IND vs ENG T20: ಸೂರ್ಯ ನಾಯಕ: ತಂಡಕ್ಕೆ ಕಂ ಬ್ಯಾಕ್ ಮಾಡಿದ ಶಮಿ
ಇದೇ ತಿಂಗಳು ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಐದು ಪಂದ್ಯಗಳ ಟಿ20 ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ತಂಡಕ್ಕೆ ಟೀಮ್ ಇಂಡಿಯಾದ ಸೂಪರ್ ಸ್ಟಾರ್ ಬೌಲರ್ ಮೊಹಮ್ಮದ್ ಶಮಿ ಕಂ ಬ್ಯಾಕ್ ಮಾಡಿದ್ದಾರೆ. ಹಲವು ದಿನಗಳಿಂದ ಇವರು ಯಾವಾಗ ತಂಡ ಸೇರುತ್ತಾರೆ ಎಂಬ ಪ್ರಶ್ನೆಗೆ ಈಗ ಉತ್ತರ ಸಿಕ್ಕಿದೆ. ತಂಡವನ್ನು ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. ಸಂಜು ಸ್ಯಾಮ್ಸನ್ ಹಾಗೂ ಧೃವ್ ಜುರೇಲ್ ವಿಕೆಟ್ ಕೀಪರ್ ಆಗಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ತಂಡದಲ್ಲಿ ಮಹತ್ವದ ಬದಲಾವಣೆಗಳೇನು ಇಲ್ಲ.
ಜನವರಿ 22 ರಿಂದ ಭಾರತ ಹಾಗೂ ಇಂಗ್ಲೆಂಡ್ ವಿರುದ್ಧ ಐದು ಪಂದ್ಯಗಳ ಟಿ20 ಸರಣಿ ನಡೆಯಲಿದೆ. ಈ ಸರಣಿಯಲ್ಲಿ ಯುವ ಆಟಗಾರರು ತಮ್ಮ ಕ್ಷಮತೆಯನ್ನು ಸಾಬೀತು ಪಡಿಸಲಿದ್ದಾರೆ. ಅಕ್ಷರ್ ಪಟೇಲ್ ಅವರಿಗೆ ಉಪನಾಯಕ ಪಟ್ಟವನ್ನು ಕಟ್ಟಲಾಗಿದೆ. ತಂಡದಲ್ಲಿ ಸ್ಟಾರ್ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಸ್ಥಾನ ಪಡೆದಿದ್ದಾರೆ.

ತಂಡದಲ್ಲಿ ಯಾರಿಗೆಲ್ಲಾ ಸ್ಥಾನ?
ಬಿಸಿಸಿಐ ಪ್ರಕಟಿಸಿರುವ ತಂಡದಲ್ಲಿ ಇಬ್ಬರು ಆರಂಭಿಕರಾಗಿ ಸಂಜು ಸ್ಯಾಮ್ಸನ್ ಹಾಗೂ ಅಭಿಷೇಕ್ ಶರ್ಮಾ ಸ್ಥಾನ ಪಡೆದಿದ್ದಾರೆ. ಇವರಿಬ್ಬರೂ ಸ್ಥಿರ ಪ್ರದರ್ಶನ ನೀಡಿ ಆಯ್ಕೆದಾರರ ಗಮನ ಗೆದ್ದಿದ್ದರು. ಅಲ್ಲದೆ ದೇಶೀಯ ಟೂರ್ನಿಗಳಲ್ಲಿ ಇವರಿಬ್ಬರ ಬ್ಯಾಟಿಂಗ್‌ನಲ್ಲಿ ಸ್ಥಿರತೆ ಕಾಯ್ದುಕೊಂಡಿದ್ದಾರೆ.
ಇನ್ನು ಮಧ್ಯ ಕ್ರಮಾಂಕದಲ್ಲಿ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಬ್ಯಾಕ್ ಟು ಬ್ಯಾಕ್ ಶತಕ ಬಾರಿಸಿದ್ದ ತಿಲಕ್ ವರ್ಮಾಗೆ ಅವಕಾಶ ನೀಡಲಾಗಿದೆ. ಇನ್ನು ಇವರೊಂದಿಗೆ ಸಂಜು ಸ್ಯಾಮ್ಸನ್ ಸಹ ಮಧ್ಯಮ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ರಿಂಕು ಸಿಂಗ್ ಫಿನಿಷರ್ ರೂಪದಲ್ಲಿ ಕಾಣಿಸಿಕೊಳ್ಳಬಹುದು. ಉಳಿದಂತೆ ಆಲ್‌ರೌಂಡರ್‍ಗಳಿಗೂ ಹೆಚ್ಚಿನ ಸ್ಥಾನ ನೀಡಲಾಗಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಸ್ಥಿರ ಪ್ರದರ್ಶನ ನೀಡಿ ಆಯ್ಕೆದಾರರ ಗಮನ ಸೆಳೆದಿದ್ದ ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್, ಹಾರ್ದಿಕ್ ಪಾಂಡ್ಯ, ಆಲ್‌ರೌಂಡರ್ ರೂಪದಲ್ಲಿ ಸ್ಥಾನ ಪಡೆದಿದ್ದಾರೆ. ಇನೊಬ್ಬ ವಿಕೆಟ್ ಕೀಪರ್ ಆಗಿ ಧೃವ್ ಜುರೇಲ್ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಸ್ಪಿನ್ ಬೌಲರ್‍ಗಳಾಗಿ ರವಿ ಬಿಷ್ಣೋಯಿ, ವಾಷಿಂಗ್ಟನ್ ಸುಂದರ್, ವರುಣ್ ಚಕ್ರವರ್ತಿ ಮತ್ತೆ ಅವಕಾಶ ಪಡೆದಿದ್ದಾರೆ.
ಶಮಿ ಕಂ ಬ್ಯಾಕ್
ಟೀಮ್ ಇಂಡಿಯಾದಿಂದ ಬಹುದಿನಗಳ ಕಾಲ ಹೊರಗುಳಿದಿದ್ದ ಸ್ಟಾರ್ ವೇಗದ ಬೌಲರ್ ಮೊಹಮ್ಮದ್ ಶಮಿ ಮತ್ತೆ ತಂಡವನ್ನು ಸೇರಿದ್ದಾರೆ. ಇವರು ಭಾರತದಲ್ಲಿ ನಡೆದಿದ್ದ ಏಕದಿನ ವಿಶ್ವಕಪ್ ಬಳಿಕ ಟೀಮ್ ಇಂಡಿಯಾ ಪರ ಆಡಿಲ್ಲ. ಇವರು ದೇಶೀಯ ಟೂರ್ನಿಯಲ್ಲಿ ಸ್ಥಿರ ಪ್ರದರ್ಶನ ನೀಡಿದ್ದು ತಂಡಕ್ಕೆ ಆಯ್ಕೆ ಮಾಡುವಂತೆ ಬಿಸಿಸಿಐ ಆಯ್ಕೆ ಸಮಿತಿಗೆ ಒತ್ತಾಯಿಸಿದ್ದರು. ಇನ್ನು ಇವರ ಫಿಟ್ಬೆಸ್ ಮೇಲೆ ಇದ್ದ ಪ್ರಶ್ನೆಗಳಿಗೂ ಉತ್ತರ ನೀಡಿದ್ದಾರೆ. ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್ ವೇಗಿಗಳಾಗಿ ಸ್ಥಾನ ಪಡೆದಿದ್ದಾರೆ.
ಟಿ20 ಸರಣಿಗೆ ಭಾರತ ತಂಡ: ಸೂರ್ಯಕುಮಾರ್ ಯಾದವ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ, ರಿಂಕು ಸಿಂಗ್, ನಿತೀಶ್ ಕುಮಾರ್ ರೆಡ್ಡಿ, ಅಕ್ಷರ್ ಪಟೇಲ್ (ಉಪನಾಯಕ), ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ರವಿ ಬಿಷ್ಣೋಯ್ , ವಾಷಿಂಗ್ಟನ್ ಸುಂದರ್, ಧ್ರುವ್ ಜುರೆಲ್ (ವಿಕೆಟ್ ಕೀಪರ್).
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications