Ind vs Pak: ಇಶಾನ್ 83, ಪಾಂಡ್ಯ 87: ಶತಕದಂಚಿನಲ್ಲಿ ಎಡವಿದ ಆಪತ್ಭಾಂಧವರು
ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಅಕ್ಷರಶಃ ಆಪತ್ಭಾಂಧವರಾಗಿ ಹೊರಹೊಮ್ಮಿದ್ದಾರೆ. ಪಾಕಿಸ್ತಾನದ ವಿರುದ್ಧದ ಹೈವೋಲ್ಟೇಜ್ ಪಂದ್ಯದಲ್ಲಿ ಟೀಮ್ ಇಂಡಿಯಾದ ಅಗ್ರಕ್ರಮಾಂಕದ ಆಟಗಾರರು ಅಗ್ಗಕ್ಕೆ ಔಟಾದ ಬಳಿಕ ಈ ಜೋಡಿ ಅಮೋಘ ಜೊತೆಯಾಟ ನೀಡುವ ಮೂಲಕ ತಂಡಕ್ಕೆ ಆಸರೆಯಾಗಿದ್ದಾರೆ. ಹೀಗಾಗಿ ಟೀಮ್ ಇಂಡಿಯಾ ಈ ಪಂದ್ಯದಲ್ಲಿ ಗೌರವಯುತ ಮೊತ್ತದತ್ತ ಹೆಜ್ಜೆಯಿಟ್ಟಿದೆ.
ಟೀಮ್ ಇಂಡಿಯಾದ ಅಗ್ರ ಕ್ರಮಾಂಕದ ನಾಲ್ವರು ಆಟಗಾರರು 66 ರನ್‌ಗಳಾಗಿದ್ದಾಗ ವಿಕೆಟ್ ಕಳೆದುಕೊಂಡಿದ್ದರು. ಅದರಲ್ಲೂ ನಾಯಕ ರೋಹಿತ್ ಶರ್ಮಾ, ಶುಬ್ಮನ್ ಗಿಲ್ ವಿರಾಟ್ ಕೊಹ್ಲಿ ಕೇವಲ 43 ರನ್‌ಗಳಾಗಿದ್ದಾಗಲೇ ಫೆವಿಲಿಯನ್ ಸೇರಿಕೊಂಡಿದ್ದರು. ಆದರೆ ಈ ಸಂಕಷ್ಟದಲ್ಲಿ ಸಂದರ್ಭದಲ್ಲಿ ಟೀಮ್ ಇಂಡಿಯಾಗೆ ಆಸರೆಯಾಗಿದ್ದು ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ.

ಅಮೋಘ ಜೊತೆಯಾಟ ನೀಡಿದ ಇಶಾನ್- ಹಾರ್ದಿಕ್
66 ರನ್‌ಗಳಿಗೆ 4 ವಿಕೆಟ್ ಕಳೆದುಕೊಂಡಿದ್ದಾಗ ಜೊತೆಯಾದ ಈ ಜೋಡಿ ತಂಡವನ್ನು ಸಂಕಷ್ಟದಿಂದ ಪಾರು ಮಾಡುವ ಜವಾಬ್ಧಾರಿಯನ್ನು ವಹಿಸಿಕೊಂಡರು. ಎಚ್ಚರಿಕೆಯಿಂದ ಇನ್ನಿಂಗ್ಸ್‌ಕಟ್ಟಿದ ಈ ಜೋಡಿ 5ನೇ ವಿಕೆಟ್‌ಗೆ ಭರ್ಜರಿ 138 ರನ್‌ಗಳ ಜೊತೆಯಾಟವನ್ನು ನೀಡಿದರು. ಈ ಸಂದರ್ಭದಲ್ಲಿ ಶತಕದತ್ತ ಹೆಜ್ಜೆಯಿಡುತ್ತಿದ್ದ ಇಶಾನ್ ಕಿಶನ್ ಅವರನ್ನು ಹ್ಯಾರಿಸ್ ರೌಪ್ ಔಟ್ ಮಾಡುವ ಮೂಲಕ ಈ ಜೊಡಯನ್ನು ಬೇರಪಡಿಸುವಲ್ಲಿ ಯಶಸ್ವಿಯಾದರು.
ಶತಕದ ಸನಿಹದಲ್ಲಿ ಎಡವಿದ ಆಪತ್ಬಾಂಧವರು
ಇನ್ನು ಈ ಪಂದ್ಯದಲ್ಲಿ ಟೀಮ್ ಇಂಡಿಯಾಗೆ ಆಪತ್ಬಾಂಧವರಾಗಿ ಜೊತೆಯಾಟ ನೀಡಿದ ಇಶಾನ್ ಕಿಶನ್ ಹಾಗೂ ಹಾರ್ದಿಕ್ ಪಾಂಡ್ಯ ಇಬ್ಬರು ಕೂಡ ಶತಕ ಗಳಿಸುವ ಅವಕಾಶವನ್ನು ಕಳೆದುಕೊಂಡರು ಇಶಾನ್ ಕಿಶನ್ 83 ರನ್‌ಗಳಿಸಿ ಔಟಾದರೆ ಹಾರ್ದಿಕ್ ಪಾಂಡ್ಯ 87 ರನ್‌ಗಳಿಸಿದಾಗ ಶಾಹೀನ್ ಅಫ್ರಿದಿಗೆ ವಿಕೆಟ್ ಒಪ್ಪಿಸಿ ಫೆವಿಲಿಯನ್‌ಗೆ ಸೇರಿಕೊಂಡರು. ಇಬ್ಬರು ಆಟಗಾರರು ಕೂಡ ಅದ್ಭುತ ಶತಕಗಳಿಸುವ ಅವಕಾಶವನ್ನು ಕಳೆದುಕೊಂಡರು.
ಪಾಕಿಸ್ತಾನ ಆಡುವ ಬಳಗ: ಫಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಮೊಹಮ್ಮದ್ ನವಾಜ್, ಶಾಹೀನ್ ಅಫ್ರಿದಿ, ನಸೀಮ್ ಶಾ, ಹರಿಸ್ ರೌಫ್
ಬೆಂಚ್: ಫಹೀಮ್ ಅಶ್ರಫ್, ಮೊಹಮ್ಮದ್ ಹ್ಯಾರಿಸ್, ಮೊಹಮ್ಮದ್ ವಾಸಿಂ ಜೂನಿಯರ್, ಅಬ್ದುಲ್ಲಾ ಶಫೀಕ್, ಸೌದ್ ಶಕೀಲ್, ಉಸಾಮಾ ಮಿರ್
ಟೀಮ್ ಇಂಡಿಯಾ ಆಡುವ ಬಳಗ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್
ಬೆಂಚ್: ಮೊಹಮ್ಮದ್ ಶಮಿ, ಅಕ್ಷರ್ ಪಟೇಲ್, ಸೂರ್ಯಕುಮಾರ್ ಯಾದವ್ , ತಿಲಕ್ ವರ್ಮ
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications