ಏಕದಿನ ಸರಣಿ ಗೆಲುವಿನ ಸಂಭ್ರಮದಲ್ಲಿದ್ದ ಭಾರತಕ್ಕೆ ಐಸಿಸಿ ಪೆಟ್ಟು
ದಕ್ಷಿಣ ಆಫ್ರಿಕಾ ವಿರುದ್ಧ ಏಕದಿನ ಸರಣಿಯಲ್ಲಿ ಟೀಮ್ ಇಂಡಿಯಾ 2-1 ರಿಂದ ಗೆಲುವು ಸಾಧಿಸಿದೆ. ರಾಂಚಿಯಲ್ಲಿ ನಡೆದಿದ್ದ ಮೊದಲ ಪಂದ್ಯವನ್ನು ಭಾರತ 17 ರನ್‌ಗಳಿಂದ ಗೆದ್ದಿದರೆ, ಎರಡನೇ ಏಕದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಭರ್ಜರಿ ಜಯ ಸಾಧಿಸಿತ್ತು. ಮೂರನೇ ಹಾಗೂ ನಿರ್ಣಾಯಕ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ 9 ವಿಕೆಟ್‌ಗಳ ಜಯ ಸಾಧಿಸಿದೆ. ಈ ಮಧ್ಯೆ ಭಾರತ ತಂಡಕ್ಕೆ ಐಸಿಸಿ ಪೆಟ್ಟು ನೀಡಿದೆ. ರಾಯ್ಪುರದಲ್ಲಿ ನಡೆದಿದ್ದ ಎರಡನೇ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾ ನಿಧಾನಗತಿಯ ಓವರ್ ನಡೆಸಿದ್ದಕ್ಕಾಗಿ ದಂಡ ವಿಧಿಸಿದೆ.
ಟೀಮ್ ಇಂಡಿಯಾ ಎರಡನೇ ಏಕದಿನ ಪಂದ್ಯದಲ್ಲಿ ನಿಗದಿತ ಸಮಯಕ್ಕಿಂತ ತಡವಾಗಿ ಬೌಲಿಂಗ್ ಮುಗಿಸಿತ್ತು. ಎರಡನೇ ಏಕದಿನ ಪಂದ್ಯದಲ್ಲಿ ಭಾರತ ನಿಗದಿತ ಸಮಯದಲ್ಲಿ ಎರಡು ಓವರ್ ಕಡಿಮೆ ಬೌಲಿಂಗ್ ನಡೆಸಿದ್ದಕ್ಕೆ ಐಸಿಸಿ ಎಲೈಟ್ ಪ್ಯಾನಲ್ ಮ್ಯಾಚ್ ರೆಫರಿ ರಿಚಿ ರಿಚರ್ಡ್‌ಸನ್ ಭಾರತ ತಂಡಕ್ಕೆ ದಂಡ ವಿಧಿಸಿದೆ. ಕೆಎಲ್ ರಾಹುಲ್ ತಂಡದ ವಿರುದ್ಧ ಐಸಿಸಿ ಶಿಸ್ತು ಕ್ರಮ ಕೈಗೊಳ್ಳಲು ಐಸಿಸಿ ನೀತಿ ಸಂಹಿತೆಯ ಆರ್ಟಿಕಲ್ 2.22 ರ ಪ್ರಕಾರ ದಂಡ ವಿಧಿಸಲಾಗಿದೆ.

ಟೀಮ್ ಇಂಡಿಯಾದ ನಾಯಕ ಕೆಎಲ್ ರಾಹುಲ್ ತಮ್ಮ ಮೇಲಿನ ಆರೋಪ ಹಾಗೂ ವಿಧಿಸಿದ ದಂಡ ಎರಡನ್ನೂ ಒಪ್ಪಿಕೊಂಡಿದ್ದಾರೆ. ತಂಡವು ನಿಗದಿತ ಸಮಯಕ್ಕಿಂತ ಒಂದು ಓವರ್ ಕಡಿಮೆ ಬೌಲ್ ಮಾಡಿದರೆ, ಆ ತಂಡಕ್ಕೆ ಪಂದ್ಯ ಶುಲ್ಕದ ಐದು ಪ್ರತಿಶತ ದಂಡ ವಿಧಿಸಲಾಗುತ್ತದೆ. ಭಾರತ ತಂಡವು ಎರಡು ಓವರ್ ಕಡಿಮೆ ಬೌಲ್ ಮಾಡಿದ್ದರಿಂದ, ತಂಡಕ್ಕೆ ಶೇಕಡಾ 10 ರಷ್ಟು ದಂಡ ವಿಧಿಸಲಾಯಿತು.
ಎರಡನೇ ಪಂದ್ಯದ ಫಲಿತಾಂಶ
ರಾಯ್ಪುರದಲ್ಲಿ ನಡೆದ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಸೋತಿದ್ದ ಭಾರತ ಮೊದಲು ಬ್ಯಾಟ್ ಮಾಡಿ ನಿಗದಿತ ಓವರ್‌ಗಳಲ್ಲಿ 358 ರನ್‌ಗಳ ಸವಾಲಿನ ಗುರಿಯನ್ನು ನೀಡಿತು. ಈ ವೇಳೆ ಸೂಪರ್ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ 102 ರನ್ ಬಾರಿಸಿದರೆ, ನಾಲ್ಕನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ರುತುರಾಜ್ ಗಾಯಕ್ವಾಡ್ 105 ರನ್ ಬಾರಿಸಿದರು. ಈ ಸವಾಲಿನ ಮೊತ್ತವನ್ನು ಬೆನ್ನಟ್ಟದಿ ದಕ್ಷಿಣ ಆಫ್ರಿಕಾ ತಂಡದ ಸ್ಟಾರ್ ಆಟಗಾರ ಏಡೆನ್ ಮಾರ್ಕ್ರಮ್ ಶತಕ ಬಾರಿಸಿ ತಂಡಕ್ಕೆ ಗೆಲುವಿನ ಮಾಲೆ ತೊಡಿಸಿದರು. ಇವರ ಭರ್ಜರಿ ಆಟಕ್ಕೆ ಪಂದ್ಯ ಶ್ರೇಷ್ಠ ಪ್ರಶಸ್ತಿಯನ್ನು ಸಹ ನೀಡಲಾಗಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications