ಕುಮಾರ್ 90 ವಿಕೆಟ್ ಪಡೆದಿದ್ದಾರೆ. ಇನ್ನು ಟೀಮ್ ಇಂಡಿಯಾ ಪರ ಟಿ20 ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ವಿಕೆಟ್ ಪಡೆದ ಹಿರಿಮೆ ಸ್ಪಿನ್ ಬೌಲರ್ ಯಜುವೇಂದ್ರ ಚಹಾಲ್ ಅವರಿಗೆ ಸಲ್ಲುತ್ತದೆ. ಇವರು 96 ವಿಕೆಟ್‌ಗಳನ್ನು ಪಡೆದಿದ್ದಾರೆ.
ಎರಡನೇ ಟಿ20 ಪಂದ್ಯದಲ್ಲಿ ಒಂದು ವಿಕೆಟ್ ಪಡೆದಿದ್ದೇ ಆದಲ್ಲಿ ಅರ್ಷದೀಪ್, ತಮ್ಮ ಸಹ ಆಟಗಾರ ಹಾರ್ದಿಕ್ ಪಾಂಡ್ಯ ದಾಖಲೆ ಅಳಿಸಬಹುದು. ಇಬ್ಬರೂ ಈ ಸರಣಿಯಲ್ಲಿ ಆಡುತ್ತಿದ್ದಾರೆ. ಅರ್ಷದೀಪ್ ಅವರಿಗಿಂತ ಮುಂದೆ ಹೋಗಬಹುದು. ಹಾರ್ದಿಕ್ ಇದುವರೆಗೆ ಟಿ20ಯಲ್ಲಿ ಭಾರತದ ಪರ 87 ವಿಕೆಟ್ ಪಡೆದಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications