Year End 2024: ಭಾರತ ತಂಡಕ್ಕೆ 12 ವರ್ಷಗಳ ಬಳಿಕ ತವರಿನಲ್ಲಿ ಮುಖಭಂಗ
ನ್ಯೂಜಿಲೆಂಡ್ ವಿರುದ್ಧ ಭಾರತ 12 ವರ್ಷಗಳ ಬಳಿಕ ತವರಿನಲ್ಲಿ ಟೆಸ್ಟ್ ಸರಣಿ ಸೋಲು ಕಂಡಿತ್ತು. ಭಾರತ 2012 ರಿಂದ ತವರಿನಲ್ಲಿ ಸತತವಾಗಿ ಟೆಸ್ಟ್ ಸರಣಿ ಗೆಲ್ಲುವಲ್ಲಿ ಯಶಸ್ವಿಯಾಗಿತ್ತು. ಆದರೆ, ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ತವರಿನಲ್ಲಿ ಟೆಸ್ಟ್ ಸರಣಿಯನ್ನು ಸೋತಿತ್ತು. ನ್ಯೂಜಿಲೆಂಡ್ ತಂಡ ಭಾರತವನ್ನು 3-0 ಅಂತರದಿಂದ ಸೋಲಿಸಿ ಟೆಸ್ಟ್ ಸರಣಿಯನ್ನು ಗೆದ್ದುಕೊಂಡಿತ್ತು. ನ್ಯೂಜಿಲೆಂಡ್ ವಿರುದ್ಧ ಭಾರತ ತವರಿನಲ್ಲಿ ಮೊದಲ ಬಾರಿಗೆ ಕಳಪೆ ಪ್ರದರ್ಶನ ನೀಡಿತ್ತು. ಭಾರತ ತಂಡದ ಟಾಪ್ ಆರ್ಡರ್ ಬ್ಯಾಟರ್‌ಗಳು ಕಿವೀಸ್ ಪಡೆಯ ಬೌಲಿಂಗ್ ದಾಳಿಗೆ ತತ್ತರಿಸಿ ಹೋಗಿದ್ದರು.
ಬೆಂಗಳೂರಿನಲ್ಲಿ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ನಡೆದಿತ್ತು. ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಭಾರತ ಹೇಳಿಕೊಳ್ಳವಂತಹ ಪ್ರದರ್ಶನ ನೀಡಲಿಲ್ಲ. ಹೀಗಾಗಿ ನ್ಯೂಜಿಲೆಂಡ್ ತಂಡ 35 ವರ್ಷಗಳ ನಂತರ ಭಾರತದ ನೆಲದಲ್ಲಿ ಮೊದಲ ಟೆಸ್ಟ್ ಗೆಲುವು ದಾಖಲಿಸಿತ್ತು. ನಂತರ ಪುಣೆಯಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದಲ್ಲಿಯೂ ಭಾರತವನ್ನು ನ್ಯೂಜಿಲೆಂಡ್ ಬೌಲರ್‌ಗಳು ಕಾಡಿದ್ದರು.

