Champions Trophy 2025: ಹೇಗಿದೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ, ಪಾಕ್ ಬಲಾಬಲ?
ಚಾಂಪಿಯನ್ಸ್ ಟ್ರೋಫಿ ಹಾಲಿ ಚಾಂಪಿಯನ್ಸ್ ಪಾಕಿಸ್ತಾನ ಹಾಗೂ ಮಾಜಿ ಚಾಂಪಿಯನ್ಸ್ ಭಾರತ ತಂಡಗಳು ಮತ್ತೊಮ್ಮೆ ಐಸಿಸಿ ಟೂರ್ನಿಯಲ್ಲಿ ಮುಖಾಮುಖಿ ಆಗಲಿವೆ. ಉಭಯ ದೇಶಗಳ ನಡುವೆ ಯಾವುದೇ ಟೂರ್ನಿ ನಡೆದರೂ ಸಹ ಮಸ್ತ್ ಮಜಾ ಇರುತ್ತದೆ. ಇನ್ನು ಭಾರತ ಚಾಂಪಿಯನ್ಸ್ ಟ್ರೋಫಿಯನ್ನು ಆಡಲು ಪಾಕ್‌ಗೆ ಪ್ರವಾಸ ಬೆಳೆಸದೇ ಇರುವುದರಿಂದ, ಟೀಮ್ ಇಂಡಿಯಾ ತನ್ನ ಪಂದ್ಯಗಳನ್ನು ಯುಎಇನಲ್ಲಿ ಆಡಲಿದೆ. ಏಳು ವರ್ಷಗಳ ಬಳಿಕ ಚಾಂಪಿಯನ್ಸ್ ಟ್ರೋಫಿ ಆಯೋಜನೆ ಆಗುತ್ತಿದ್ದು ಎಲ್ಲರ ಗಮನ ಸೆಳೆದಿದೆ.
ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವೆ ಯಾವಾಗಲೂ ಪಂದ್ಯವು ನಡೆದರೂ ಜಿದ್ದಾಜಿದ್ದು ಇದ್ದೇ ಇರುತ್ತದೆ. ಐಸಿಸಿ ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ಹೇಗೆ ಪಾರಮ್ಯ ಸಾಧಿಸಿದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಚಾರ. ಆದರೆ ಚಾಂಪಿಯನ್ಸ್ ಟ್ರೋಫಿ ಲೆಕ್ಕಾಚಾರದಲ್ಲಿ ಎದುರಾಳಿ ಪಾಕ್ ತಂಡದ ಕೈ ಮೇಲಾಗುತ್ತದೆ. ಹಾಗಿದ್ದರೆ ಉಭಯ ತಂಡಗಳ ನಡುವೆ ಎಷ್ಟು ಪಂದ್ಯಗಳನ್ನು ಚಾಂಪಿಯನ್ಸ್ ಟ್ರೋಫಿಯಲ್ಲಿ ಆಡಿವೆ. ಯಾರು ಹೆಚ್ಚು ಪಂದ್ಯ ಗೆದ್ದಿದ್ದಾರೆ ಎಂಬ ಬಗ್ಗೆ ಮಾಹಿತಿ ಇಲ್ಲಿದೆ.

ಭಾರತ ಹಾಗೂ ಪಾಕಿಸ್ತಾನ ತಂಡಗಳು ಈಗಾಗಲೇ 5 ಬಾರಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಕಾದಾಟ ನಡೆಸಿವೆ. ಈ ವೇಳೆ ಭಾರತ ಎರಡು ಪಂದ್ಯಗಳನ್ನು ಗೆದ್ದರೆ, ಪಾಕ್ ಮೂರು ಪಂದ್ಯಗಳನ್ನು ಗೆದ್ದಿದೆ. ಇಂಗ್ಲೆಂಡ್‌ನಲ್ಲಿ ಕೊನೆಯ ಬಾರಿಗೆ ಚಾಂಪಿಯನ್ಸ್ ಟ್ರೋಫಿಯನ್ನು 2017ರಲ್ಲಿ ಆಯೋಜಿಸಲಾಗಿತ್ತು. ಆಗ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ತಂಡಗಳು ಫೈನಲ್‌ನಲ್ಲಿ ಕಾದಾಟ ನಡೆಸಿದ್ದವು. ಪ್ರಶಸ್ತಿ ಸುತ್ತಿನ ಕಾದಾಟದಲ್ಲಿ ಪಾಕ್ ಜಯ ಭೇರಿ ಬಾರಿಸಿ, ಟ್ರೋಫಿಗೆ ಮುತ್ತಿಟ್ಟಿತು.
ಭಾರತದ ವಿರುದ್ಧ ಪಾಕ್ ಮೊದಲ ಪಂದ್ಯ ಗೆದ್ದಿದ್ದು ಯಾವಾಗ?
ಉಭಯ ದೇಶಗಳ ನಡುವಿನ ಚಾಂಪಿಯನ್ಸ್ ಟ್ರೋಫಿ ಮೊದಲ ಫೈಟ್ 2004ರಲ್ಲಿ ನಡೆದಿತ್ತು. ಈ ಪಂದ್ಯವನ್ನು ಪಾಕ್ ಗೆದ್ದು ಬೀಗಿತ್ತು. 2009ರಲ್ಲಿ ಭಾರತ ಚಾಂಪಿಯನ್ಸ್ ಟ್ರೋಫಿ ಆಯೋಜಿಸಿತು. ಈ ವೇಳೆ ಸಹ ಪಾಕ್ ಟೀಮ್ ಇಂಡಿಯಾದ ಸದ್ದಡಗಿಸಿತ್ತು. 2013ರಲ್ಲಿಯ ಚಾಂಪಿಯನ್ಸ್ ಟ್ರೋಫಿಗೆ ಇಂಗ್ಲೆಂಡ್ ಹಾಗೂ ವೇಲ್ಸ್ ಆತಿಥ್ಯ ವಹಿಸಿದ್ದವು. ಆಗ ಭಾರತ ಮಹೇಂದ್ರ ಸಿಂಗ್ ಧೋನಿ ನಾಯಕತ್ವದಲ್ಲಿ ಪಾಕ್ ವಿರುದ್ಧ ಚಾಂಪಿಯನ್ಸ್ ಟ್ರೋಫಿಯಲ್ಲಿ ಮೊದಲ ಗೆಲುವು ದಾಖಲಿಸಿತು. ಆಗ ನಡೆದ ಪಂದ್ಯಕ್ಕೆ ಮಳೆ ಕಾಟ ನೀಡಿತ್ತು. ಪರಿಣಾಮ ಓವರ್ ಗಳಿಗೆ ಕತ್ತರಿ ಬಿದ್ದಿತು. ಮೊದಲ ಬ್ಯಾಟ್ ಮಾಡಿದ ಪಾಕ್ 39.4 ಓವರ್‍ಗಳಲ್ಲಿ 165 ರನ್ ಸೇರಿಸಿತು. ಇನ್ನು ಡಕ್ವರ್ತ್ ಲೂಯಿಸ್ ನಿಯಮದಂತೆ ಭಾರತ ಎಂಟು ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತು.

ಭಾರತ ಹಾಗೂ ಪಾಕಿಸ್ತಾನ ತಂಡಗಳು ಚಾಂಪಿಯನ್ಸ್ ಟ್ರೋಫಿಗೆ ಮುತ್ತಿಟ್ಟಿವೆ. 2002ರಲ್ಲಿ ಶ್ರೀಲಂಕಾದಲ್ಲಿ ನಡೆದ ಟೂರ್ನಿಯ ಕೊನೆಯ ಪಂದ್ಯ ಮಳೆಯಿಂದಾಗಿ ರದ್ದಾಯಿತು. ಹೀಗಾಗಿ ಭಾರತ, ಶ್ರೀಲಂಕಾ ಜಂಟಿ ಚಾಂಪಿಯನ್ ಎಂದು ಘೋಷಿಸಲಾಯಿತು. 2013ರಲ್ಲಿ ಧೋನಿ ನೇತೃತ್ವದಲ್ಲಿ ಭಾರತ ಮೊದಲ ಬಾರಿಗೆ ಏಕಾಂಗಿಯಾಗಿ ಪ್ರಶಸ್ತಿಯನ್ನು ಪಡೆಯಿತು. ಇನ್ನು ಪಾಕ್ 2017ರಲ್ಲಿ ಈ ಟೂರ್ನಿಯ ಚಾಂಪಿಯನ್ ಆಗಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications