ದುಬೈ, ಸೆಪ್ಟೆಂಬರ್ 08 : ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ನೂತನ ಟೆಸ್ಟ್ ಕ್ರಿಕೆಟ್ ಶ್ರೇಯಾಂಕ ಪಟ್ಟಿಯಲ್ಲಿ ಟೀಂ ಇಂಡಿಯಾ ಅಗ್ರಸ್ಥಾನದಲ್ಲಿ ಮುಂದುವರಿದಿದೆ.
ಗುರುವಾರ ಬಿಡುಗಡೆಯಾದ ನೂತನ ಪಟ್ಟಿಯಲ್ಲಿ ಇತ್ತೀಚೆಗೆ ಶ್ರೀಲಂಕಾ ವಿರುದ್ಧ 3-0 ಅಂತರದಲ್ಲಿ ಟೆಸ್ಟ್ ಸರಣಿಯನ್ನು ಗೆದ್ದಿರುವ ಭಾರತ 125 ಪಾಯಿಂಟ್ಸ್ ಗಳೊಂದಿಗೆ ಅಗ್ರಸ್ಥಾನದಲ್ಲಿದೆ.

ಬಾಂಗ್ಲಾದೇಶ ವಿರುದ್ಧದ ಸರಣಿಯಲ್ಲಿ 1-1ರಲ್ಲಿ ಸಮಬಲ ಮಾಡಿಕೊಂಡಿರುವ ಆಸ್ಟ್ರೇಲಿಯಾ ತಂಡ 97 ಅಂಕಗಳೊಂದಿಗೆ 5ನೇ ಸ್ಥಾನಕ್ಕೆ ಕುಸಿದಿದೆ.
ಬಾಂಗ್ಲಾ ಸರಣಿಗೂ ಮುನ್ನ ಸ್ಟೀವನ್ ಸ್ಮಿತ್ ಪಡೆ 100 ಅಂಕಗಳೊಂದಿಗೆ ಶ್ರೇಯಾಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿತ್ತು.
ದಕ್ಷಿಣ ಆಫ್ರಿಕಾ 110 ಪಾಯಿಂಟ್ಸ್ ಗಳಿಂದ ಎರಡನೇ ಸ್ಥಾನದಲ್ಲಿದೆ. ಇಂಗ್ಲೆಂಡ್ (105) ಮೂರನೇ ಸ್ಥಾನದಲ್ಲಿದೆ. ಇನ್ನು ಬಾಂಗ್ಲಾದೇಶ ಆಸೀಸ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಸಮಬಲ ಸಾಧಿಸಿ 5 ಪಾಯಿಂಟ್ಸ್ ಗಳನ್ನು ಹೆಚ್ಚಿಸಿಕೊಂಡು 9ನೇ ಸ್ಥಾನಕ್ಕೇರಿದೆ.