ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
For Quick Alerts
ALLOW NOTIFICATIONS  
For Daily Alerts
 

ಬಹಳಷ್ಟು ಆಟಗಾರರ ಗಾಯಕ್ಕೆ ಭಾರತ ಕಾರಣ ಹುಡುಕಬೇಕು: ಗಿಲ್‌ಕ್ರಿಸ್ಟ್

India need to work out why there have been so many injuries, says Adam Gilchrist

ಬ್ರಿಸ್ಬೇನ್: ಟೀಮ್ ಇಂಡಿಯಾದಲ್ಲಿ ಪ್ರತೀ ಪಂದ್ಯಕ್ಕೂ ಆಗುತ್ತಿರುವ ಬದಲಾವಣೆಗಳು, ತಂಡದ ಪ್ರದರ್ಶನವನ್ನು ಪ್ರಶ್ನಿಸುವಂತೆಯೇ ಇಲ್ಲ. ಆದರೆ ಭಾರತ-ಆಸ್ಟ್ರೇಲಿಯಾ ನಡುವಿನ 4 ಪಂದ್ಯಗಳ ಟೆಸ್ಟ್ ಸರಣಿಯ ವೇಳೆ ಭಾರತದ ಅಷ್ಟೊಂದು ಆಟಗಾರರು ಯಾಕೆ ಗಾಯಕ್ಕೀಡಾಗಿ ತಂಡದಿಂದ ಹೊರ ಬಿದ್ದಿದ್ದಾರೆ ಅನ್ನೋದನ್ನು ಭಾರತ ಕಂಡುಕೊಳ್ಳಬೇಕು ಎಂದು ಆಸ್ಟ್ರೇಲಿಯಾದ ಮಾಜಿ ನಾಯಕ ಆ್ಯಡಮ್ ಗಿಲ್‌ಕ್ರಿಸ್ಟ್‌ ಹೇಳಿದ್ದಾರೆ.

ಆಸ್ಟ್ರೇಲಿಯಾ ಮಾಧ್ಯಮಗಳ ಅಸಲಿಯತ್ತು ಬಿಚ್ಚಿಟ್ಟ ಕೆವಿನ್ ಪೀಟರ್ಸನ್!ಆಸ್ಟ್ರೇಲಿಯಾ ಮಾಧ್ಯಮಗಳ ಅಸಲಿಯತ್ತು ಬಿಚ್ಚಿಟ್ಟ ಕೆವಿನ್ ಪೀಟರ್ಸನ್!

ಟೆಸ್ಟ್‌ ಸರಣಿಯಲ್ಲಿ ಪಾಲ್ಗೊಳ್ಳುತ್ತಿರುವ ಟೀಮ್ ಇಂಡಿಯಾದ ಪ್ರಮುಖ ಆಟಗಾರರೆಲ್ಲಾ ಗಾಯಕ್ಕೀಡಾಗಿ ಸರಣಿಯಿಂದ ಹೊರ ಬಿದ್ದಿದ್ದಾರೆ. ಪಂದ್ಯವೊಂದರಲ್ಲಿ 11 ಜನ ಆಡುವವರಾದರೆ ಈಗಾಗಲೇ ತಂಡದಿಂದ 11ಕ್ಕೂ ಹೆಚ್ಚು ಮಂದಿ ಗಾಯಕ್ಕೀಡಾಗಿ ಹೊರ ಬಿದ್ದಿದ್ದಾರೆ. ವಿಶೇಷವೆಂದರೆ ಟೆಸ್ಟ್ ಸರಣಿಯ ನಾಲ್ಕೂ ಪಂದ್ಯಗಳಲ್ಲಿ ಕಾಣಿಸಿಕೊಂಡ ಆಟಗಾರರೆಂದರೆ ಚೇತೇಶ್ವರ ಪೂಜಾರ ಮತ್ತು ಅಜಿಂಕ್ಯ ರಹಾನೆ ಮಾತ್ರ!

'ಈ ಪ್ರವಾಸದಲ್ಲಿ ಅವರು (ಭಾರತೀಯರು) ಎದುರಿಸಿದ ಪ್ರತಿಕೂಲತೆಯು ಅಸಾಧಾರಣವಾಗಿದೆ. ತಂಡದಲ್ಲಿ ಅಷ್ಟೆಲ್ಲ ಆಟಗಾರರು ಯಾಕೆ ಗಾಯದ ಸಮಸ್ಯೆ ಎದುರಿಸಿದರು ಅನ್ನೋದನ್ನು ಟೀಮ್ ಇಂಡಿಯಾ ಆಟಗಾರರು ತಿಳಿದುಕೊಳ್ಳಬೇಕಾಗುತ್ತದೆ,' ಎಂದು foxsports.com.au ಜೊತೆ ಮಾತನಾಡಿದ ಗಿಲ್ಲಿ ಹೇಳಿದ್ದಾರೆ.

ಮೆಗಾ ಮಿಲಿಯನ್ ಜಾಕ್‌ಪಾಟ್‌ ಮೌಲ್ಯ ಈಗ 640 ಮಿಲಿಯನ್‌ ಡಾಲರ್ಮೆಗಾ ಮಿಲಿಯನ್ ಜಾಕ್‌ಪಾಟ್‌ ಮೌಲ್ಯ ಈಗ 640 ಮಿಲಿಯನ್‌ ಡಾಲರ್

ಗಾಯಕ್ಕೀಡಾಗಿರುವ ಭಾರತದ ಆಟಗಾರರು
* ಭುವನೇಶ್ವರ್ ಕುಮಾರ್, ತೊಡೆ ಸ್ನಾಯುಗಳ ಗಾಯ, ತಂಡದಿಂದ ಹೊರಕ್ಕೆ
* ಇಶಾಂತ್ ಶರ್ಮಾ, ಸೊಂಟ ಮತ್ತು ತೊಡೆ ಮೂಳೆ ಸೇರುವಲ್ಲಿ ನೋವು, ತಂಡದಿಂದ ಹೊರಕ್ಕೆ
* ಮೊಹಮ್ಮದ್ ಶಮಿ, ಬಲಗೈಗೆ ಗಾಯ, ತಂಡದಿಂದ ಹೊರಕ್ಕೆ
* ಉಮೇಶ್ ಯಾದವ್, ಕಾಲಿನ ಹಿಂಬಾಗದ ಸ್ನಾಯುಗಳು (ಕಾಫ್) ಬೇನೆ, ತಂಡದಿಂದ ಹೊರಕ್ಕೆ
* ಕೆಎಲ್ ರಾಹುಲ್, ಕೈಯ ಮಣಿಕಟ್ಟು ಗಾಯ, ತಂಡದಿಂದ ಹೊರಕ್ಕೆ
* ಹನುಮ ವಿಹಾರಿ, ಹ್ಯಾಮ್‌ಸ್ಟ್ರಿಂಗ್, ತಂಡದಿಂದ ಹೊರಕ್ಕೆ
* ರವೀಂದ್ರ ಜಡೇಜಾ, ಹೆಬ್ಬೆಟ್ಟಿಗೆ ಗಾಯ, ತಂಡದಿಂದ ಹೊರಕ್ಕೆ
* ಜಸ್‌ಪ್ರೀತ್‌ ಬೂಮ್ರಾ, ಕಿಬ್ಬೊಟ್ಟೆ ನೋವು, ತಂಡದಿಂದ ಹೊರಕ್ಕೆ
* ರವಿಚಂದ್ರನ್ ಅಶ್ವಿನ್, ಬೆನ್ನುನೋವು, ತಂಡದಿಂದ ಹೊರಕ್ಕೆ

Story first published: Saturday, January 16, 2021, 9:18 [IST]
Other articles published on Jan 16, 2021
POLLS
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Yes No
Settings X