Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

Champions Trophy Final: ಭಾರತ-ನ್ಯೂಜಿಲೆಂಡ್ ನಡುವೆ ರೋಚಕ ಹಣಾಹಣಿ; ಯಾರ ಮುಡಿಗೆ ಪ್ರಶಸ್ತಿ?

ಐಸಿಸಿ ಚಾಂಪಿಯನ್ಸ್ ಟ್ರೋಫಿ 2025ರ ಟೂರ್ನಿಯ ವಿಜೇತ ತಂಡ ಯಾವುದು ಎಂಬ ಪ್ರಶ್ನೆಗೆ ಇಂದು ರಾತ್ರಿ ಅಂದರೆ ಭಾನುವಾರ (ಮಾರ್ಚ್ 9) ಉತ್ತರ ಸಿಗಲಿದೆ. ಚಾಂಪಿಯನ್ಸ್ ಟ್ರೋಫಿಯ 2025ರ ಫೈನಲ್ ಪಂದ್ಯ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯಲಿದೆ. ಈ ರೋಚಕ ಫೈನಲ್ ಪಂದ್ಯವು ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಭಾರತೀಯ ಕಾಲಮಾನ ಮಧ್ಯಾಹ್ನ 2:30 ರಿಂದ ನಡೆಯಲಿದೆ. ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಮತ್ತು ಕಿವೀಸ್ ಪಡೆಯ ನಾಯಕ ಮಿಚೆಲ್ ಸ್ಯಾಂಟ್ನರ್ ತಂಡವನ್ನು ಚಾಂಪಿಯನ್ ಮಾಡಲು ಪಣ ತೊಟ್ಟಿದ್ದಾರೆ.

ಚಾಂಪಿಯನ್ಸ್ ಟ್ರೋಫಿಯ 2025ರ ಫೈನಲ್ ಪಂದ್ಯವನ್ನು ಗೆಲ್ಲುವ ಮೂಲಕ ಭಾರತ ತಂಡವು ಇತಿಹಾಸ ಸೃಷ್ಟಿಸಲು ಸಜ್ಜಾಗಿದೆ. ಭಾರತ ತನ್ನ ಮೂರನೇ ಚಾಂಪಿಯನ್ಸ್ ಟ್ರೋಫಿಯ ಮೇಲೆ ಕಣ್ಣಿಟ್ಟಿದ್ದು, ನ್ಯೂಜಿಲೆಂಡ್ ವಿರುದ್ಧ 25 ವರ್ಷಗಳ ಸೇಡು ತೀರಿಸಿಕೊಳ್ಳುವ ನಿರೀಕ್ಷೆಯಲ್ಲಿದೆ. ನ್ಯೂಜಿಲೆಂಡ್ ತಂಡ ಕೂಡ 25 ವರ್ಷಗಳ ನಂತರ ಚಾಂಪಿಯನ್ಸ್ ಟ್ರೋಫಿ ಗೆಲ್ಲಲು ತಂತ್ರ ರೂಪಿಸಿದೆ.

India-New Zealand ICC Champions Trophy 2025 Final Match Preview

ಚಾಂಪಿಯನ್ಸ್ ಟ್ರೋಫಿಯ 2000ರ ಫೈನಲ್‌ನಲ್ಲಿ ಭಾರತ ತಂಡವನ್ನು ಸೋಲಿಸುವ ಮೂಲಕ ನ್ಯೂಜಿಲೆಂಡ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿತ್ತು. ಈಗ ಚಾಂಪಿಯನ್ಸ್ ಟ್ರೋಫಿಯ 2025ರ ಫೈನಲ್ ಪಂದ್ಯಕ್ಕೂ ಮೊದಲು, ಪಿಚ್ ವರದಿ, ಹೆಡ್ ಟು ಹೆಡ್, ಉಭಯ ತಂಡಗಳ ಸ್ಟಾರ್ ಆಟಗಾರರು ಮತ್ತು ಸಂಭಾವ್ಯ ಪ್ಲೇಯಿಂಗ್-11 ಬಗ್ಗೆ ಇಲ್ಲಿದೆ ಮಾಹಿತಿ.

ಹೆಡ್ ಟು ಹೆಡ್

ಭಾರತ ಮತ್ತು ನ್ಯೂಜಿಲೆಂಡ್ ಒಟ್ಟು 119 ಏಕದಿನ ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಭಾರತ ತಂಡವು 61 ಪಂದ್ಯಗಳನ್ನು ಗೆದ್ದರೆ, ಕಿವೀಸ್ ಪಡೆ 50 ಪಂದ್ಯಗಳಲ್ಲಿ ಗೆಲುವು ಕಂಡಿದೆ. ಉಭಯ ತಂಡಗಳ ನಡುವಿನ 7 ಪಂದ್ಯಗಳು ಅನಿರ್ಣಾಯಕವಾಗಿದ್ದರೆ, 1 ಪಂದ್ಯ ಟೈ ಆಗಿದೆ. ಉಭಯ ತಂಡಗಳ ನಡುವಿನ ಕಳೆದ 5 ಪಂದ್ಯಗಳಲ್ಲಿ ಭಾರತ ಮೇಲುಗೈ ಸಾಧಿಸಿದೆ.

ಪಿಚ್ ವರದಿ

ದುಬೈ ಕ್ರೀಡಾಂಗಣದ ಪಿಚ್ ನಿಧಾನವಾಗಿದೆ. ಇದು ಆರಂಭದಲ್ಲಿ ವೇಗದ ಬೌಲರ್‌ಗಳಿಗೆ ಸಹಾಯ ಮಾಡುತ್ತದೆ. ಆದರೆ ನಂತರ ಚೆಂಡು ನಿಂತು ಬರಲಿದೆ. ಇದು ಬ್ಯಾಟರ್‌ಗಳಿಗೆ ರನ್ ಗಳಿಸಲು ಕಷ್ಟವಾಗುತ್ತದೆ. ಹೊಸ ಬ್ಯಾಟರ್‌ಗಳು ಕ್ರೀಸ್‌ಗೆ ಬಂದು ಬಿರುಸಿನ ಬ್ಯಾಟಿಂಗ್ ಮೂಲಕ ರನ್ ಗಳಿಸಲು ಸಾಧ್ಯವಿಲ್ಲ. ಮೊದಲು, ಅವರು ಕ್ರೀಸ್‌ನಲ್ಲಿ ನಿಂತು ಚೆಂಡನ್ನು ಗಮನಿಸಿ ರನ್ ಗಳಿಸಬೇಕು. ಇಲ್ಲಿ ಸ್ಪಿನ್ ಬೌಲರ್‌ಗಳು ಹಳೆಯ ಚೆಂಡಿನ ಸಹಾಯವನ್ನೂ ಪಡೆಯಲಿದ್ದು, ಮಧ್ಯಮ ಓವರ್‌ಗಳಲ್ಲಿ ಸ್ಪಿನ್ನರ್‌ಗಳು ಬಹಳ ಪರಿಣಾಮಕಾರಿಯಾಗಲಿದ್ದಾರೆ. ಎದುರಾಳಿ ತಂಡದ ಬ್ಯಾಟರ್‌ಗಳಿಗೆ ಸ್ಪಿನ್ನರ್‌ಗಳು ಕಾಟ ನೀಡುವ ಸಾಧ್ಯತೆಯಿದೆ.

ದುಬೈನ ಈ ಮೈದಾನದಲ್ಲಿ ಮೊದಲ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 218 ಮತ್ತು ಎರಡನೇ ಇನ್ನಿಂಗ್ಸ್‌ನ ಸರಾಸರಿ ಸ್ಕೋರ್ 198 ರನ್‌ಗಳು. ಈ ಮೈದಾನದಲ್ಲಿ ಗರಿಷ್ಠ ಸ್ಕೋರ್ ಎಂದರೆ 355 ರನ್‌ಗಳು, ಕನಿಷ್ಠ ಸ್ಕೋರ್ 91 ರನ್‌ಗಳು. ಭಾರತ ಇಲ್ಲಿ ಸೆಮಿಫೈನಲ್ ಸೇರಿದಂತೆ 4 ಪಂದ್ಯಗಳನ್ನು ಆಡಿದೆ. ಇಂತಹ ಪರಿಸ್ಥಿತಿಯಲ್ಲಿ, ಟೀಮ್ ಇಂಡಿಯಾ ಆಟಗಾರರು ಪಿಚ್ ಮತ್ತು ಪರಿಸ್ಥಿತಿಗಳ ಬಗ್ಗೆ ಸಂಪೂರ್ಣವಾಗಿ ತಿಳಿದಿದ್ದಾರೆ.

ಹವಾಮಾನ ವರದಿ

ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಮಳೆ ಬರುವ ಯಾವುದೇ ಲಕ್ಷಣಗಳಿಲ್ಲ. ದಿನವಿಡೀ ಇಲ್ಲಿ ಬಿಸಿಲು ಇರಲಿದ್ದು, ಪ್ರೇಕ್ಷಕರು ಇಡೀ ಪಂದ್ಯವನ್ನು ಕ್ರೀಡಾಂಗಣದಲ್ಲಿ ನೋಡಬಹುದಾಗಿದೆ. ಇಂತಹ ಪರಿಸ್ಥಿತಿಯಲ್ಲಿ, ಪಂದ್ಯದಲ್ಲಿ ಅಡಚಣೆ ಉಂಟಾಗುವ ಸಾಧ್ಯತೆಯಿಲ್ಲ. ವರದಿಗಳ ಪ್ರಕಾರ, ಮಾರ್ಚ್ 9 ರ ಭಾನುವಾರದಂದು ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಪಂದ್ಯದ ಸಮಯದಲ್ಲಿ ದುಬೈನಲ್ಲಿ ತಾಪಮಾನವು 34 ಡಿಗ್ರಿ ಇರಲಿದೆ.

ಸ್ಟಾರ್‌ ಆಟಗಾರರು

ಟೀಮ್ ಇಂಡಿಯಾ ಪರ ವಿರಾಟ್ ಕೊಹ್ಲಿ, ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಬ್ಯಾಟಿಂಗ್‌ನಲ್ಲಿ ಪ್ರಮುಖರಾಗಿದ್ದರೆ , ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ ಮತ್ತು ಕುಲದೀಪ್ ಯಾದವ್ ಬೌಲಿಂಗ್‌ನಲ್ಲಿ ಮಿಂಚುತ್ತಿದ್ದಾರೆ. ಗಿಲ್ 4 ಪಂದ್ಯಗಳಲ್ಲಿ 1 ಶತಕದ ಸಹಾಯದಿಂದ 157 ರನ್ ಗಳಿಸಿದ್ದಾರೆ. ವಿರಾಟ್ 4 ಪಂದ್ಯಗಳಲ್ಲಿ 1 ಶತಕ ಮತ್ತು 1 ಅರ್ಧಶತಕದ ಸಹಾಯದಿಂದ 217 ರನ್ ಗಳಿಸಿದ್ದಾರೆ. ಅಯ್ಯರ್ 4 ಪಂದ್ಯಗಳಲ್ಲಿ 2 ಅರ್ಧಶತಕಗಳೊಂದಿಗೆ 195 ರನ್ ಬಾರಿಸಿದ್ದಾರೆ. ಬೌಲಿಂಗ್‌ನಲ್ಲಿ ಶಮಿ 4 ಪಂದ್ಯಗಳಲ್ಲಿ 8 ವಿಕೆಟ್ ಪಡೆದರೆ, ವರುಣ್ ಚಕ್ರವರ್ತಿ 2 ಪಂದ್ಯಗಳಲ್ಲಿ 7 ವಿಕೆಟ್ ಕಬಳಿಸಿದ್ದಾರೆ. ಕುಲದೀಪ್ 4 ಪಂದ್ಯಗಳಲ್ಲಿ 5 ವಿಕೆಟ್ ಉರುಳಿಸಿದ್ದಾರೆ.

ನ್ಯೂಜಿಲೆಂಡ್ ತಂಡದ ಬ್ಯಾಟಿಂಗ್ ವಿಭಾಗಕ್ಕೆ ಟಾಮ್ ಲ್ಯಾಥಮ್, ರಚಿನ್ ರವೀಂದ್ರ ಮತ್ತು ಕೇನ್ ವಿಲಿಯಮ್ಸನ್ ಬಲ ತುಂಬಿದ್ದಾರೆ. ಲ್ಯಾಥಮ್ 4 ಪಂದ್ಯಗಳಲ್ಲಿ 1 ಶತಕದೊಂದಿಗೆ 191 ರನ್ ಗಳಿಸಿದರೆ, ರಚಿನ್ 3 ಪಂದ್ಯಗಳಲ್ಲಿ 2 ಶತಕಗಳೊಂದಿಗೆ 226 ರನ್ ಕಲೆ ಹಾಕಿದ್ದಾರೆ. ವಿಲಿಯಮ್ಸನ್ 4 ಪಂದ್ಯಗಳಲ್ಲಿ 189 ರನ್ ಹೊಡೆದಿದ್ದಾರೆ. ಮಿಚೆಲ್ ಸ್ಯಾಂಟ್ನರ್ ಮತ್ತು ಮೈಕೆಲ್ ಬ್ರೇಸ್‌ವೆಲ್ ಸ್ಪಿನ್ ಬೌಲಿಂಗ್‌ ಚೆಂಡಿನೊಂದಿಗೆ ತಂಡಕ್ಕೆ ನೆರವಾಗುತ್ತಿದ್ದಾರೆ. ಸ್ಯಾಂಟ್ನರ್ 4 ಪಂದ್ಯಗಳಲ್ಲಿ 7 ವಿಕೆಟ್‌ಗಳನ್ನು ಮತ್ತು ಬ್ರೇಸ್‌ವೆಲ್ 4 ಪಂದ್ಯಗಳಲ್ಲಿ 6 ವಿಕೆಟ್‌ಗಳನ್ನು ಪಡೆದಿದ್ದಾರೆ.

ಸಂಭಾವ್ಯ ಪ್ಲೇಯಿಂಗ್-11

ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್‌ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ, ವರುಣ್ ಚಕ್ರವರ್ತಿ, ಅರ್ಷದೀಪ್ ಸಿಂಗ್.

ನ್ಯೂಜಿಲೆಂಡ್: ರಚಿನ್ ರವೀಂದ್ರ, ವಿಲ್ ಯಂಗ್, ಕೇನ್ ವಿಲಿಯಮ್ಸನ್, ಡ್ಯಾರಿಲ್ ಮಿಚೆಲ್, ಟಾಮ್ ಲ್ಯಾಥಮ್ (ವಿಕೆಟ್ ಕೀಪರ್), ಗ್ಲೆನ್ ಫಿಲಿಪ್ಸ್, ಮೈಕೆಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ನಾಥನ್ ಸ್ಮಿತ್, ಮ್ಯಾಟ್ ಹೆನ್ರಿ, ವಿಲಿಯಂ ಒ'ರೂರ್ಕ್.

Story first published: Sunday, March 9, 2025, 7:05 [IST]
Other articles published on Mar 9, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+