For Quick Alerts
ALLOW NOTIFICATIONS  
For Daily Alerts
 

India vs Pakistan Match: ಪಾಕಿಸ್ತಾನ ವಿರುದ್ಧ ಶ್ರೇಯಸ್ ಅಯ್ಯರ್ ಏಕೆ ಆಡುತ್ತಿಲ್ಲ?; ಶಾಕಿಂಗ್ ಸುದ್ದಿ ನೀಡಿದ ರೋಹಿತ್!

ಭಾನುವಾರ, ಸೆಪ್ಟೆಂಬರ್ 10ರಂದು ಕೊಲಂಬೊದ ಆರ್. ಪ್ರೇಮದಾಸ ಸ್ಟೇಡಿಯಂನಲ್ಲಿ ನಡೆಯುತ್ತಿರುವ 2023ರ ಏಷ್ಯಾ ಕಪ್ ಪಂದ್ಯಾವಳಿಯ ಸೂಪರ್ 4ರ ರೋಚಕ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಸೆಣಸಾಡುತ್ತಿವೆ.

ಟಾಸ್ ಗೆದ್ದ ಪಾಕಿಸ್ತಾನ ತಂಡದ ನಾಯಕ ಮೊದಲು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಹೀಗಾಗಿ ರೋಹಿತ್ ಶರ್ಮಾ ನಾಯಕತ್ವದ ಭಾರತ ತಂಡ ಮೊದಲು ಬ್ಯಾಟಿಂಗ್ ಮಾಡುತ್ತಿದೆ. ಗುಂಪು ಹಂತದ ಹಣಾಹಣಿಯಲ್ಲೂ ಭಾರತ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿತ್ತು.

india-pakistan-match


ಇದೇ ವೇಳೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಶ್ರೇಯಸ್ ಅಯ್ಯರ್ ಅವರು ಹೊರಗುಳಿದರು. 2023ರ ಏಷ್ಯಾ ಕಪ್ ಪಂದ್ಯಾವಳಿಯಲ್ಲಿ ಪಾಕಿಸ್ತಾನ ವಿರುದ್ಧದ ಸೂಪರ್ 4 ಪಂದ್ಯಕ್ಕೆ ಮುಂಚಿತವಾಗಿ ಭಾರತ ತಂಡ ದೊಡ್ಡ ಆಘಾತ ಎದುರಿಸಿತು.

ಇತ್ತೀಚೆಗಷ್ಟೇ ಬೆನ್ನು ನೋವಿನಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದ ಶ್ರೇಯಸ್ ಅಯ್ಯರ್ ಪಾಕಿಸ್ತಾನದ ಪಂದ್ಯಕ್ಕೆ ಮುನ್ನ ಬೆನ್ನು ಸೆಳೆತದ ಕಾರಣದಿಂದ ಹೊರಗುಳಿದಿರುವುದು 2023ರ ವಿಶ್ವಕಪ್ ಪಂದ್ಯಾವಳಿಗೂ ಮುನ್ನ ಭಾರತಕ್ಕೆ ಆಘಾತಕಾರಿ ಸುದ್ದಿಯಾಗಿದೆ.

India Pakistan Match: Rohit Reveals This Shocking Truth on Why Shreyas Iyer Not playing against Pakistan

ಟಾಸ್ ವೇಳೆ ಮಾತನಾಡಿದ ಭಾರತ ತಂಡದ ನಾಯಕ ರೋಹಿತ್ ಶರ್ಮಾ, "ತಂಡದಲ್ಲಿ ಎರಡು ಬದಲಾವಣೆ ಮಾಡಲಾಗಿದೆ. ಜಸ್ಪ್ರೀತ್ ಬುಮ್ರಾ ಮತ್ತು ಕೆಎಲ್ ರಾಹುಲ್ ಆಡುವ ಬಳಗಕ್ಕೆ ಮರಳಿದ್ದಾರೆ. ಶ್ರೇಯಸ್ ಅಯ್ಯರ್ ಬೆನ್ನು ಸೆಳೆತಕ್ಕೆ ಒಳಗಾಗಿದ್ದಾರೆ. ಆದ್ದರಿಂದ ಕೆಎಲ್ ರಾಹುಲ್ ಆಡಲಿದ್ದಾರೆ," ಎಂದು ರವಿಶಾಸ್ತ್ರಿ ಅವರಿಗೆ ಹೇಳಿದರು.

ಮಾತು ಮುಂದುವರೆಸಿ, "ನಾವು ಹವಾಮಾನ ಪರಿಸ್ಥಿತಿಗಳ ಬಗ್ಗೆ ಹೆಚ್ಚು ಯೋಚಿಸುತ್ತಿಲ್ಲ. ಆದರೆ ಪಂದ್ಯಾವಳಿಯಲ್ಲಿ ಉತ್ತಮ ಕ್ರಿಕೆಟ್ ಆಡುತ್ತಿದ್ದೇವೆ," ಎಂದು ಭಾರತ ತಂಡದ ನಾಯಕ ರೋಹಿತ್ ಶರ್ಮಾ ತಿಳಿಸಿದರು.

