Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

IND vs SA 3rd T20: ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ: ಎರಡು ಬದಲಾವಣೆ

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೂರನೇ ಟಿ20 ಪಂದ್ಯ ಧರ್ಮಶಾಲಾದಲ್ಲಿ ನಡೆಯುತ್ತಿದೆ. ಈ ಪಂದ್ಯದಲ್ಲಿ ಟಾಸ್‌ ಗೆದ್ದ ಟೀಮ್ ಇಂಡಿಯಾ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಉಭಯ ತಂಡಗಳು ತಲಾ ಒಂದೊಂದು ಪಂದ್ಯ ಗೆದ್ದಿದ್ದರಿಂದ ಈ ಪಂದ್ಯ ಕುತೂಹಲ ಮೂಡಿಸಿದೆ. ಟೀಮ್ ಇಂಡಿಯಾ ಈ ಪಂದ್ಯಕ್ಕಾಗಿ ಎರಡು ಬದಲಾವಣೆಗಳನ್ನು ಮಾಡಿದ್ದು, ದಕ್ಷಿಣ ಆಫ್ರಿಕಾ ಮೂರು ಚೇಂಜ್‌ ಮಾಡಿದೆ.

ಭಾರತ ತಂಡ ಮಹತ್ವದ ಪಂದ್ಯಕ್ಕಾಗಿ ಎರಡು ಬದಲಾವಣೆಗಳನ್ನು ಮಾಡಿಕೊಂಡಿದೆ. ಕೌಟುಂಬಿಕ ಕಾರಣಗಳಿಂದಾಗಿ ಜಸ್ಪ್ರೀತ್ ಬುಮ್ರಾ ಮೂರನೇ ಟಿ20 ಪಂದ್ಯಗಳಿಗೆ ಅಲಭ್ಯರಾಗಿದ್ದು, ಇವರ ಬದಲಿಗೆ ಹರ್ಷಿತ್ ರಾಣಾ ಅವರಿಗೆ ಅವಕಾಶ ನೀಡಲಾಗಿದೆ. ಇವರು ಎಂಟನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸಾಮರ್ಥ್ಯವನ್ನು ಹೊಂದಿದ್ದಾರೆ. ಇನ್ನು ಅಕ್ಷರ್ ಪಟೇಲ್‌ ಈ ಪಂದ್ಯದಿಂದ ಹೊರಗುಳಿದಿದ್ದು, ಆಡುವ ಹನ್ನೊಂದರ ಬಳಗದಲ್ಲಿ ಹುಟ್ಟು ಹಬ್ಬವನ್ನು ಆಚರಿಸಿಕೊಳ್ಳುತ್ತಿರುವ ಕುಲ್‌ದೀಪ್‌ ಯಾದವ್ ಅವರಿಗೆ ಅವಕಾಶ ನೀಡಲಾಗಿದೆ.

India Opts to Bowl vs South Africa in Dharamsala 3rd T20 Teams Level 1-1

ದಕ್ಷಿಣ ಆಫ್ರಿಕಾ ತಂಡ: ಕ್ವಿಂಟನ್ ಡಿ ಕಾಕ್, ರೀಜಾ ಹೆಂಡ್ರಿಕ್ಸ್, ಐಡೆನ್ ಮಾರ್ಕ್ರಾಮ್, ಡೆವಾಲ್ಡ್ ಬ್ರೆವಿಸ್, ಟ್ರಿಸ್ಟಾನ್ ಸ್ಟಬ್ಸ್, ಡೊನೊವನ್ ಫೆರೇರಾ, ಮಾರ್ಕೊ ಜಾನ್ಸೆನ್, ಕಾರ್ಬಿನ್ ಬಾಷ್, ಅನ್ರಿಚ್ ನಾರ್ಟ್ಜೆ, ಲುಂಗಿ ಎನ್‌ಗಿಡಿ, ಆಟ್ನೀಲ್ ಬಾರ್ಟ್‌ಮನ್.

ಭಾರತ ತಂಡ: ಅಭಿಷೇಕ್ ಶರ್ಮಾ, ಶುಭ್ಮನ್ ಗಿಲ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅರ್ಶ್‌ದೀಪ್ ಸಿಂಗ್, ಕುಲದೀಪ್ ಯಾದವ್.

Story first published: Sunday, December 14, 2025, 18:37 [IST]
Other articles published on Dec 14, 2025
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+