ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌: ಅಗ್ರ ಸ್ಥಾನಕ್ಕೇರಿದ ಟೀಮ್ ಇಂಡಿಯಾ

India move to top spot in ICC World Test Championship standings

ನವದೆಹಲಿ: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯದಲ್ಲಿ ರೋಚಕ 3 ವಿಕೆಟ್ ಜಯ ದಾಖಲಿಸಿರುವ ಟೀಮ್ ಇಂಡಿಯಾ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 2-1ರ ಜಯ ಗಳಿಸಿದೆ. ಆಸೀಸ್ ಟೆಸ್ಟ್ ಸರಣಿಯಲ್ಲಿ ಉತ್ತಮ ಪ್ರದರ್ಶನ ನೀಡಿರುವುದರಿಂದ ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಅಗ್ರ ಸ್ಥಾನಕ್ಕೇರಿದೆ.

ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐಇಂಗ್ಲೆಂಡ್ ವಿರುದ್ಧದ ಟೆಸ್ಟ್‌ ಪಂದ್ಯಗಳಿಗೆ ಭಾರತ ತಂಡ ಪ್ರಕಟಿಸಿದ ಬಿಸಿಸಿಐ

ಆಸ್ಟ್ರೇಲಿಯಾ ವಿರುದ್ಧದ ಟೆಸ್ಟ್ ಸರಣಿಯ ಗೆಲುವು ವಿರಾಟ್ ಕೊಹ್ಲಿ ಪಡೆಗೆ 430 ಪಾಯಿಂಟ್ಸ್‌ಗಳನ್ನು ನೀಡಿದೆ. ದ್ವಿತೀಯ ಸ್ಥಾನದಲ್ಲಿ ನ್ಯೂಜಿಲೆಂಡ್ (420 ಪಾಯಿಂಟ್ಸ್‌) ಮತ್ತು ತೃತೀಯ ಸ್ಥಾನದಲ್ಲಿ ಆಸ್ಟ್ರೇಲಿಯಾ (332) ತಂಡಗಳಿವೆ.

'ಗಬ್ಬಾ ಸ್ಟೇಡಿಯಂನಲ್ಲಿ ವೀರೋಚಿತ ಗೆಲುವಿನ ಬಳಿಕ ಭಾರತ ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ನಂ.1 ಸ್ಥಾನಕ್ಕೇರಿದೆ. ಆಸ್ಟ್ರೇಲಿಯಾ ತಂಡ 3ನೇ ಸ್ಥಾನಕ್ಕೆ ಕುಸಿದಿದೆ,' ಎಂದು ಐಸಿಸಿ ಟ್ವೀಟ್‌ ಮಾಡಿದೆ. ಪಾಯಿಂಟ್ಸ್‌ ಟೇಬಲ್‌ನಲ್ಲಿ ನಾಲ್ಕನೇ ಮತ್ತು ಐದನೇ ಸ್ಥಾನಗಳಲ್ಲಿ ಕ್ರಮವಾಗಿ ಇಂಗ್ಲೆಂಡ್ ಮತ್ತು ದಕ್ಷಿಣ ಆಫ್ರಿಕಾ ತಂಡಗಳಿವೆ.

'ಗಬ್ಬಾ'ದಲ್ಲಿ ಮನಗೆದ್ದ ಭಾರತೀಯ ಬಡ ಆಟಗಾರರ ಮನಮುಟ್ಟುವ ಕತೆ!'ಗಬ್ಬಾ'ದಲ್ಲಿ ಮನಗೆದ್ದ ಭಾರತೀಯ ಬಡ ಆಟಗಾರರ ಮನಮುಟ್ಟುವ ಕತೆ!

ಐಸಿಸಿ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಸ್ಥಾನದಲ್ಲಿರುವ ಭಾರತ ತಂಡ ಈವರಗೆ (ಅಂದರೆ 2019ರಿಂದ) 5 ಟೆಸ್ಟ್ ಸರಣಿಗಳನ್ನಾಡಿದೆ. ಇದರಲ್ಲಿ 9 ಪಂದ್ಯಗಳನ್ನು ಗೆದ್ದಿದೆ, 3ರಲ್ಲಿ ಸೋತಿದೆ, 1 ಪಂದ್ಯ ಡ್ರಾ ಮಾಡಿಕೊಂಡಿದೆ. ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಭಾರತ ದ್ವಿತೀಯ ಸ್ಥಾನದಲ್ಲಿದೆ. ನ್ಯೂಜಿಲೆಂಡ್ ಮೊದಲ ಸ್ಥಾನದಲ್ಲಿದೆ.

Story first published: Wednesday, January 20, 2021, 9:37 [IST]
Other articles published on Jan 20, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X