ಪುಣೆ ಟೆಸ್ಟ್ ಪಂದ್ಯವನ್ನು ಭಾರತ ಗೆಲ್ಲುವು ನಿರೀಕ್ಷೆಯಲ್ಲಿತ್ತು. ಬೆಂಗಳೂರು ಟೆಸ್ಟ್ ಪಂದ್ಯದಲ್ಲಿ ಕಳೆಪ ಬ್ಯಾಟಿಂಗ್ ಪ್ರದರ್ಶನ ತೋರಿದ ಭಾರತ ಟಾಪ್ ಆರ್ಡರ್ ಬ್ಯಾಟರ್‌ಗಳು ಅಬ್ಬರಿಸಲಿದ್ದಾರೆ ಎಂದು ಕ್ರಿಕೆಟ್ ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದರು. ಆದರೆ ಭಾರತೀಯ ಕ್ರಿಕೆಟ್ ಅಭಿಮಾನಿಗಳು ಅಂದುಕೊಂಡಂತೆ ನಡೆಯಲಿಲ್ಲ. ಭಾರತದ ಲೆಕ್ಕಚಾರವನ್ನು ಕಿವೀಸ್ ಬೌಲರ್‌ಗಳು ಉಲ್ಟಾ ಮಾಡಿದ್ದರು. ಪರಿಣಾಮ ಪುಣೆ ಟೆಸ್ಟ್ ಪಂದ್ಯದಲ್ಲೂ ಭಾರತ ಸೋಲು ಕಂಡಿತ್ತು. ಇದರೊಂದಿಗೆ ಮೊದಲ ಬಾರಿಗೆ ಭಾರತ ವಿರುದ್ಧ ಮೂರು ಪಂದ್ಯಗಳ ಸರಣಿಯನ್ನು ನ್ಯೂಜಿಲೆಂಡ್ 2-0 ಅಂತರದಲ್ಲಿ ವಶಪಡಿಸಿಕೊಂಡಿತ್ತು.
ಭಾರತ ತವರಿನಲ್ಲಿ ಟೆಸ್ಟ್ ಸರಣಿ ಸೋತ ಬಳಿಕ ಹಲವು ಟೀಕೆಗಳಿಗೆ ಗುರಿಯಾಗಿತ್ತು. ಈ ಸಂದರ್ಭದಲ್ಲಿ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಹಲವು ಅನುಭವಿ ಆಟಗಾರರು ನಿವೃತ್ತಿ ಘೋಷಣೆ ಮಾಡಬೇಕು ಎಂದು ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಒತ್ತಾಯಿಸಿದ್ದರು. ಇದರ ನಡುವೆ ಭಾರತ ತಂಡ ನ್ಯೂಜಿಲೆಂಡ್ ವಿರುದ್ಧ ವೈಟ್ ವಾಶ್ ಮುಖಭಂಗ ತಪ್ಪಿಸಿಕೊಳ್ಳಲು ಕೊನೆಯ ಟೆಸ್ಟ್ ಪಂದ್ಯದ ಗೆಲುವಿನ ಮೇಲೆ ಕಣ್ಣಿಟ್ಟಿತ್ತು.
ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಕೊನೆಯ ಮತ್ತು ಮೂರನೇ ಟೆಸ್ಟ್ ಪಂದ್ಯ ಮುಂಬೈನಲ್ಲಿ ನಡೆದಿತ್ತು. ಮುಂಬೈ ಟೆಸ್ಟ್ ಪಂದ್ಯದಲ್ಲಿ ಗೆಲುವು ಭಾರತದ ಪರವಾಗಿತ್ತು. ಆದರೆ, ಮತ್ತೆ ಭಾರತದ ಟಾಪ್ ಆರ್ಡರ್ ಬ್ಯಾಟರ್‌ಗಳ ಬ್ಯಾಟಿಂಗ್ ವೈಫಲ್ಯದಿಂದ ಮುಂಬೈ ಟೆಸ್ಟ್ ಪಂದ್ಯದ ಮೇಲೆ ಪ್ರಾಬಲ್ಯ ಕಳೆದುಕೊಳ್ಳಬೇಕಾಯಿತು. ಕೊನೆಯ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ತಂಡ ಭಾರತವನ್ನು ಸುಲಭವಾಗಿ ಸೋಲಿಸಿತ್ತು. ಈ ಟೆಸ್ಟ್ ಸರಣಿ ಸೋಲು 2024ರಲ್ಲಿ ಭಾರತ ತಂಡಕ್ಕೆ ಸದಾ ನೆನಪಿನಲ್ಲಿ ಉಳಿಯಲಿದೆ. ಅಲ್ಲದೆ, ರೋಹಿತ್ ಶರ್ಮಾ ಅವರ ನಾಯಕತ್ವದಲ್ಲಿ ಭಾರತ ಸೋತಿರುವುದು ಮತ್ತೊಂದು ಚರ್ಚೆಗೂ ಕಾರಣವಾಗಿತ್ತು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications