Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs BAN: ಕಾನ್ಪುರ ಟೆಸ್ಟ್ ಗೆಲ್ಲುವ ಮೂಲಕ ಭಾರತಕ್ಕೆ ಇತಿಹಾಸ ಸೃಷ್ಟಿಸುವ ಅವಕಾಶ

ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಭಾರೀ ಕುತೂಹಲ ಮೂಡಿಸಿದೆ. ಕಾನ್ಪುರದ ಐತಿಹಾಸಿಕ ಗ್ರೀನ್ ಪಾರ್ಕ್‌ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಟೆಸ್ಟ್ ಪಂದ್ಯವನ್ನು ಗೆಲ್ಲಲು ಉಭಯ ತಂಡಗಳು ಭರ್ಜರಿ ತಯಾರಿ ನಡೆಸಿವೆ.

ಟೆಸ್ಟ್ ಕ್ರಿಕೆಟ್‌ನಲ್ಲಿ ಭಾರತವನ್ನು ತವರಿನಲ್ಲಿ ಸೋಲಿಸುವುದು ಪ್ರವಾಸಿ ಬಾಂಗ್ಲಾದೇಶ ತಂಡಕ್ಕೆ ಕನಸಿನ ಮಾತಾಗಿದೆ. ಆದರೆ ಬಾಂಗ್ಲಾದೇಶ ತಂಡವನ್ನು ಟೀಮ್ ಇಂಡಿಯಾ ಲಘುವಾಗಿ ಪರಿಗಣಿಸುವಂತಿಲ್ಲ. ಇತ್ತೀಚೆಗೆ ಪಾಕಿಸ್ತಾನವನ್ನು ತವರಿನಲ್ಲಿ ಸೋಲಿಸುವ ಮೂಲಕ ಬಾಂಗ್ಲಾದೇಶ ಟೆಸ್ಟ್ ಕ್ರಿಕೆಟ್‌ನಲ್ಲಿ ಸಂಚಲನ ಮೂಡಿಸಿದೆ.

India have chance to create history by winning the second Test against Bangladesh

ರೋಹಿತ್ ಶರ್ಮಾ ನೇತೃತ್ವದ ಟೀಮ್ ಇಂಡಿಯಾ ಶತಾಯಗತಾಯ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿದೆ. ಒಂದು ವೇಳೆ ಕಾನ್ಪುರ ಟೆಸ್ಟ್ ಗೆಲ್ಲುವಲ್ಲಿ ಟೀಮ್ ಇಂಡಿಯಾ ಯಶಸ್ವಿಯಾದರೆ, ವಿಶ್ವ ಕ್ರಿಕೆಟ್‌ನಲ್ಲಿ ಹೊಸ ಮೈಲಿಗಲ್ಲು ಸಾಧಿಸಲಿದೆ. ಇದಲ್ಲದೆ, ಈ ಮಹತ್ತರ ಸಾಧನೆಯನ್ನು ಮಾಡಿದ ವಿಶ್ವದ ಮೊದಲ ತಂಡ ಟೀಮ್ ಇಂಡಿಯಾ ಎಂಬ ಹೆಗ್ಗಳಿಕೆಗೂ ಪಾತ್ರವಾಗಲಿದೆ.

ಭಾರತ ವಿಶ್ವ ದಾಖಲೆ

ಕಳೆದ 12 ವರ್ಷಗಳಿಂದ ಭಾರತ ತವರಿನಲ್ಲಿ ಯಾವುದೇ ಟೆಸ್ಟ್ ಸರಣಿಯನ್ನು ಕಳೆದುಕೊಂಡಿಲ್ಲ. 2012ರ ನವೆಂಬರ್ ತಿಂಗಳಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಸೋಲಿನ ಬಳಿಕ ಭಾರತ ತಂಡವು ತವರಿನಲ್ಲಿ ಒಂದೇ ಒಂದು ಟೆಸ್ಟ್ ಸರಣಿಯನ್ನು ಕಳೆದುಕೊಂಡಿಲ್ಲ. 2012 ನಂತರ ತವರಿನಲ್ಲಿ ನಡೆದ 52 ಟೆಸ್ಟ್ ಪಂದ್ಯಗಳಲ್ಲಿ ಭಾರತ ಕೇವಲ 4 ರಲ್ಲಿ ಮಾತ್ರ ಸೋತರೆ, 41 ಟೆಸ್ಟ್ ಪಂದ್ಯಗಳನ್ನು ಗೆದ್ದು ಬೀಗಿದೆ. ಈ ಅವಧಿಯಲ್ಲಿ 7 ಟೆಸ್ಟ್ ಪಂದ್ಯಗಳು ಡ್ರಾದಲ್ಲಿ ಅಂತ್ಯಗೊಂಡಿವೆ.

ತವರಿನಲ್ಲಿ ಅತಿ ಹೆಚ್ಚು ಟೆಸ್ಟ್ ಸರಣಿಗಳನ್ನು ಗೆದ್ದಿರುವ ಟೀಮ್ ಇಂಡಿಯಾ ಅಗ್ರಸ್ಥಾನದಲ್ಲಿದೆ. ಭಾರತ ತಂಡದ ನಂತರ ಆಸ್ಟ್ರೇಲಿಯಾ ಎರಡನೇ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ ತವರಿನಲ್ಲಿ ಸತತ 10 ಟೆಸ್ಟ್ ಸರಣಿಗಳನ್ನು ದಾಖಲೆ ಬರೆದಿತ್ತು. ಒಂದು ವೇಳೆ ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಸರಣಿಯನ್ನು ಗೆದ್ದು ಭಾರತ ಯಶಸ್ವಿಯಾದರೆ, ಬೃಹತ್ ದಾಖಲೆ ದಾಖಲಾಗಲಿದೆ. ಇದು ತವರಿನಲ್ಲಿ ಭಾರತಕ್ಕೆ ಸತತ 18ನೇ ಟೆಸ್ಟ್ ಸರಣಿ ಜಯವಾಗಲಿದೆ. ವಿಶ್ವ ಕ್ರಿಕೆಟ್‌ನಲ್ಲಿ ಈವರೆಗೆ ಯಾವುದೇ ತಂಡಕ್ಕೆ ಈ ಸಾಧನೆ ಮಾಡಲು ಸಾಧ್ಯವಾಗಿಲ್ಲ.

ಬಾಂಗ್ಲಾದೇಶ ವಿರುದ್ಧದ ಎರಡನೇ ಟೆಸ್ಟ್‌ಗೆ ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಬ್ ಪಂತ್ (ವಿಕೆಟ್ ಕೀಪರ್), ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲ್‌ದೀಪ್ ಯಾದವ್, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.

ವೇಳಾಪಟ್ಟಿ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟೆಸ್ಟ್ ಪಂದ್ಯ ಸೆಪ್ಟೆಂಬರ್ 27 ರಿಂದ ಅಕ್ಟೋಬರ್ 1 ರವರೆಗೆ ನಡೆಯಲಿದ್ದು, ಬೆಳಗ್ಗೆ 9.30 ಗಂಟೆಗೆ ಕಾನ್ಪುರದ ಗ್ರೀನ್ ಪಾರ್ಕ್‌ ಸ್ಟೇಡಿಯಂನಲ್ಲಿ ಆರಂಭವಾಗಲಿದೆ.

Story first published: Thursday, September 26, 2024, 7:57 [IST]
Other articles published on Sep 26, 2024
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+