ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಮುರಳಿ ವಿಜಯ್ ಅಲಭ್ಯ
ಗಾಲೆ (ಶ್ರೀಲಂಕಾ), ಆಗಸ್ಟ್ 10: ಟೀಂ ಇಂಡಿಯಾದ ಆರಂಭಿಕ ಆಟಗಾರ ಮುರಳಿ ವಿಜಯ್ ಅವರು ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಅಲಭ್ಯರಾಗಿದ್ದಾರೆ ಎಂದು ಟೀಂ ಇಂಡಿಯಾದ ನಿರ್ದೇಶಕ ರವಿಶಾಸ್ತ್ರಿ ಅವರು ಸೋಮವಾರ ಮಧ್ಯಾಹ್ನ ತಿಳಿಸಿದ್ದಾರೆ.
ಶ್ರೀಲಂಕಾ ಅಧ್ಯಕ್ಷೀಯ ಮಂಡಳಿ XI ವಿರುದ್ಧದ ಮೂರು ದಿನಗಳ ಅಭ್ಯಾಸ ಪಂದ್ಯದಲ್ಲೂ ಮುರಳಿ ವಿಜಯ್ ಆಡಿರಲಿಲ್ಲ. ಸ್ನಾಯುಸೆಳೆತಕ್ಕೆ ಒಳಗಾಗಿರುವ ಮುರಳಿ ಅವರು ಇನ್ನೂ ಗುಣಮುಖರಾಗಿಲ್ಲದ ಕಾರಣ ಅವರು ಆಗಸ್ಟ್ 12 ರಂದು ಆರಂಭವಾಗಿರುವ ಗಾಲೆ ಟೆಸ್ಟ್ ಪಂದ್ಯದಲ್ಲಿ ಓಪನಿಂಗ್ ಮಾಡಲು ಸಾಧ್ಯವಾಗುವುದಿಲ್ಲ ಎಂದು ರವಿಶಾಸ್ತ್ರಿ ಹೇಳಿದ್ದಾರೆ.[ಟೀಂ ಇಂಡಿಯಾದಿಂದ ಲಂಕಾ ಪ್ರವಾಸ]

ಕೆಎಲ್ ರಾಹುಲ್ ಗೆ ಸ್ಥಾನ: ವಿಜಯ್ ಅವರ ಅನುಪಸ್ಥಿತಿಯಲ್ಲಿ ಎಡಗೈ ಬ್ಯಾಟ್ಸ್ ಮನ್ ಶಿಖರ್ ಧವನ್ ಜೊತೆಗೆ ಕರ್ನಾಟಕದ ಬಲಗೈ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಅವರು ಆರಂಭಿಕ ಆಟಗಾರನಾಗಿ ಕಣಕ್ಕಿಳಿಯುವ ಅವಕಾಶ ಪಡೆದುಕೊಂಡಿದ್ದಾರೆ. ಡೆಂಘಿಗೆ ಒಳಗಾಗಿದ್ದ ರಾಹುಲ್ ಅವರು ಕಳೆದ ಜೂನ್ ತಿಂಗಳಿನಲ್ಲಿ ನಡೆದ ಬಾಂಗ್ಲಾದೇಶ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಪಾಲ್ಗೊಂಡಿರಲಿಲ್ಲ. [ಟೆಸ್ಟ್ ಸರಣಿಗೆ ತಂಡ ಪ್ರಕಟ,ಕೆಎಲ್ ರಾಹುಲ್ ಆಯ್ಕೆ]
ಜಿಂಬಾಬ್ವೆ ಪ್ರವಾಸದಲ್ಲಿ ಏಕದಿನ ಕ್ರಿಕೆಟ್ ಹಾಗೂ ಟಿ20 ಪಂದ್ಯಗಳ ವೇಳೆ ಕೂಡಾ ಮುರಳಿ ಅವರು ಪೂರ್ಣ ಗುಣಮುಖರಾಗಿರಲಿಲ್ಲ. ಹೀಗಾಗಿ ಅವರನ್ನು ಶ್ರೀಲಂಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಕಣಕ್ಕಿಳಿಸುವುದು ಬೇಡ ಎಂದು ನಿರ್ಧರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ) ಪ್ರಕಟಿಸಿದೆ.
31 ವರ್ಷ ವಯಸ್ಸಿನ ಮುರಳಿ ವಿಜಯ್ ಅವರು ಇದುವರೆವಿಗೂ 32 ಟೆಸ್ಟ್ ಪಂದ್ಯಗಳನ್ನಾಡಿದ್ದು, 2,000ಕ್ಕೂ ಅಧಿಕ ರನ್ ಗಳಿಸಿದ್ದಾರೆ. ಬಾಂಗ್ಲಾದೇಶ ವಿರುದ್ಧ 150ರನ್ ಗಳಿಸಿದ್ದು ಇವರ ಇತ್ತೀಚಿನ ಸಾಧನೆ. ಶ್ರೀಲಂಕಾ ವಿರುದ್ಧ ಭಾರತ ತಂಡ ಮೂರು ಟೆಸ್ಟ್ ಪಂದ್ಯಗಳ ಸರಣಿ ಆಡಲಿದೆ. (ಒನ್ ಇಂಡಿಯಾ ಸುದ್ದಿ)
Story first published: Wednesday, January 3, 2018, 10:03 [IST]
Other articles published on Jan 3, 2018
Read in English: Murali Vijay ruled out of 1st Test
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications