For Quick Alerts
ALLOW NOTIFICATIONS  
For Daily Alerts
 

ಭಾರತ vs ದ.ಆಫ್ರಿಕಾ ಟೆಸ್ಟ್ ಸರಣಿಯಲ್ಲಿ ಗೆಲ್ಲುವ ತಂಡವನ್ನು ಊಹಿಸಿದ ಸೌರವ್ ಗಂಗೂಲಿ

India has the best chance to win in South Africa this time says Sourav Ganguly

ಬಿಸಿಸಿಐ ಮತ್ತು ಭಾರತ ಟೆಸ್ಟ್ ತಂಡದ ನಾಯಕ ವಿರಾಟ್ ಕೊಹ್ಲಿ ನಡುವಿನ ಕಿತ್ತಾಟದಿಂದ ಒಡೆದ ಮನೆಯಂತಾಗಿರುವ ಟೀಂ ಇಂಡಿಯಾ ಸದ್ಯ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡಿದ್ದು 3 ಪಂದ್ಯಗಳ ಟೆಸ್ಟ್ ಸರಣಿ ಮತ್ತು 3 ಪಂದ್ಯಗಳ ಏಕದಿನ ಸರಣಿಗಳಲ್ಲಿ ಹರಿಣಗಳ ವಿರುದ್ಧ ಸೆಣಸಾಟ ನಡೆಸಲಿದೆ.

ಇನ್ನು ಇತ್ತೀಚೆಗಷ್ಟೇ ಭಾರತ ಪ್ರವಾಸವನ್ನು ಕೈಗೊಂಡಿದ್ದ ನ್ಯೂಜಿಲೆಂಡ್ ವಿರುದ್ಧ ನಡೆದ 3 ಪಂದ್ಯಗಳ ಟಿ ಟ್ವೆಂಟಿ ಸರಣಿ ಮತ್ತು 2 ಪಂದ್ಯಗಳ ಟೆಸ್ಟ್ ಸರಣಿಗಳಲ್ಲಿ ಜಯ ಸಾಧಿಸಿರುವ ಹುಮ್ಮಸ್ಸಿನಲ್ಲಿರುವ ಟೀಮ್ ಇಂಡಿಯಾ ತನ್ನ ಗೆಲುವಿನ ನಾಗಾಲೋಟವನ್ನು ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಗಳಲ್ಲಿಯೂ ಮುಂದುವರೆಸುವ ಯೋಜನೆಯಲ್ಲಿದೆ. ಇಂಗ್ಲೆಂಡ್ ಪ್ರವಾಸವನ್ನು ಕೈಗೊಂಡು ಆಂಗ್ಲರ ನೆಲದಲ್ಲಿ ಇಂಗ್ಲೆಂಡ್ ತಂಡಕ್ಕೆ ಮತ್ತು ಆಸ್ಟ್ರೇಲಿಯ ಪ್ರವಾಸಗಳನ್ನು ಕೈಗೊಂಡು ಆಸ್ಟ್ರೇಲಿಯಾ ನೆಲದಲ್ಲಿ ಆಸ್ಟ್ರೇಲಿಯನ್ನರಿಗೆ ಟೆಸ್ಟ್ ಸರಣಿ ಸೋಲಿನ ರುಚಿಯನ್ನು ತೋರಿಸಿರುವ ಕೊಹ್ಲಿ ಪಡೆ ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಜಯ ಸಾಧಿಸುವುದರ ಮೂಲಕ ಹರಿಣಗಳ ನೆಲದಲ್ಲಿ ಭಾರತದ ಚೊಚ್ಚಲ ಟೆಸ್ಟ್ ಸರಣಿ ಗೆಲುವಿನ ಖಾತೆ ತೆರೆಯುವತ್ತ ಚಿತ್ತ ನೆಟ್ಟಿದೆ.

ಹೌದು, ಭಾರತ ಇದುವರೆಗೂ ಒಟ್ಟು 7 ಬಾರಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟೆಸ್ಟ್ ಸರಣಿಗಳನ್ನು ಆಡಿದ್ದು ಯಾವುದೇ ಸರಣಿಯಲ್ಲಿಯೂ ಕೂಡಾ ಗೆದ್ದಿಲ್ಲ. ಕಳೆದ ಬಾರಿ ವಿರಾಟ್ ಕೊಹ್ಲಿ ನಾಯಕತ್ವದಲ್ಲಿ ಪ್ರವಾಸ ಕೈಗೊಂಡಿದ್ದಾಗಲೂ ಸಹ ಟೀಮ್ ಇಂಡಿಯಾ ಸೌತ್ ಆಫ್ರಿಕಾ ವಿರುದ್ಧ 1-2 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಸೋತಿತ್ತು. ಹೀಗಾಗಿ ಎಂಟನೇ ಬಾರಿ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಕೈಗೊಂಡು ಟೆಸ್ಟ್ ಸರಣಿ ಆಡುತ್ತಿರುವ ಟೀಂ ಇಂಡಿಯಾ ಈ ಸರಣಿಯಲ್ಲಿ ಗೆಲ್ಲುವುದರ ಮೂಲಕ ತನ್ನ ಕೆಟ್ಟ ದಾಖಲೆಯನ್ನು ಅಳಿಸಿ ಹಾಕಬೇಕಿದೆ.

