IND vs NZ Test: ನಾಳೆಯಿಂದ ಪುಣೆಯಲ್ಲಿ ಎರಡನೇ ಟೆಸ್ಟ್: ಹೇಗಿದೆ ಪಿಚ್? ಯಾರಿಗೆ ಸಹಾಯ?
ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಎರಡನೇ ಟೆಸ್ಟ್ ಪಂದ್ಯ ಗುರುವಾರದಿಂದ ಪುಣೆಯಲ್ಲಿ ಆರಂಭವಾಗಲಿದೆ. ಈ ಟೆಸ್ಟ್‌ನ್ನು ಎಲ್ಲರೂ ಕುತೂಹಲದಿಂದ ನೋಡುತ್ತಿದ್ದಾರೆ. ಈ ಪಂದ್ಯದಲ್ಲಿ ಗೆಲುವು ಸಾಧಿಸಿ ಸರಣಿಯಲ್ಲಿ ಸಮಬಲ ಸಾಧಿಸುವ ಇರಾದೆ ಭಾರತ ತಂಡದ್ದಾಗಿದೆ.
ಬೆಂಗಳೂರಿನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಟೀಮ್ ಇಂಡಿಯಾ 8 ವಿಕೆಟ್‌ಗಳಿಂದ ಸೋಲು ಕಂಡಿತ್ತು. ಹೀಗಾಗಿ ಎರಡನೇ ಟೆಸ್ಟ್ ಗೆದ್ದು ಸರಣಿ ಸಮಬಲ ಸಾಧಿಸುವ ಇರಾದೆ ಭಾರತ ತಂಡದ್ದಾಗಿದೆ. ಈ ನಿಟ್ಟಿನಲ್ಲಿ ರೋಹಿತ್ ಪಡೆ ಬಲಿಷ್ಠ ತಂಡವನ್ನು ಕಣಕ್ಕಿಳಿಸುವ ಲೆಕ್ಕಾಚಾರವನ್ನು ಹಾಕಿಕೊಂಡಿದೆ. ಈ ಮೂಲಕ ಮೂರು ಪಂದ್ಯಗಳ ಸರಣಿಯಲ್ಲಿ ಮೊದಲ ಗೆಲುವಿನ ನಗೆ ಬೀರಲು ಪ್ಲ್ಯಾನ್ ಮಾಡಿಕೊಂಡಿದೆ.

ತಂಡದಲ್ಲಿ ಬದಲಾವಣೆಯ ಗಾಳಿ
ಟೀಮ್ ಇಂಡಿಯಾದಲ್ಲಿ ಬದಲಾವಣೆಯ ಗಾಳಿ ಬೀಸುವ ಸಾಧ್ಯತೆ ಇದೆ. ಆರಂಭಿಕರಾಗಿ ಯಶಸ್ವಿ ಜೈಸ್ವಾಲ್ ಹಾಗೂ ರೋಹಿತ್ ಶರ್ಮಾ ಇಳಿಯುವುದು ಪಕ್ಕಾ ಆದಂತೆ ಕಾಣುತ್ತದೆ. ಗಾಯದಿಂದ ಚೇತರಿಸಿಕೊಂಡಿರುವ ಶುಭಮನ್ ಗಿಲ್ ಎರಡನೇ ಟೆಸ್ಟ್‌ಗೆ ತಂಡ ಸೇರುವ ಸಾಧ್ಯತೆ ಇದೆ. ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ, ರಿಷಭ್ ಪಂತ್ ತಂಡಕ್ಕೆ ಆಧಾರವಾಗಬಲ್ಲ ಪ್ಲೇಯರ್ಸ್. ಸರ್ಫರಾಜ್ ಖಾನ್, ಕೆ.ಎಲ್ ರಾಹುಲ್ ಇಬ್ಬರಲ್ಲಿ ಒಬ್ಬರಿಗೆ ಈ ಬಾರಿ ಗೇಟ್ ಪಾಸ್ ನೀಡುವ ಸಾಧ್ಯತೆ ದಟ್ಟವಾಗಿದೆ.
ಮೊದಲ ಟೆಸ್ಟ್ ಪಂದ್ಯದಂತೆ ಎರಡನೇ ಟೆಸ್ಟ್ ಪಂದ್ಯಕ್ಕೂ ಟೀಮ್ ಇಂಡಿಯಾ ಮೂರು ಸ್ಪಿನ್ ಬೌಲರ್‌ಗಳೊಂದಿಗೆ ಕಣಕ್ಕೆ ಇಳಿಯುವ ಸಂಭವವಿದೆ. ಬುಮ್ರಾ ಹಾಗೂ ಸಿರಾಜ್ ವೇಗದ ಬೌಲಿಂಗ್ ನೊಗವನ್ನು ಹೊರಲಿದ್ದಾರೆ. ಅಶ್ವಿನ್, ಕುಲದೀಪ್ ಆಡುವುದು ಖಚಿತ ಎಂಬ ಮಾತುಗಳು ಕೇಳಿ ಬರುತ್ತಿವೆ. ರವೀಂದ್ರ ಜಡೇಜಾ ಹಾಗೂ ಅಕ್ಷರ್ ಪಟೇಲ್ ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗಲಿದೆ.

ಉತ್ಸಾಹದಲ್ಲಿ ಕಿವೀಸ್
36 ವರ್ಷಗಳ ನಂತರ ಭಾರತದಲ್ಲಿ ಮೊದಲ ಟೆಸ್ಟ್ ಗೆದ್ದು ಉತ್ಸಾಹದಲ್ಲಿರುವ ನ್ಯೂಜಿಲೆಂಡ್ ತಂಡ ಮೊದಲ ಟೆಸ್ಟ್‌ನಲ್ಲಿ ಆಡಿದ ತಂಡವನ್ನೇ ಕಣಕ್ಕೆ ಇಳಿಸುವ ಸಾಧ್ಯತೆ ಇದೆ. ಇನ್ನು ಈ ಟೆಸ್ಟ್‌ಗೂ ಅನುಭವಿ ಬ್ಯಾಟರ್ ಕೇನ್ ವಿಲಿಯಮ್ಸನ್ ಅನುಪಸ್ಥಿತಿ ತಂಡಕ್ಕೆ ಬಹುವಾಗಿ ಕಾಡಲಿದೆ.
ಪಿಚ್ ಹೇಗಿದೆ?
ಪುಣೆಯಲ್ಲಿರುವ ಪಿಚ್ ಕಪ್ಪು ಮಣ್ಣಿನಿಂದ ಕೂಡಿದ್ದಾಗಿದೆ ಎಂದು ಹೇಳಲಾಗುತ್ತಿದೆ. ಈ ಪಿಚ್ ಸ್ಪಿನ್ ಬೌಲರ್‌ಗಳಿಗೆ ನೆರವಾಗುವುದರಿಂದ ಎರಡನೇ ಟೆಸ್ಟ್‌ಗೂ ಟೀಮ್ ಇಂಡಿಯಾ ಮೂವರು ಸ್ಪಿನ್ ಬೌಲರ್‌ಗಳೊಂದಿಗೆ ಕಣಕ್ಕೆ ಇಳಿಯುವ ಸಂಭವ ಹೆಚ್ಚಿದೆ.

ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂನಲ್ಲಿ ಟೀಂ ಇಂಡಿಯಾ ಈ ವರೆಗೆ ಒಟ್ಟು ಎರಡು ಟೆಸ್ಟ್ ಪಂದ್ಯಗಳನ್ನು ಆಡಿದ್ದು, ಅದರಲ್ಲಿ ಭಾರತ ಒಂದು ಗೆಲುವು ಹಾಗೂ ಒಂದು ಸೋಲು ಕಂಡಿದೆ. ಟೀಮ್ ಇಂಡಿಯಾ 2017 ರಲ್ಲಿ ಇಲ್ಲಿ ತನ್ನ ಮೊದಲ ಟೆಸ್ಟ್ ಪಂದ್ಯವನ್ನು ಆಡಿತ್ತು.
ಆಗ ಟೀಂ ಇಂಡಿಯಾ ಆಸ್ಟ್ರೇಲಿಯಾ ವಿರುದ್ಧ 333 ರನ್‌ಗಳ ಹೀನಾಯ ಸೋಲನ್ನು ಕಂಡಿತ್ತು. ಎರಡನೇ ಪಂದ್ಯ 2019ರಲ್ಲಿ ನಡೆದಿತ್ತು. ಈ ವೇಳೆ ಭಾರತ, ದಕ್ಷಿಣ ಆಫ್ರಿಕಾ ತಂಡಗಳು ಕಾದಾಟ ನಡೆಸಿದ್ದವು. ಈ ಪಂದ್ಯದಲ್ಲಿ ಭಾರತ ಇನಿಂಗ್ಸ್ ಮತ್ತು 137 ರನ್‌ಗಳಿಂದ ಸೋಲಿಸಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications