ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಎರಡನೇ ಟೆಸ್ಟ್ ಪಂದ್ಯ ಆಡಿಲೇಡ್‌ನಲ್ಲಿ ನಡೆಯಲಿದೆ. ಈ ಟೆಸ್ಟ್ ಪಂದ್ಯಕ್ಕೆ ಟೀಮ್ ಇಂಡಿಯಾ ಸಕಲ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ. ಎರಡನೇ ಟೆಸ್ಟ್ ಡೇ ಆಂಡ್ ನೈಟ್ ನಡೆಯಲಿದ್ದು, ಪಿಂಕ್ ಬಾಲ್ ಟೆಸ್ಟ್‌ಗೆ ಟೀಮ್ ಇಂಡಿಯಾ ಭರ್ಜರಿ ತಯಾರಿ ನಡೆಸಿದೆ. ಈಗಾಗಲೇ ಮೊದಲ ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿರುವ ಟೀಮ್ ಇಂಡಿಯಾ ಎರಡನೇ ಟೆಸ್ಟ್ ಗೆದ್ದು ಸರಣಿಯಲ್ಲಿ ಮುನ್ನಡೆ ಸಾಧಿಸುವ ಕನಸು ಹೊಂದಿದೆ.
ಆಡಿಲೇಡ್‌ನಲ್ಲಿ ಎರಡನೇ ಟೆಸ್ಟ್ ನಡೆಯಲಿದೆ. ಈ ಟೆಸ್ಟ್ ಹಗಲು ರಾತ್ರಿಯದ್ದಾಗಿರಲಿದೆ. ಹೀಗಾಗಿ ಟೀಮ್ ಇಂಡಿಯಾ ಡೇ-ಆಂಡ್ ನೈಟ್ ಟೆಸ್ಟ್‌ನಲ್ಲಿ ಹೇಗೆ ಆಡಿದೆ ಏನು ಹೇಳುತ್ತವೆ ಅಂಕಿ ಅಂಶಗಳ ಬಗ್ಗೆ ಚರ್ಚೆಗಳು ಆರಂಭವಾಗಿವೆ. ಇದಕ್ಕೆ ಉತ್ತರ ಇಲ್ಲಿದೆ.

ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮಾ ಅವರು ತಂಡವನ್ನು ಸೇರಿಕೊಂಡಿದ್ದು, ಒಳ್ಳೆಯ ಸುದ್ದಿ. ಇದಲ್ಲದೆ ಟೀಮ್ ಇಂಡಿಯಾದ ಭರವಸೆಯ ಬ್ಯಾಟರ್ ಶುಭಮನ್ ಗಿಲ್ ಫಿಟ್ ಆಗುವ ಸಾಧ್ಯತೆ ಇದೆ. ಇವರಿಬ್ಬರೂ ತಂಡಕ್ಕೆ ಆಗಮಿಸಿದ್ದರಿಂದ ಟೀಮ್ ಇಂಡಿಯಾದ ಬ್ಯಾಟಿಂಗ್ ಲೈನ್ ಅಪ್ ಬಲಾಢ್ಯವಾದಂತೆ ಕಾಣುತ್ತಿದೆ. ಇವರಿಬ್ಬರೂ ತಂಡಕ್ಕೆ ಮರಳಿದರೆ ಯಾರನ್ನು ಕೈ ಬಿಡಬೇಕು ಎಂಬ ಚಿಂತೆ ಟೀಮ್ ಮ್ಯಾನೇಜ್ಮೆಂಟ್‌ಗೆ ಕಾಡುತ್ತಿದೆ. ಮೊದಲ ಟೆಸ್ಟ್ ಪಂದ್ಯದಲ್ಲಿ ತಂಡವನ್ನು ಸೇರಿಕೊಂಡಿದ್ದ ದೇವದತ್ ಪಡಿಕ್ಕಲ್ ಹಾಗೂ ಧ್ರುವ್ ಜುರೇಲ್ ಎರಡನೇ ಟೆಸ್ಟ್ ಪಂದ್ಯದಲ್ಲಿ ಬೆಂಚ್ ಕಾಯುವ ಸಾಧ್ಯತೆ ಇದೆ.
ಭಾರತ ಈ ವರೆಗೆ ನಾಲ್ಕು ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ಆಡಿದ್ದು, ಮೂರರಲ್ಲಿ ಜಯ ಸಾಧಿಸಿದೆ. ಈ ಅಂಕಿ ಅಂಶಗಳನ್ನು ನೋಡಿದರೆ ಹಗಲು ರಾತ್ರಿ ಟೆಸ್ಟ್‌ನಲ್ಲಿ ಟೀಮ್ ಇಂಡಿಯಾದ ಗೆಲುವಿನ ಶೇಕಡಾ ವಾರು 75 ರಷ್ಟಿದೆ. ಆಡಿಲೇಡ್‌ನಲ್ಲಿ ನಡೆದ ಹಗಲು ರಾತ್ರಿ ಟೆಸ್ಟ್ ಪಂದ್ಯವನ್ನು ನಾಲ್ಕು ವರ್ಷಗಳ ಹಿಂದೆ ಸೋಲು ಕಂಡಿತ್ತು. ಬಳಿಕ ಆಡಿದ ಮೂರು ಟೆಸ್ಟ್ ಪಂದ್ಯದಲ್ಲಿ ಜಯ ಸಾಧಿಸಿದೆ.
ಟೀಮ್ ಇಂಡಿಯಾ ಪರ ನಾಲ್ಕು ಟೆಸ್ಟ್ ಪಂದ್ಯಗಳನ್ನು ಆಡಿದ ಬ್ಯಾಟರ್ ಎಂಬ ಹೆಗ್ಗಳಿಕೆ ವಿರಾಟ್ ಕೊಹ್ಲಿ ಅವರಿಗೆ ಸಲ್ಲುತ್ತದೆ. ಇವರು ಆಡಿದ 4 ಪಂದ್ಯಗಳಲ್ಲಿ 46.16ರ ಸರಾಸರಿಯಲ್ಲಿ 277 ರನ್ ಸಿಡಿಸಿದ್ದಾರೆ. ಇನ್ನು ಟೀಮ್ ಇಂಡಿಯಾ ಹಾಲಿ ನಾಯಕ ರೋಹಿತ್ ಶರ್ಮಾ 3 ಪಂದ್ಯಗಳನ್ನು ಆಡಿದ್ದು 173 ರನ್ ಸಿಡಿಸಿದ್ದಾರೆ. ಈ ವೇಳೆ ಇವರ ಸರಾಸರಿ 43.25 ಆಗಿತ್ತು. ಇನ್ನು ಶ್ರೇಯಸ್ ಅಯ್ಯರ್ ಆಡಿದ ಒಂದು ಪಂದ್ಯಗಳಲ್ಲಿ 79.50ರ ಸರಾಸರಿಯಲ್ಲಿ 155 ರನ್ ಬಾರಿಸಿದ್ದಾರೆ.

ಡೇ ಆಂಡ್ ನೈಟ್ ಟೆಸ್ಟ್ ಪಂದ್ಯದಲ್ಲಿ ಆರ್ ಅಶ್ವಿನ್ ಅಮೋಘ ಪ್ರದರ್ಶನ ನೀಡಿದ್ದಾರೆ. ಇವರು 4 ಟೆಸ್ಟ್ ಪಂದ್ಯಗಳಲ್ಲಿ 13.83 ಎಕನಾಮಿಯಲ್ಲಿ 18 ವಿಕೆಟ್ ಪಡೆದಿದ್ದಾರೆ. ಇನ್ನು ಅಕ್ಷರ್ ಪಟೇಲ್ 2 ಟೆಸ್ಟ್ ಪಂದ್ಯಗಳಲ್ಲಿ 14 ವಿಕೆಟ್, ಉಮೇಶ್ ಯಾದವ್ 2 ಟೆಸ್ಟ್ ಪಂದ್ಯಗಳಲ್ಲಿ 11 ವಿಕೆಟ್ ಕಬಳಿಸಿದ್ದಾರೆ.
ಡಿಸೆಂಬರ್ 6 ರಂದು ನಡೆಯಲಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ಯಾರು ಹೇಗೆ ಪ್ರದರ್ಶನ ನಿಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.