ಹೀಗೆ ವಿರಾಟ್ ಕೊಹ್ಲಿ ತನ್ನ ನಾಯಕತ್ವದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಗೆಲ್ಲುವುದರ ಮೂಲಕ ಟೀಮ್ ಇಂಡಿಯಾದ ಕೆಟ್ಟ ದಾಖಲೆಯನ್ನು ಅಳಿಸಿ ಹಾಕುವುದು ಮಾತ್ರವಲ್ಲದೇ ತನ್ನನ್ನು ಭಾರತ ಏಕದಿನ ತಂಡದ ನಾಯಕತ್ವದಿಂದ ತೆಗೆದು ಹಾಕಿರುವ ಬಿಸಿಸಿಐಗೆ ತನ್ನ ನಾಯಕತ್ವದ ಸಾಮರ್ಥ್ಯವೇನು ಎಂಬುದನ್ನು ತೋರಿಸಿಕೊಳ್ಳಲು ಇದೊಂದು ಉತ್ತಮ ಅವಕಾಶ ಎಂದೇ ಹೇಳಬಹುದು.

ಇನ್ನು ವಿರಾಟ್ ಕೊಹ್ಲಿ ನಡೆಸಿದ ಮಾಧ್ಯಮಗೋಷ್ಠಿಯಿಂದಾಗಿ ಭಾರತ ಕ್ರಿಕೆಟ್ ತಂಡದ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿರುವ ಬಿಸಿಸಿಐನ ಅಧ್ಯಕ್ಷ ಸೌರವ್ ಗಂಗೂಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಟೆಸ್ಟ್ ಸರಣಿಯ ಕುರಿತು ಮಾತನಾಡಿದ್ದು, ಈ ಕಾಳಗದಲ್ಲಿ ಯಾವ ತಂಡ ಗೆಲುವು ಸಾಧಿಸಲಿದೆ ಎಂಬುದನ್ನು ಊಹಿಸಿದ್ದಾರೆ. ಬ್ಯಾಕ್ ಸ್ಟೇಜ್ ವಿತ್ ಬೋರಿಯಾ ಎಂಬ ವಿಶೇಷ ಶೋನಲ್ಲಿ ಮಾತನಾಡಿರುವ ಸೌರವ್ ಗಂಗೂಲಿ ದಕ್ಷಿಣ ಆಫ್ರಿಕಾ ನೆಲದಲ್ಲಿ ನಾವು ಈ ಬಾರಿ ಗೆಲ್ಲುವ ಸಾಧ್ಯತೆಗಳನ್ನು ಹೆಚ್ಚಾಗಿ ಹೊಂದಿದ್ದೇವೆ ಎಂದು ಹೇಳಿಕೆಯನ್ನು ನೀಡಿದ್ದಾರೆ. ಹೀಗೆ ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿ ಕುರಿತು ಮಾತನಾಡಿದ ಸೌರವ್ ಗಂಗೂಲಿ ತಂಡದ ನಾಯಕ ವಿರಾಟ್ ಕೊಹ್ಲಿ ಕುರಿತಾಗಿ ಯಾವುದೇ ರೀತಿಯ ಹೇಳಿಕೆಗಳನ್ನು ಕೂಡ ನೀಡದೇ ಇರುವುದು ಸದ್ಯ ವಿರಾಟ್ ಕೊಹ್ಲಿ ಮತ್ತು ಸೌರವ್ ಗಂಗೂಲಿ ನಡುವೆ ಎಲ್ಲವೂ ಸರಿಯಿಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

ಭಾರತ ಮತ್ತು ದಕ್ಷಿಣ ಆಫ್ರಿಕಾ ಸರಣಿಗಳ ವೇಳಾಪಟ್ಟಿ

ಮೊದಲಿಗೆ ಇತ್ತಂಡಗಳ ನಡುವೆ ಟೆಸ್ಟ್ ಸರಣಿ ನಡೆಯಲಿದ್ದು ಇದರ ವೇಳಾ ಪಟ್ಟಿ ಈ ಕೆಳಕಂಡಂತಿದೆ

ಮೊದಲ ಟೆಸ್ಟ್‌: ಡಿಸೆಂಬರ್ 26-30, ಸೂಪರ್‌ಸ್ಪೋರ್ಟ್ಸ್ ಪಾರ್ಕ್‌, ಸೆಂಚುರಿಯನ್

ಎರಡನೇ ಟೆಸ್ಟ್: ಜನವರಿ 3-7, ವಾಂಡರರ್ಸ್ ಕ್ರೀಡಾಂಗಣ, ಜೋಹಾನ್ಸ್‌ಬರ್ಗ್

ಮೂರನೇ ಟೆಸ್ಟ್: ಜನವರಿ 11-15, ನ್ಯೂಲ್ಯಾಂಡ್ಸ್, ಕೇಪ್‌ ಟೌನ್

ಹೀಗೆ 3 ಪಂದ್ಯಗಳ ಟೆಸ್ಟ್ ಸರಣಿ ಮುಗಿದ ನಂತರ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು ಅದರ ವೇಳಾಪಟ್ಟಿ ಹೀಗಿದೆ

ಮೊದಲ ಏಕದಿನ: ಜನವರಿ 19 , ಬೆಟ್ವೇ, ಸಮಯ - 2.00 PM

ಎರಡನೇ ಏಕದಿನ: ಜನವರಿ 21, ಪಾರ್ಕ್, ಪಾರ್ಲ್, ಸಮಯ - 2.00 PM

ಮೂರನೇ ಏಕದಿನ: ಜನವರಿ 23, ನ್ಯೂಲ್ಯಾಂಡ್ಸ್, ಕೇಪ್‌ ಟೌನ್, ಸಮಯ - 2.00 PM

Story first published: Friday, December 17, 2021, 23:34 [IST]
Other articles published on Dec 17, 2021
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+