IND vs NZ: ಮತ್ತೆ ಕುಸಿದ ಭಾರತದ ಟಾಪ್ ಆರ್ಡರ್; ನ್ಯೂಜಿಲೆಂಡ್‌ಗೆ103 ರನ್‌ಗಳ ಮುನ್ನಡೆ
ಪುಣೆಯಲ್ಲಿ ನಡೆಯುತ್ತಿರುವ ನ್ಯೂಜಿಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತದ ಟಾಪ್ ಆರ್ಡರ್ ಮತ್ತೆ ಕುಸಿದೆ. ಪುಣೆಯ ಟರ್ನಿಂಗ್ ಪಿಚ್‌ನಲ್ಲಿ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 156 ರನ್‌ಗಳಿಗೆ ಆಲೌಟ್ ಆಗಿದೆ.
ಶುಕ್ರವಾರದಂದು ಆರಂಭವಾದ ಪುಣೆ ಟೆಸ್ಟ್ ಪಂದ್ಯದ ಎರಡನೇ ದಿನದ ಭಾರತ ನಿರಾಸ ಪ್ರದರ್ಶನ ನೀಡಿದೆ. ಕಿವೀಸ್ ಸ್ಪಿನ್ ಬಲೆಗೆ ಸಿಲುಕಿದ ಭಾರತದ ಬ್ಯಾಟರ್‌ಗಳು ಪೆವಿಲಿಯನ್ ಪರೇಡ್ ನಡೆಸಿದ್ದಾರೆ. ಪರಿಣಾಮ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 103 ರನ್‌ಗಳ ಹಿನ್ನಡೆ ಅನುಭವಿಸಿದೆ. ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 259 ರನ್‌ಗಳನ್ನು ಕಲೆ ಹಾಕಿತ್ತು.

ಪುಣೆ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲ ಇನ್ನಿಂಗ್ಸ್‌ನಲ್ಲಿ 259 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಆರಂಭಿಸಿದ ಭಾರತ ಮೊದಲ ದಿನದಾಟಕ್ಕೆ 1 ವಿಕೆಟ್ ಕಳೆದುಕೊಂಡು 15 ರನ್ ಕಲೆ ಹಾಕಿತ್ತು. ಶುಕ್ರವಾರದಂದು ಶುರುವಾದ ಎರಡನೇ ದಿನದಾಟದಲ್ಲಿ ಭಾರತದ ಟಾಪ್ ಆರ್ಡರ್ ಬ್ಯಾಟರ್‌ಗಳು ರನ್ ಹೊಳೆ ಹರಿಸುವ ನಿರೀಕ್ಷೆ ಇತ್ತು. ಆದರೆ ನ್ಯೂಜಿಲೆಂಡ್ ಪರ ಸ್ಪಿನ್ ಬೌಲಿಂಗ್ ದಾಳಿ ನಡೆಸಿದ ಮಿಚೆಲ್ ಸ್ಯಾಂಟ್ನರ್ ಭಾರತವನ್ನು ಕಟ್ಟಿ ಹಾಕಿದರು.
ಭಾರತದ ವಿರುದ್ಧ ಅದ್ಭುತ ಬೌಲಿಂಗ್ ಪ್ರದರ್ಶನ ನೀಡಿದ ಮಿಚೆಲ್ ಸ್ಯಾಂಟ್ನರ್ 7 ವಿಕೆಟ್ ಪಡೆದು ಸಂಭ್ರಮಿಸಿದರು. ಭಾರತದ ಪರ ರವೀಂದ್ರ ಜಡೇಜಾ ಮೊದಲ ಇನ್ನಿಂಗ್ಸ್‌ನಲ್ಲಿ 38 ರನ್ ಹೊಡೆದು ಟಾಪ್ ಸ್ಕೋರರ್ ಆದರು. ಇವರನ್ನು ಹೊರೆತುಪಡಿಸಿದರೆ, ಯಶಸ್ವಿ ಜೈಸ್ವಾಲ್ ಮತ್ತು ಶುಭಮನ್ ಗಿಲ್ ತಲಾ 30 ರನ್‌ಗಳ ಕೊಡುಗೆ ನೀಡಿದರು. ಇನ್ನುಳಿದಂತೆ ಯಾವುದೇ ಸ್ಟಾರ್ ಬ್ಯಾಟರ್‌ಗಳು ಭಾರತದ ಪರ ಉತ್ತಮ ಇನ್ನಿಂಗ್ಸ್ ಆಡಲಿಲ್ಲ. ರೋಹಿತ್ ಶರ್ಮಾ (0), ವಿರಾಟ್ ಕೊಹ್ಲಿ (1), ರಿಷಬ್ ಪಂತ್ (18), ಸರ್ಫರಾಜ್ ಖಾನ್ (11), ರವಿಚಂದ್ರನ್ ಅಶ್ವಿನ್ (4), ವಾಷಿಂಗ್ಟನ್ ಸುಂದರ್ (18), ಆಕಾಶ್ ದೀಪ್ (6) ಭಾರತ ತಂಡ ಮುನ್ನಡೆ ಸಾಧಿಸಿಲು ನೆರವಾಗಲಿಲ್ಲ. ಹೀಗಾಗಿ ಅಲ್ಪ ಮೊತ್ತಕ್ಕೆ ಭಾರತ ಆಲೌಟ್ ಆಯಿತು.
ಸೋಲಿನ ಭೀತಿಯಲ್ಲಿ ಭಾರತ
ಬೆಂಗಳೂರಿನ ಎಂ ಚಿನ್ನಸ್ವಾಮಿ ಅಂಗಳದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ವಿರುದ್ಧ ಭಾರತ ಸೋಲು ಕಂಡಿದೆ. ಈಗ ಪುಣೆಯಲ್ಲಿ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲೂ ಭಾರತಕ್ಕೆ ಭೀತಿ ಎದುರಾಗಿದೆ. ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಕಿವೀಸ್ ಪಡೆ 1-0 ಮುನ್ನಡೆ ಸಾಧಿಸಿದೆ. ಒಂದು ವೇಳೆ ಕಿವೀಸ್ ಪಡೆ ಪುಣೆ ಟೆಸ್ಟ್ ಪಂದ್ಯದ ಮೇಲೆ ಹಿಡಿತ ಸಾಧಿಸಿ ಗೆದ್ದರೆ ಸರಣಿ ಕೈ ವಶ ಮಾಡಿಕೊಳ್ಳಲಿದೆ.
ಪ್ರಸ್ತುತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಭಾರತ ಆಗ್ರಸ್ಥಾನದಲ್ಲಿದೆ. ಮುಂದೆಯೂ ಆಗ್ರಸ್ಥಾನದಲ್ಲಿ ಮುಂದುವರೆಯಬೇಕಾದರೆ, ಪುಣೆ ಟೆಸ್ಟ್ ಪಂದ್ಯವನ್ನು ಗೆಲ್ಲಲ್ಲೇಬೇಕಾಗಿದೆ. ಈಗ ಎರಡನೇ ಇನ್ನಿಂಗ್ಸ್‌ನಲ್ಲಿ ಕಿವೀಸ್ ಪಡೆಯನ್ನು ಕಡಿಮೆ ಮೊತ್ತಕ್ಕೆ ಕಟ್ಟಿ ಹಾಕಿದರೆ ಮಾತ್ರ ಭಾರತಕ್ಕೆ ಗೆಲ್ಲುವ ಸಾಧ್ಯತೆಗಳಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications