ಭಾರತದ ವೇಗಿ ಇಶಾಂತ್ ಶರ್ಮಾ ಬಲ ಕೈಗೆ ಗಾಯ, 3 ಹೊಲಿಗೆ

ಸೌಥಾಂಪ್ಟನ್: ಭಾರತದ ಅನುಭವಿ ವೇಗಿ ಇಶಾಂತ್ ಶರ್ಮಾ ಬಲಗೈಗೆ ಗಾಯವಾಗಿದ್ದು ಮೂರು ಹೊಲಿಗೆಗಳನ್ನು ಹಾಕಲಾಗಿದೆ. ಬುಧವಾರ (ಜೂನ್ 23) ಮುಕ್ತಾಯಗೊಂಡ ಭಾರತ-ನ್ಯೂಜಿಲೆಂಡ್ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ವೇಳೆ ಇಶಾಂತ್ ಗಾಯ ಮಾಡಿಕೊಂಡಿದ್ದಾರೆ.
ಸೌಥಾಂಪ್ಟನ್‌ನ ಏಜಸ್ ಬೌಲ್ ಸ್ಟೇಡಿಯಂನಲ್ಲಿ ನಡೆದ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದ ವೇಳೆ ಚೆಂಡನ್ನು ತಡೆಯೆತ್ನಿಸುವಾಗ ಇಶಾಂತ್ ಶರ್ಮಾ ಬಲಗೈಗೆ ಗಾಯವಾಗಿದೆ. ಹೀಗಾಗಿ ಮೂರು ಹೊಲಿಗೆಗಳನ್ನು ಹಾಕಲಾಗಿದೆ. ಆದರೆ ಮುಂಬರಲಿರುವ ಭಾರತ-ಇಂಗ್ಲೆಂಡ್ ಟೆಸ್ಟ್ ಸರಣಿ ವೇಳೆ ಇಶಾಂತ್ ಫಿಟ್ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ.
ಎಎನ್‌ಐ ಜೊತೆ ಮಾತನಾಡಿದ ಮೂಲವೊಂದು, "ಚೆಂಡನ್ನು ತಡೆಯಲೆತ್ನಿಸುವಾಗ ಇಶಾಂತ್ ಕೈಗೆ ಗಾಯ ಮಾಡಿಕೊಂಡಿದ್ದಾರೆ, ಅವರ ಕೈಗೆ ಮೂರು ಹೊಲಿಗೆ ಹಾಕಲಾಗಿದೆ. ಆದರೆ ಆಗಸ್ಟ್ 4ರಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ವೇಳೆಗೆ ಇಶಾಂತ್ ತಯಾರಾಗಲಿದ್ದಾರೆ," ಎಂದು ತಿಳಿಸಿದೆ.
2021ರ WTC ಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ 8 ವಿಕೆಟ್ ಗೆಲುವನ್ನಾಚರಿಸಿತ್ತು. ದ್ವಿತೀಯ ಆವೃತ್ತಿ ಜುಲೈನಿಂದ ಆರಂಭಗೊಳ್ಳಲಿದೆ. ಭಾರತಕ್ಕೆ ಇಂಗ್ಲೆಂಡ್ ಸರಣಿಯೇ ದ್ವಿತೀಯ ಆವೃತ್ತಿಯ ವಿಶ್ವಟೆಸ್ಟ್ ಚಾಂಪಿಯನ್‌ಶಿಪ್ ಭಾಗವಾಗಿರಲಿದೆ. ಐದು ಪಂದ್ಯಗಳ ಈ ಟೆಸ್ಟ್ ಸರಣಿ ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ನಡೆಯಲಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications