ಭಾರತ-ಪಾಕ್ ಪಂದ್ಯ : ಟೀಂ ಇಂಡಿಯಾಕ್ಕೆ ಕುಮಾರಸ್ವಾಮಿ ಶುಭ ಹಾರೈಕೆ
ICC World Cup 2019 : ಇದು ಕುಮಾರಣ್ಣನ ವಿಶ್ವಕಪ್ ಕ್ರೇಜ್..? | Oneindia Kannada

ಬೆಂಗಳೂರು, ಜೂನ್ 16 : ವಿಶ್ವಕಪ್ ಕ್ರಿಕೆಟ್‌ನಲ್ಲಿ ಭಾರತ-ಪಾಕಿಸ್ತಾನ ನಡುವಿನ ಹೈ ವೋಲ್ಟೇಟ್ ಪಂದ್ಯಕ್ಕೆ ಕ್ಷಣಗಣನೆ ಆರಂಭವಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾರತ ತಂಡಕ್ಕೆ ಶುಭಾಶಯ ಸಲ್ಲಿಸಿದ್ದಾರೆ.
ಭಾನುವಾರ ಎಚ್.ಡಿ.ಕುಮಾರಸ್ವಾಮಿ ಅವರು ಈ ಕುರಿತು ಟ್ವೀಟ್ ಮಾಡಿದ್ದಾರೆ. 'ಆಲ್ ದಿ ಬೆಸ್ಟ್ ಟೀಮ್ ಇಂಡಿಯಾ. ಜಯಿಸಿ ಬನ್ನಿ' ಎಂದು ಭಾರತ ತಂಡಕ್ಕೆ ಟ್ವೀಟ್ ಮೂಲಕ ಶುಭಾಶಯ ಕೋರಿದ್ದಾರೆ.
ಮ್ಯಾಂಚೆಸ್ಟರ್‌ನಲ್ಲಿ ಭಾರತ-ಪಾಕಿಸ್ತಾನದ ನಡುವೆ ಏಕದಿನ ಪಂದ್ಯ ಇಂದು ನಡೆಯಲಿದೆ. ಭಾನುವಾರ ಮಧ್ಯಾಹ್ನ 3ಗಂಟೆಗೆ ಪಂದ್ಯ ಆರಂಭವಾಗಲಿದೆ. ಇಡೀ ವಿಶ್ವವೇ ಈ ಪಂದ್ಯವನ್ನು ಎದುರು ನೋಡುತ್ತಿದೆ.

ಭಾರತ-ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ ಪಡಿಸದಿರಲಿ ಎಂದು ಕೋಟ್ಯಾಂತರ ಅಭಿಮಾನಿಗಳು ದೇವರನ್ನು ಪ್ರಾರ್ಥಿಸುತ್ತಿದ್ದಾರೆ. ಭಾನುವಾರ ಪಂದ್ಯ ನಡೆಯುತ್ತಿದೆ, ಅಭಿಮಾನಿಗಳು ಮಧ್ಯಾಹ್ನದ ಬಳಿಕ ಟಿವಿ ಮುಂದೆ ಠಿಕಾಣಿ ಹೂಡುವುದು ಖಚಿತವಾಗಿದೆ.
Story first published: Sunday, June 16, 2019, 13:24 [IST]
Other articles published on Jun 16, 2019
Log in for Better Reading Experience!
By signing in, you agree to our Terms and Privacy Policy
Gender
Select your Gender
- Male
- Female
- Others
Age
Select your Age Range
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications