Melbourne Test: ಇನ್ನಿಂಗ್ಸ್ ಹಿನ್ನಡೆ ಭೀತಿಯಲ್ಲಿ ಟೀಮ್ ಇಂಡಿಯಾ
ಮೆಲ್ಬೋರ್ನ್‌ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ತಂಡ ಹಿನ್ನಡೆ ಕಂಡಿದೆ. ಮೆಲ್ಬೋರ್ನ್ ಟೆಸ್ಟ್ ಪಂದ್ಯದ ಎರಡನೇ ದಿನದಾಟದ ಮುಕ್ತಾಯಕ್ಕೆ ಭಾರತ 5 ವಿಕೆಟ್ ಕಳೆದುಕೊಂಡು 164 ರನ್ ಗಳಿಸಿದೆ. ರಿಷಬ್ ಪಂತ್ (6 ರನ್) ಮತ್ತು ರವೀಂದ್ರ ಜಡೇಜಾ (4 ರನ್) ಕ್ರೀಸ್‌ನಲ್ಲಿದ್ದಾರೆ. ಆಸ್ಟ್ರೇಲಿಯಾ ಪರ ಪ್ಯಾಟ್ ಕಮಿನ್ಸ್ ಮತ್ತು ಸ್ಕಾಟ್ ಬೋಲ್ಯಾಂಡ್ ತಲಾ 2 ವಿಕೆಟ್ ಪಡೆದಿದ್ದಾರೆ. ಯಶಸ್ವಿ ಜೈಸ್ವಾಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನದ ನಡುವೆ ರನೌಟ್ ಆಗಿದ್ದಾರೆ.
ಮೊದಲ ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ 474 ರನ್‌ಗಳಿಗೆ ಆಲೌಟಾಯಿತು. ಆಸೀಸ್ ಪರ
ಸ್ಟಾರ್ ಬ್ಯಾಟರ್ ಸ್ಟೀವ್ ಸ್ಮಿತ್ ಆಸ್ಟ್ರೇಲಿಯಾ ಪರ ಗರಿಷ್ಠ 140 ರನ್ ಗಳಿಸಿದರು. ಇದಲ್ಲದೇ ಮಾರ್ನಸ್ ಲ್ಯಾಬುಸ್ಚಾಗ್ನೆ 72 ರನ್‌ಗಳ ಇನಿಂಗ್ಸ್ ಆಡಿದರು. ಭಾರತದ ಪರ ಮೊದಲ ಇನ್ನಿಂಗ್ಸ್‌ನಲ್ಲಿ ಜಸ್ಪ್ರೀತ್ ಬುಮ್ರಾ ಗರಿಷ್ಠ 4 ವಿಕೆಟ್ ಪಡೆದು ಮಿಂಚಿದರು. ರವೀಂದ್ರ ಜಡೇಜಾ 3 ವಿಕೆಟ್ ಕಬಳಿಸಿದರೆ. ಆಕಾಶದೀಪ್ 2 ಮತ್ತು ವಾಷಿಂಗ್ಟನ್ ಸುಂದರ್ 1 ವಿಕೆಟ್ ಪಡೆದರು.

ಟೀಮ್ ಇಂಡಿಯಾಕ್ಕೆ ರೋಹಿತ್ ಶರ್ಮಾ ಮತ್ತು ಯಶಸ್ವಿ ಜೈಸ್ವಾಲ್ ಇನ್ನಿಂಗ್ಸ್ ಆರಂಭಿಸಿದರು. ಆದರೆ ಭಾರತ ಉತ್ತಮ ಆರಂಭ ಪಡೆಯಲಿಲ್ಲ. ನಾಯಕ ರೋಹಿತ್ ಕೇವಲ 3 ರನ್ ಗಳಿಸಿ ಔಟಾದರು. ಇದಾದ ಬಳಿಕ ಕೆಎಲ್ ರಾಹುಲ್ ಕೂಡ 24 ರನ್‌ಗೆ ಆಟ ನಿಲ್ಲಿಸಿದರು. ಇದಾದ ನಂತರ ಯಶಸ್ವಿ ಜೈಸ್ವಾಲ್ ತಂಡಕ್ಕೆ ಆಸರೆಯಾದರು. ಮತ್ತೊಂದೆಡೆ ವಿರಾಟ್ ಕೊಹ್ಲಿ ಸಹಾ 36 ರನ್‌ಗಳಿಗೆ ವಿಕೆಟ್ ಕಳೆದುಕೊಂಡರು.
ಕೈ ಕೊಟ್ಟ ಅದೃಷ್ಟ
ಸತತ ನಾಲ್ಕು ಇನ್ನಿಂಗ್ಸ್‌ಗಳಲ್ಲಿ ಮಂಕಾಗಿದ್ದ ಭಾರತ ತಂಡದ ಯುವ ಬ್ಯಾಟರ್ ಯಶಸ್ವಿ ಜೈಸ್ವಾಲ್ ಮೆಲ್ಬೋರ್ನ್ ಟೆಸ್ಟ್ ಪಂದ್ಯದಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ಮಾಡಿದರು. ಆಸೀಸ್ ಬೌಲರ್‌ಗಳಿಗೆ ಬೆವರಿಳಿಸಿದ ಜೈಸ್ವಾಲ್ ಶತಕದ ಹೊಸ್ತಿಲಲ್ಲಿ ರನೌಟ್‌ಗೆ ಬಲಿಯಾದರು. ಜೈಸ್ವಾಲ್ ಎದುರುಸಿದ 118 ಎಸೆತಗಳಲ್ಲಿ 11 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 82 ಗಳಿಸಿ ಔಟಾದರು. ಜೈಸ್ವಾಲ್ ರನೌಟ್ ಆಗದಿದ್ದರೆ, ಅವರ ಬ್ಯಾಟ್‌ನಿಂದ ಮತ್ತೊಂದು ಶತಕ ಮೂಡಿ ಬರುತ್ತಿತ್ತು.
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಐದು ಪಂದ್ಯಗಳ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿ ಭಾರೀ ಕುತೂಹಲ ಮೂಡಿಸಿದೆ. ಉಭಯ ತಂಡಗಳು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ (ಡಬ್ಲ್ಯೂಟಿಸಿ) ಫೈನಲ್ ತಲುಪಲು ಹೋರಾಡುತ್ತಿವೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ನಾಲ್ಕನೇ ಪಂದ ಮೆಲ್ಬೋರ್ನ್ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿದೆ. ಪ್ರಸ್ತುತ ಸರಣಿ 1-1 ರಲ್ಲಿ ಸಮಬಲಗೊಂಡಿದೆ. ಒಂದು ಪಂದ್ಯದಲ್ಲಿ ಡ್ರಾನಲ್ಲಿ ಅಂತ್ಯ ಕಂಡಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications