'ನೀನು ಧೋನಿ ರೀತಿಯ ವಿಕೆಟ್ ಕೀಪರ್‌ ಅಲ್ಲ'; ರಿಷಭ್ ಪಂತ್‌ಗೆ ಕುಟುಕಿದ ವಿರಾಟ್ ಕೊಹ್ಲಿ!

ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯು ಅಂತಿಮ ಘಟ್ಟಕ್ಕೆ ತಲುಪಿದ್ದು, ಟೂರ್ನಿಯ ಫೈನಲ್ ಪಂದ್ಯ ನಿನ್ನೆ ( ಅಕ್ಟೋಬರ್ ೧೫ ) ಎಂಎಸ್ ಧೋನಿ ನೇತೃತ್ವದ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಇಯಾನ್ ಮಾರ್ಗನ್ ನೇತೃತ್ವದ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಗಳ ನಡುವೆ ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯಿತು.

ಐಪಿಎಲ್ 2021 ಫೈನಲ್: ಇದೇ ಧೋನಿ ಕೊನೆಯ ಪಂದ್ಯವಾಗುತ್ತಾ?; ಹೌದು ಎನ್ನುತ್ತಿವೆ ಈ 3 ಅಂಶಗಳುಐಪಿಎಲ್ 2021 ಫೈನಲ್: ಇದೇ ಧೋನಿ ಕೊನೆಯ ಪಂದ್ಯವಾಗುತ್ತಾ?; ಹೌದು ಎನ್ನುತ್ತಿವೆ ಈ 3 ಅಂಶಗಳು

ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ರುತುರಾಜ್ ಗಾಯಕ್ವಾಡ್, ಫಾಫ್ ಡು ಪ್ಲೆಸಿಸ್, ರಾಬಿನ್ ಉತ್ತಪ್ಪ ಮತ್ತು ಮೊಯಿನ್ ಅಲಿ ಅವರ ಅಮೋಘ ಬ್ಯಾಟಿಂಗ್ ಪ್ರದರ್ಶನದಿಂದ 20 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ 192 ರನ್ ಗಳಿಸಿತು. ನಂತರ ಬ್ಯಾಟಿಂಗ್ ಮಾಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 165 ರನ್‌ ಗಳಿಸಿತು. ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡ 27 ರನ್‌ಗಳ ಜಯ ಸಾಧಿಸುವುದರ ಮೂಲಕ ನಾಲ್ಕನೇ ಬಾರಿ ಐಪಿಎಲ್ ಟ್ರೋಫಿಯನ್ನು ತನ್ನ ಮುಡಿಗೇರಿಸಿಕೊಂಡಿತು.

ಹೀಗೆ ಇಷ್ಟು ದಿನಗಳ ಕಾಲ ಸಾಕಷ್ಟು ಚರ್ಚೆ ಮತ್ತು ಸುದ್ದಿಗಳಿಗೆ ಕಾರಣವಾಗಿದ್ದ ಹದಿನಾಲ್ಕನೇ ಆವೃತ್ತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಗೆ ತೆರೆ ಬೀಳುತ್ತಿರುವ ಬೆನ್ನಲ್ಲೇ ಅಕ್ಟೋಬರ್ 17ರ ಭಾನುವಾರದಿಂದ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭವಾಗಲಿದೆ.

ರನ್ ಬಾರಿಸಲಾಗದ ಆತನ ಅವಶ್ಯಕತೆ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿಗೆ ಇಲ್ಲ: ಬ್ರಿಯಾನ್ ಲಾರಾರನ್ ಬಾರಿಸಲಾಗದ ಆತನ ಅವಶ್ಯಕತೆ ಮುಂದಿನ ಐಪಿಎಲ್ ಆವೃತ್ತಿಯಲ್ಲಿ ಆರ್‌ಸಿಬಿಗೆ ಇಲ್ಲ: ಬ್ರಿಯಾನ್ ಲಾರಾ

ಹೌದು ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿ ಮುಗಿದ 2 ದಿನಗಳ ಬೆನ್ನಲ್ಲೇ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿ ಆರಂಭಗೊಳ್ಳುತ್ತಿರುವುದು ಕ್ರಿಕೆಟ್ ಅಭಿಮಾನಿಗಳಿಗೆ ದೊಡ್ಡ ಮಟ್ಟದ ಮನರಂಜನೆಯ ರಸದೌತಣವನ್ನೇ ಬಡಿಸಿದಂತಾಗಲಿದೆ. ಇನ್ನು ಈ ಪ್ರತಿಷ್ಠಿತ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ತಂಡ ತನ್ನ ಮೊದಲ ಲೀಗ್ ಹಂತದ ಪಂದ್ಯವನ್ನು ಅಕ್ಟೋಬರ್ 24ರ ಭಾನುವಾರದಂದು ಆಡಲಿದ್ದು ಈ ಪಂದ್ಯದಲ್ಲಿ ತನ್ನ ಬದ್ಧವೈರಿ ಪಾಕಿಸ್ತಾನದ ಜತೆ ಸೆಣಸಾಟ ನಡೆಸಲಿದೆ.

ಹೀಗೆ ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯ ಕುರಿತು ಭಾರತ ಕ್ರಿಕೆಟ್ ಅಭಿಮಾನಿಗಳಲ್ಲಿ ಮಾತ್ರವಲ್ಲದೆ ವಿಶ್ವದಾದ್ಯಂತ ಇರುವ ಕ್ರಿಕೆಟ್ ಅಭಿಮಾನಿಗಳಲ್ಲಿಯೂ ದಿನದಿಂದ ದಿನಕ್ಕೆ ಕುತೂಹಲ ಹೆಚ್ಚಾಗುತ್ತಿದೆ. ಇನ್ನು ಟಿ ಟ್ವೆಂಟಿ ವಿಶ್ವಕಪ್ ಟೂರ್ನಿಯನ್ನು ಪ್ರಸಾರ ಮಾಡಲಿರುವ ಸ್ಟಾರ್ ನೆಟ್‌ವರ್ಕ್ ಸಂಸ್ಥೆಯು ವೀಕ್ಷಕರನ್ನು ಟೂರ್ನಿಯತ್ತ ಸೆಳೆಯಲು ನಾನಾ ರೀತಿಯ ಕಸರತ್ತುಗಳನ್ನು ಮಾಡುತ್ತಿದೆ. ಭಿನ್ನವಿಭಿನ್ನವಾದ ಪ್ರೊಮೋಗಳನ್ನು ಬಿಡುಗಡೆ ಮಾಡುತ್ತಿರುವ ಸ್ಟಾರ್ ನೆಟ್‌ವರ್ಕ್ ಇತ್ತೀಚೆಗಷ್ಟೇ ನೂತನ ಪ್ರೋಮೊ ಒಂದನ್ನು ಬಿಡುಗಡೆ ಮಾಡಿದ್ದು ಇದರಲ್ಲಿ ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ವಿಕೆಟ್ ಕೀಪರ್ ರಿಷಭ್ ಪಂತ್ ವಿಶೇಷ ವಿಡಿಯೋ ಕಾಲ್ ಸಂಭಾಷಣೆಯಲ್ಲಿ ತೊಡಗಿದ್ದಾರೆ. ಹೀಗೆ ವಿರಾಟ್ ಕೊಹ್ಲಿ ಮತ್ತು ರಿಷಭ್ ಪಂತ್ ನಡುವೆ ನಡೆಯುವ ವಿಡಿಯೋ ಕಾಲ್ ಸಂಭಾಷಣೆಯನ್ನು ಚಿತ್ರಿಸಿ ಪ್ರೋಮೋ ರೀತಿ ಬಿಡುಗಡೆ ಮಾಡಿದ್ದು ಸಾಕಷ್ಟು ವೈರಲ್ ಆಗಿದೆ.

ಹೀಗೆ ಬಿಡುಗಡೆಯಾಗಿರುವ ವಿಡಿಯೋ ಪ್ರೋಮೋದಲ್ಲಿ "ರಿಷಭ್, ಟಿ ಟ್ವೆಂಟಿ ಕ್ರಿಕೆಟ್‍ನಲ್ಲಿ ಬಾರಿಸುವ ಸಿಕ್ಸರ್ ಪಂದ್ಯಗಳನ್ನು ಗೆಲ್ಲಿಸಲಿದೆ" ಎಂದು ವಿರಾಟ್ ಕೊಹ್ಲಿ ರಿಷಭ್ ಪಂತ್ ಅವರಿಗೆ ಹೇಳುತ್ತಾರೆ. ಇದಕ್ಕೆ ಪ್ರತ್ಯುತ್ತರವಾಗಿ ಮಾತನಾಡುವ ರಿಷಭ್ ಪಂತ್ "ತಲೆ ಕೆಡಿಸಿಕೊಳ್ಳಬೇಡಿ, ನಾನು ಪ್ರತಿನಿತ್ಯ ಅದರ ಕುರಿತು ಅಭ್ಯಾಸ ನಡೆಸುತ್ತಿದ್ದೇನೆ. ಭಾರತಕ್ಕೆ ವಿಶ್ವಕಪ್ ಗೆದ್ದದ್ದು ಓರ್ವ ವಿಕೆಟ್ ಕೀಪರ್ ಬಾರಿಸಿದ ಸಿಕ್ಸರ್ ಮೂಲಕ ಎಂಬುದನ್ನು ಮರೆಯಬೇಡಿ" ಎಂದು ವಿರಾಟ್ ಕೊಹ್ಲಿಗೆ ಟಾಂಗ್ ನೀಡುತ್ತಾರೆ.

IPL ಚಾಂಪಿಯನ್ ತಂಡಕ್ಕೆ ಸಿಕ್ಕ ಬಹುಮಾನ ಮೊತ್ತವೆಷ್ಟು? RCBಗೆ ಎಷ್ಟು ಸಿಕ್ತು? | Oneindia Kannada

ರಿಷಭ್ ಪಂತ್ ನೀಡಿದ ಈ ಉತ್ತರಕ್ಕೆ ಸುಮ್ಮನಾಗದ ವಿರಾಟ್ ಕೊಹ್ಲಿ "ನಿಜ ಆದರೆ ಮಹೇಂದ್ರ ಸಿಂಗ್ ಧೋನಿ ರೀತಿಯ ಮತ್ತೊಬ್ಬ ವಿಕೆಟ್ ಕೀಪರ್ ನಂತರದ ದಿನಗಳಲ್ಲಿ ಭಾರತಕ್ಕೆ ದೊರೆತೇ ಇಲ್ಲ" ಎಂದು ಹೇಳಿಕೆ ನೀಡುವುದರ ಮೂಲಕ ರಿಷಭ್ ಪಂತ್ ಅವರ ಕಾಲನ್ನು ಎಳೆದಿದ್ದಾರೆ. ಸದ್ಯ ಈ ವಿಡಿಯೋವನ್ನು ಸ್ಟಾರ್ ನೆಟ್‌ವರ್ಕ್ ಇನ್ ಸ್ಟಾಗ್ರಾಂ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದ್ದು ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

For Quick Alerts
ALLOW NOTIFICATIONS
For Daily Alerts
Story first published: Friday, October 15, 2021, 16:56 [IST]
Other articles published on Oct 15, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X