IND vs AUS: ಗೆಲ್ಲಲೇ ಬೇಕಾದ ಒತ್ತಡದಲ್ಲಿ ಗಿಲ್ ಪಡೆ: ತಂಡದಲ್ಲಿ ಬದಲಾವಣೆ ಸಾಧ್ಯತೆ
ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಏಕದಿನ ಪಂದ್ಯ ಆಡಿಲೇಡ್‌ನಲ್ಲಿ ನಡೆಯಲಿದೆ. ಈ ಪಂದ್ಯ ಭಾರತಕ್ಕೆ ಮಾಡು ಇಲ್ಲವೇ ಮಡಿ ಪಂದ್ಯವಾಗಿರಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸರಣಿಯಲ್ಲಿ ಪುಟಿದೇಳುವ ಪ್ಲ್ಯಾನ್ ಭಾರತ ತಂಡದ್ದಾಗಿದೆ. ಈಗಾಗಲೇ ಭಾರತ ಆಡಿದ ಮೊದಲ ಏಕದಿನ ಪಂದ್ಯದಲ್ಲಿ ಸೋಲು ಕಂಡಿದ್ದು, ಒತ್ತಡದಲ್ಲಿದೆ. ಎರಡನೇ ಏಕದಿನ ಪಂದ್ಯದಲ್ಲಿ ಜಯ ಸಾಧಿಸುವ ಅನಿವಾರ್ಯತೆ ಗಿಲ್ ಪಡೆಗಿದೆ.
ಆಡಿಲೇಡ್ ಟೀಮ್ ಇಂಡಿಯಾ ಪಾಲಿಗೆ ನೆಚ್ಚಿನ ಅಂಗಳ. ಈ ಮೈದಾನದಲ್ಲಿ ಈ ಹಿಂದೆ ಆಡಿರುವ ಎರಡು ಪಂದ್ಯಗಳಲ್ಲಿ ಭಾರತ ಜಯ ಸಾಧಿಸಿದೆ. ಹೀಗಾಗಿ ಇನ್ನೊಂದು ಪಂದ್ಯವನ್ನು ಗೆದ್ದು ಹ್ಯಾಟ್ರಿಕ್ ಜಯದ ನಗೆ ಬೀರಲು ಭಾರತ ಪ್ಲ್ಯಾನ್ ಮಾಡಿಕೊಂಡಿದೆ. ಭಾರತದ ಸ್ಟಾರ್ ಆಟಗಾರರು ಜಯದಲ್ಲಿ ಮಿಂಚುವ ಅನಿವಾರ್ಯತೆ ಇದೆ. ಇನ್ನು ಆಡಿಲೇಡ್ ಪಿಚ್ ಕೊಂಚ ವಿಭಿನ್ನವಾಗಿ ಕಾಣಿಸಿಕೊಳ್ಳಲಿದೆ. ಈ ಬಾರಿ ಈ ಪಿಚ್‌ನಲ್ಲಿ ಬೌನ್ಸ್ ಕಾಣಿಸಿಕೊಳ್ಳುವ ಸಾಧ್ಯತೆ ಇದ್ದು, ಭಾರತೀಯ ಆಟಗಾರರ ಮುಖದಲ್ಲಿ ಚಿಂತೆಯ ಗೆರೆ ಮೂಡಿಸಲಿದೆ.

ಮೊದಲ ಪಂದ್ಯದಲ್ಲಿ ಕಂಡ ರನ್ ಬರವನ್ನು ಮೆಟ್ಟಿ ನಿಲ್ಲಲು ಭಾರತೀಯ ಟಾಪ್ ಆರ್ಡರ್ ಬ್ಯಾಟರ್‌ಗಳಿಗೆ ಇದು ಬೆಸ್ಟ್ ಚಾನ್ಸ್ ಆಗಿದೆ. ಈ ವೇಳೆ ರೋಹಿತ್ ಶರ್ಮಾ, ಶುಭಮನ್ ಗಿಲ್ ತಂಡಕ್ಕೆ ಬಿಗ್ ಓಪನಿಂಗ್ ನೀಡುವ ಅನಿವಾರ್ಯತೆ ಇದೆ. ಇನ್ನು ಮಧ್ಯಮ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ತಮ್ಮ ಕ್ಷಮತೆಗೆ ತಕ್ಕ ಆಟವನ್ನು ಆಡಬೇಕಿದೆ. ಉಪನಾಯಕ ಶ್ರೇಯಸ್ ಅಯ್ಯರ್ ಕೊಂಚ ಕ್ರೀಸ್‌ನಲ್ಲಿ ನಿಂತು ಪರಿಸ್ಥಿತಿ ಅವಲೋಕಿಸಿ ಆಡುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ದೊಡ್ಡ ಮೊತ್ತದ ಕನಸು ನನಸಾಗುತ್ತದೆ. ಇನ್ನು ಕೆಎಲ್ ರಾಹುಲ್ ಅವರಿಗೆ ಅವರ ನೈಜ್ಯ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಿಡಬೇಕಿದೆ.
ಕುಲ್‌ದೀಪ್‌ಗೆ ಅವಕಾಶ?
ಎರಡನೇ ಏಕದಿನ ಪಂದ್ಯದಲ್ಲಿ ಇಬ್ಬರು ಆಲ್‌ರೌಂಡರ್ಸ್ ಅಕ್ಷರ್ ಪಟೇಲ್ ಹಾಗೂ ವಾಷಿಂಗ್ಟನ್ ಸುಂದರ್ ಅವರಿಗೆ ಅವಕಾಶ ನೀಡಿದರೆ ಬೆಸ್ಟ್. ಇನ್ನು ನಿತೀಶ್ ಕುಮಾರ್ ರೆಡ್ಡಿ ಅವರ ಸ್ಥಾನದಲ್ಲಿ ನುರಿತ ಸ್ಪಿನ್ ಬೌಲರ್ ಕುಲ್ ದೀಪ್ ಯಾದವ್ ಅಂಗಳಕ್ಕೆ ಇಳಿಯುವುದು ಸೂಕ್ತ ಎನ್ನಲಾಗುತ್ತಿದೆ. ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್ ತಮ್ಮ ಬಿಗುವಿನ ದಾಳಿಯನ್ನು ಸಂಘಟಿಸುವ ಅನಿವಾರ್ಯತೆ ಇದೆ. ಹರ್ಷಿತ್ ರಾಣಾ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬೌಲ್ ಮಾಡಬೇಕಿದೆ.
ಭಾರತ ತಂಡ: ರೋಹಿತ್ ಶರ್ಮಾ, ಶುಭ್ಮನ್ ಗಿಲ್ (ನಾಯಕ), ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಹರ್ಷಿತ್ ರಾಣಾ, ಅರ್ಶ್ದೀಪ್ ಸಿಂಗ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ನಿತೀಶ್ ಕುಮಾರ್ ರೆಡ್ಡಿ, ಧ್ರುವ್ ಜುರೆಲ್, ಪ್ರಸಿದ್ಧ್ ಕೃಷ್ಣ.
ಗೆಲುವಿನ ಹುಮ್ಮಸ್ಸು
ಈಗಾಗಲೇ ಮೊದಲ ಏಕದಿನ ಪಂದ್ಯವನ್ನು ಗೆದ್ದಿರುವ ಆಸ್ಟ್ರೇಲಿಯಾ ಹುಮ್ಮಸ್ಸಿನಲ್ಲಿದೆ. ಎರಡನೇ ಏಕದಿನ ಪಂದ್ಯದಲ್ಲಿ ಸ್ಪಿನ್ ಬೌಲರ್ ಆಡಂ ಜಂಪಾ ತಂಡದಲ್ಲಿ ಸ್ಥಾನ ಪಡೆಯುವ ಸಾಧ್ಯತೆ ಇದೆ. ಉಳಿದಂತೆ ಆಸ್ಟ್ರೇಲಿಯಾ ತಂಡದಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆ ಕಡಿಮೆ ಇದೆ.

ಆಸ್ಟ್ರೇಲಿಯಾ ತಂಡ: ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್ (ನಾಯಕ), ಮಾರ್ನಸ್ ಲಬುಶೇನ್, ಮ್ಯಾಥ್ಯೂ ಶಾರ್ಟ್, ಮ್ಯಾಟ್ ರೆನ್ಶಾ, ಮಿಚೆಲ್ ಓವನ್, ಜೋಶ್ ಫಿಲಿಪ್ (ವಿಕೆಟ್ ಕೀಪರ್), ಕೂಪರ್ ಕಾನೊಲ್ಲಿ, ಮಿಚೆಲ್ ಸ್ಟಾರ್ಕ್, ಕ್ಸೇವಿಯರ್ ಬಾರ್ಟ್ಲೆಟ್, ಜೋಶ್ ಹ್ಯಾಜಲ್‌ವುಡ್, ಬೆನ್ ದ್ವಾರ್ಶುಯಿಸ್, ನಾಥನ್ ಎಲ್ಲಿಸ್, ಮ್ಯಾಥ್ಯೂ ಕುಹ್ನೆಮನ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications