IND vs AUS: ಭಾರತ ಎದುರು ದಶಕಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿ ಗೆದ್ದ ಆಸ್ಟ್ರೇಲಿಯಾ
ಸಿಡ್ನಿಯಲ್ಲಿ ನಡೆದ ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯವನ್ನು ಆಸ್ಟ್ರೇಲಿಯಾ 6 ವಿಕೆಟ್‌ಗಳಿಂದ ಗೆದ್ದುಕೊಂಡಿದೆ. ಇದರೊಂದಿಗೆ 5 ಟೆಸ್ಟ್ ಪಂದ್ಯಗಳ ಟೆಸ್ಟ್ ಸರಣಿಯನ್ನು 3-1 ರಿಂದ ಆಸ್ಟ್ರೇಲಿಯಾ ವಶಪಡಿಸಿಕೊಂಡಿದೆ. ಕಾಂಗೂರು ಪಡೆ 10 ವರ್ಷಗಳ ಬಳಿಕ ಭಾರತ ವಿರುದ್ಧ ಟೆಸ್ಟ್ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿದೆ. ಆಸೀಸ್ 2014-15ರ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಗೆದ್ದು ದಾಖಲೆ ಬರೆದಿದೆ. ಇದರೊಂದಿಗೆ ಆಸ್ಟ್ರೇಲಿಯಾ ಎದುರು ಟೀಮ್ ಇಂಡಿಯಾ ದಶಕಗಳ ನಂತರ ಬಾರ್ಡರ್-ಗವಾಸ್ಕರ್ ಟ್ರೋಫಿಯನ್ನು ಕಳೆದುಕೊಂಡಿದ್ದು, ಗೆಲುವಿನ ಓಟಕ್ಕೆ ಬ್ರೇಕ್ ಬಿದ್ದಿದೆ.
ಪರ್ತ್ ಟೆಸ್ಟ್ ಸೋಲಿನ ಬಳಿಕ ಆಸ್ಟ್ರೇಲಿಯಾ ಪ್ರಬಲ ಪುನರಾಗಮನ ಮಾಡಿತು. ಅಡಿಲೇಡ್, ಮೆಲ್ಬೋರ್ನ್ ಮತ್ತು ಸಿಡ್ನಿಯಲ್ಲಿ ಭಾರತ ತಂಡವನ್ನು ಆಸ್ಟ್ರೇಲಯಾ ಬೌಲರ್‌ಗಳು ಕಟ್ಟಿ ಹಾಕುವಲ್ಲಿ ಪ್ರಮುಖ ಪಾತ್ರವಹಿಸಿದರು. ಈ ಐತಿಹಾಸಿಕ ಗೆಲುವಿನೊಂದಿಗೆ ಕಾಂಗರೂ ಪಡೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯೂಟಿಸಿ) ಫೈನಲ್‌ಗೆ ಲಗ್ಗೆ ಇಟ್ಟಿದೆ. ಇದೇ ವೇಳೆ ಭಾರತ ಪ್ರಶಸ್ತಿ ಸುತ್ತಿನಿಂದ ಹೊರಬಿದ್ದಿದೆ. ಜೂನ್‌ನಲ್ಲಿ ಇಂಗ್ಲೆಂಡ್‌ನ ಲಾರ್ಡ್ಸ್‌ನಲ್ಲಿ ಆಸ್ಟ್ರೇಲಿಯಾ ದಕ್ಷಿಣ ಆಫ್ರಿಕಾವನ್ನು ಎದುರಿಸಲಿದೆ.

ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಸಿಡ್ನಿ ಟೆಸ್ಟ್ ಪಂದ್ಯ ಭಾರೀ ಕೂತುಹಲ ಮೂಡಿಸಿತ್ತು. ಸಿಡ್ನಿ ಟೆಸ್ಟ್ ಪಂದ್ಯದ ಮೂರನೇ ದಿನವಾದ ಭಾನುವಾರ ಭಾರತ ತಂಡದ ಹಂಗಾಮಿ ನಾಯಕ ಜಸ್ಪ್ರೀತ್ ಬುಮ್ರಾ ಅವರು ಬ್ಯಾಟಿಂಗ್ ಮಾಡಿದರು. ಆದರೆ ಬೌಲಿಂಗ್‌ಗೆ ಹೊರಬರಲು ಸಾಧ್ಯವಾಗಲಿಲ್ಲ.
ಬೆನ್ನುನೋವಿನಿಂದಾಗಿ ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯಲ್ಲಿ 32 ವಿಕೆಟ್ ಪಡೆದಿರುವ ಬುಮ್ರಾ ಡ್ರೆಸ್ಸಿಂಗ್ ರೂಂನಲ್ಲಿ ಕುಳಿತುಕೊಳ್ಳಬೇಕಾಯಿತು. ಅವರ ಅನುಪಸ್ಥಿತಿಯಲ್ಲಿ, ಭಾರತ ತಂಡದ ಬೌಲಿಂಗ್ ಶಿಸ್ತುಬದ್ಧವಾಗಿ ಕಾಣಲಿಲ್ಲ. ಆದರೆ ಪ್ರಸಿದ್ಧ್ ಕೃಷ್ಣ ಮತ್ತು ಮೊಹಮ್ಮದ್ ಸಿರಾಜ್ ಅವರು ನಿರಂತರವಾಗಿ ರನ್ ನೀಡಿದರು. ಇದರಿಂದಾಗಿ ಭಾರತ ತಂಡ ಸೋಲನುಭವಿಸಬೇಕಾಯಿತು.
ಪಂದ್ಯ ಫಲಿತಾಂಶ
ಭಾರತ ಮೊದಲ ಇನಿಂಗ್ಸ್‌ನಲ್ಲಿ 185 ರನ್‌ಗಳಿಗೆ ಆಲೌಟಾಯಿತು. ಸಿಡ್ನಿಯಲ್ಲಿ ಟೀಮ್ ಇಂಡಿಯಾ ಬ್ಯಾಟರ್‌ಗಳು ಅಬ್ಬರಿಸಿದಿದ್ದರೂ, ಬೌಲರ್‌ಗಳು ಸದ್ದು ಮಾಡದರು. ಹೀಗಾಗಿ ಆಸ್ಟ್ರೇಲಿಯಾ ಮೊದಲ ಇನಿಂಗ್ಸ್‌ನಲ್ಲಿ 181 ರನ್ ಗಳಿಸಿತ್ತು. ಭಾರತ 4 ರನ್‌ಗಳ ಮುನ್ನಡೆ ಸಾಧಿಸಿತ್ತು. ಇದಾದ ಬಳಿಕ ಭಾರತ ಎರಡನೇ ಇನ್ನಿಂಗ್ಸ್‌ನಲ್ಲಿ 157 ರನ್ ಕಲೆ ಹಾಕಿತ್ತು. ಈ ಮೂಲಕ ಆಸ್ಟ್ರೇಲಯಾ ತಂಡಕ್ಕೆ ಭಾರತ 161 ರನ್‌ಗಳ ಗೆಲುವಿನ ಗುರಿ ನೀಡಿತು. ಕಾಂಗೂರು ಪಡೆ 4 ವಿಕೆಟ್ ನಷ್ಟಕ್ಕೆ 162 ರನ್ ಗಳಿಸಿ ಗೆಲುವು ಸಾಧಿಸಿತು.
ಭಾರತದ ಪರ ಪ್ರಸಿದ್ಧ್ ಕೃಷ್ಣ ಎರಡನೇ ಇನ್ನಿಂಗ್ಸ್‌ನಲ್ಲಿ ಮೂರು ವಿಕೆಟ್‌ಗಳನ್ನು ಕಬಳಿಸಿದರೂ, ಬೇರೆ ಬೌಲರ್‌ಗಳಿಂದ ಸಾಥ್ ಸಿಗಲಿಲ್ಲ. ಆಸ್ಟ್ರೇಲಿಯಾ ತಂಡದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತದ ಪರ ಪ್ರಸಿದ್ಧ್ ಕೃಷ್ಣ ಮತ್ತು ಸಿರಾಜ್ ತಲಾ ಮೂರು ವಿಕೆಟ್ ಪಡೆದರು. ಬುಮ್ರಾ ಮತ್ತು ನಿತೀಶ್ ಕುಮಾರ್ ರೆಡ್ಡಿ ತಲಾ ಎರಡು ವಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದರು. ಆದರೆ ಬುಮ್ರಾ ಎರಡನೇ ಇನ್ನಿಂಗ್ಸ್ ವೇಳೆ ಬೌಲಿಂಗ್ ಮಾಡಲು ಸಾಧ್ಯವಾಗಲಿಲ್ಲ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications