For Quick Alerts
ALLOW NOTIFICATIONS  
For Daily Alerts
 

ಆಸ್ಟ್ರೇಲಿಯಾಗೆ ಪ್ರಯಾಣ ಬೆಳೆಸಿದ ಭಾರತ: ವಿರಾಟ್, ರೋಹಿತ್‌ ಆಕರ್ಷಣೆ

ಟೀಮ್ ಇಂಡಿಯಾ ಸದ್ಯ ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿದೆ. ಸ್ಟಾರ್ ಆಟಗಾರರು ದಣಿವಿಲ್ಲದೇ ಪಂದ್ಯಗಳ ಮೇಲೆ ಪಂದ್ಯಗಳನ್ನು ಆಡುತ್ತಿದ್ದಾರೆ. ಮಂಗಳವಾರ ನವದೆಹಲಿಯ ಅರುಣ್‌ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆದ ವೆಸ್ಟ್‌ ಇಂಡೀಸ್‌ ವಿರುದ್ಧದ ಎರಡನೇ ಟೆಸ್ಟ್‌ ಬಳಿಕ ಟೀಮ್ ಇಂಡಿಯಾ ಮತ್ತೊಂದು ಸವಾಲಿಗೆ ಸಜ್ಜಾಗಿದೆ. ಟೀಮ್ ಇಂಡಿಯಾ ಬುಧವಾರ ನವದೆಹಲಿಯಿಂದ ಆಸ್ಟ್ರೇಲಿಯಾ ಪ್ರವಾಸವನ್ನು ಬೆಳೆಸಿತು. ಈ ವೇಳೆ ಅಭಿಮಾನಿಗಳ ಕಣ್ಣುಗಳು ಟೀಮ್ ಇಂಡಿಯಾದ ಸ್ಟಾರ್‌ ಆಟಗಾರರ ವಿರಾಟ್ ಕೊಹ್ಲಿ ಹಾಗೂ ರೋಹಿತ್ ಶರ್ಮಾ ಅವರ ಮೇಲೆ ನೆಟ್ಟಿದ್ದವು.

ವಿಮಾನ ನಿಲ್ದಾಣದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಅವರನ್ನು ಕಣ್ಣು ತುಂಬಿಕೊಳ್ಳಲು ಅಭಿಮಾನಿಗಳು ನೆರೆದಿದ್ದರು. ಈ ವೇಳೆ ನಾಯಕ ಶುಭಮನ್‌ ಗಿಲ್‌, ವೇಗಿ ಜಸ್ಪ್ರೀತ್ ಬುಮ್ರಾ ಅವರು ಸಹ ಕಾಣಿಸಿಕೊಂಡರು. ಇವರ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ತಾಣದಲ್ಲಿ ಸಖತ್ ಆಗಿ ವೈರಲ್ ಆಗುತ್ತಿವೆ. ಏಳು ತಿಂಗಳ ಬಳಿಕ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮತ್ತೆ ಕಾಣಿಸಿಕೊಳ್ಳುತ್ತಿರುವ ವಿರಾಟ್‌, ರೋಹಿತ್ ಅವರನ್ನು ನೋಡಲು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಇಂದಿರಾ ಗಾಂಧಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು.

India flies to Australia for ODI series after West Indies Test Kohli and Rohit draw huge crowd

ಅಕ್ಟೋಬರ್ 19 ರಿಂದ ಭಾರತ ತಂಡ ಆಸ್ಟ್ರೇಲಿಯಾದಲ್ಲಿ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಆಡಲಿದೆ. ಈ ಸರಣಿ ಮುಗಿದ ಬಳಿಕ ಟೀಮ್ ಇಂಡಿಯಾ, ಕಾಂಗರೂ ನಾಡಿನಲ್ಲಿ ಟಿ20 ಸರಣಿಯನ್ನು ಆಡಲಿದೆ. ಬಿಡುವಿಲ್ಲದ ವೇಳಾಪಟ್ಟಿಯನ್ನು ಹೊಂದಿರುವ ಟೀಮ್ ಇಂಡಿಯಾ ಆಟಗಾರರಿಗೆ ವಿಶ್ರಾಂತಿ ಇಲ್ಲದಂತೆ ಆಗಿದೆ. ಶುಭಮನ್‌ ಗಿಲ್‌ ಈ ನಡುವೆ ಎಲ್ಲರ ಚಿತ್ತ ಕದ್ದಿದ್ದಾರೆ. ಇವರು ಭಾರತ ತಂಡವನ್ನು ಟೆಸ್ಟ್ ಹಾಗೂ ಏಕದಿನಗಳಲ್ಲಿ ತಂಡವನ್ನು ಮುನ್ನಡೆಸುತ್ತಿದ್ದಾರೆ. ಅಲ್ಲದೆ ಏಷ್ಯಾ ಕಪ್‌ ಟಿ20 ಟೂರ್ನಿಯಲ್ಲಿ ಇವರು ಉಪನಾಯಕರಾಗಿ ಕಾಣಿಸಿಕೊಂಡಿದ್ದಾರೆ. ಇಂಗ್ಲೆಂಡ್‌ ವಿರುದ್ಧದ ದೀರ್ಘ ಸರಣಿಯ ಬಳಿಕ ಟೀಮ್ ಇಂಡಿಯಾ ಆಟಗಾರರು ಕೊಂಚ ವಿಶ್ರಾಂತಿ ಪಡೆದರು. ಬಳಿಕ ಮತ್ತೆ ಏಷ್ಯಾ ಕಪ್ ಟಿ20 ಟೂರ್ನಿಗೆ ಸಿದ್ಧರಾಗಿದ್ದಾರೆ.

ಬಿಡುವಿಲ್ಲದ ವೇಳಾಪಟ್ಟಿ

ಟೀಮ್ ಇಂಡಿಯಾ ದುಬೈನಲ್ಲಿ ಅಮೋಘ ಪ್ರದರ್ಶನವನ್ನು ನೀಡಿ ಅಬ್ಬರಿಸಿತು. ಟೂರ್ನಿಯಲ್ಲಿ ಒಂದೇ ಒಂದು ಪಂದ್ಯವನ್ನು ಸೋಲದ ಟೀಮ್ ಇಂಡಿಯಾ, ಅಜೇಯ ಓಟವನ್ನು ಮುಂದುವರೆಸಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತ್ತು. ಈ ಸರಣಿ ಮುಗಿದ ನಾಲ್ಕೇ ದಿನಗಳೊಳಗೆ ಭಾರತೀಯ ಆಟಗಾರರು ವೆಸ್ಟ್‌ ಇಂಡೀಸ್ ವಿರುದ್ಧ ಟೆಸ್ಟ್‌ ಸರಣಿಗೆ ಸಿದ್ಧರಾದರು. ಈ ವೇಳೆ ಅಹಮದಾಬಾದ್‌ ಹಾಗೂ ನವದೆಹಲಿಯಲ್ಲಿ ಎರಡು ಟೆಸ್ಟ್ ಪಂದ್ಯಗಳನ್ನ ಆಡಿರುವ ಭಾರತ ತಂಡ, ಈಗ ಆಸ್ಟ್ರೇಲಿಯಾ ಪ್ರವಾಸವನ್ನು ಬೆಳೆಸಿದೆ. ಈ ಪ್ರವಾಸದಲ್ಲಿ 3 ಏಕದಿನ ಪಂದ್ಯಗಳು ಹಾಗೂ 5 ಟಿ20 ಪಂದ್ಯಗಳು ನಡೆಯಲಿವೆ. ಈ ಸರಣಿ ಮುಗಿದ ಬಳಿಕ ಭಾರತ ತಂಡವು ನವೆಂಬರ್ 14 ರಿಂದ ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಎರಡು ಟೆಸ್ಟ್ ಸರಣಿಯನ್ನು ಆಡಲಿದೆ.

Story first published: Wednesday, October 15, 2025, 14:39 [IST]
Other articles published on Oct 15, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+