ಮತ್ತೆ ಮಧ್ಯಮ ಕ್ರಮಾಂಕದ ನಂಬಿಕಸ್ಥ ಬ್ಯಾಟರ್ ಶ್ರೇಯಸ್ ಅಯ್ಯರ್ ಮತ್ತೆ ಬೆನ್ನು ಸೆಳೆತಕ್ಕೆ ಒಳಗಾಗಿರುವುದು ಭಾರತ ತಂಡಕ್ಕೆ ಇದು ದುಬಾರಿಯಾಗಿ ಪರಿಣಮಿಸಲಿದೆ.

ಏಕೆಂದರೆ, ಏಷ್ಯಾ ಕಪ್ ಪಂದ್ಯಾವಳಿಯ ಉಳಿದ ಪಂದ್ಯಗಳು ಮತ್ತು ಮುಂಬರುವ ಏಕದಿನ ವಿಶ್ವಕಪ್ ಪಂದ್ಯಾವಳಿಗೆ ಅವರ ಲಭ್ಯತೆ ಬಗ್ಗೆ ಅನುಮಾನಗಳು ಕಾಡುತ್ತಿವೆ. ಅಲ್ಲದೆ ವಿಶ್ವಕಪ್ ಭಾರತ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ತಂಡದ ಮ್ಯಾನೇಜ್‌ಮೆಂಟ್ ಇದನ್ನು ಹೇಗೆ ನಿಭಾಯಿಸಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನು ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ವೇಗಿ ಮೊಹಮ್ಮದ್ ಶಮಿ ಬದಲಿಗೆ ಜಸ್ಪ್ರೀತ್ ಬುಮ್ರಾ ಮರಳಿ ಸ್ಥಾನ ಪಡೆದಿದ್ದಾರೆ. ನೇಪಾಳ ವಿರುದ್ಧದ ಪಂದ್ಯದ ಸಮಯದಲ್ಲಿ ಅವರು ಪತ್ನಿ ಸಂಜನಾ ಗಣೇಶನ್ ಅವರು ಮೊದಲ ಮಗುವಿನ ಜನ್ಮ ನೀಡಿದ ಕಾರಣ ತವರಿಗೆ ವಾಪಸ್ಸಾಗಿದ್ದರು.

ಜಸ್ಪ್ರೀತ್ ಬುಮ್ರಾ ಅವರ ವಾಪಸಾತಿ ಭಾರತದ ಬೌಲಿಂಗ್ ವಿಭಾಗವನ್ನು ಬಲಿಷ್ಠಗೊಳಿಸಲಿದೆ. ಮೊಹಮ್ಮದ್ ಸಿರಾಜ್ ಅವರೊಂದಿಗೆ ಹೊಸ ಚೆಂಡನ್ನು ಹಂಚಿಕೊಳ್ಳಲು ಸಜ್ಜಾಗಿದ್ದಾರೆ. ಶಾರ್ದೂಲ್ ಠಾಕೂರ್ ತಂಡದಲ್ಲಿ ಮೂರನೇ ವೇಗಿ ಆಗಿದ್ದು, ಹಾರ್ದಿಕ್ ಪಾಂಡ್ಯ ಮಧ್ಯಮ ವೇಗದ ಬೌಲಿಂಗ್ ಮಾಡುವ ಆಲ್‌ರೌಂಡರ್ ಆಗಿದ್ದಾರೆ.

ಕುಲದೀಪ್ ಯಾದವ್ ತಂಡದಲ್ಲಿರುವ ಏಕೈಕ ಸ್ಪಿನ್ನರ್ ಆಗಿದ್ದು, ಶ್ರೇಯಸ್ ಅಯ್ಯರ್ ಗಾಯಗೊಂಡಿರುವ ಕಾರಣ ಆಡುವ ಬಳಗದಲ್ಲಿ ಸ್ಥಾನವನ್ನು ಉಳಿಸಿಕೊಳ್ಳುವಲ್ಲಿ ಇಶಾನ್ ಕಿಶನ್ ಯಶಸ್ವಿಯಾಗಿದ್ದಾರೆ. ಉಳಿದಂತೆ ಸ್ಪಿನ್‌ಆಲ್‌ರೌಂಡರ್ ರವೀಂದ್ರ ಜಡೇಜಾ ಇದ್ದಾರೆ.

ಇನ್ನು ಪಾಕಿಸ್ತಾನ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಬಾಂಗ್ಲಾದೇಶ ವಿರುದ್ಧ ಆಡಿದ್ದ ತಂಡವನ್ನೇ ಮುಂದುವರೆಸಿದೆ. ಒಂದು ದಿನ ಮುಂಚೆಯೇ ತಮ್ಮ ತಂಡವನ್ನು ಪಾಕಿಸ್ತಾನ ಪ್ರಕಟಿಸಿತ್ತು. ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ಮೊಹಮ್ಮದ್ ನವಾಜ್ ಭಾರತ ವಿರುದ್ಧ ಮೊದಲ ಪಂದ್ಯ ಆಡಿದ್ದರು. ಈ ಪಂದ್ಯದಲ್ಲಿ ಫಾಹೀಮ್ ಅಶ್ರಫ್ ಅವರನ್ನು ಸೇರಿಸಿಕೊಂಡಿದೆ.

ಏಷ್ಯಾ ಕಪ್ 2023: ಭಾರತ vs ಪಾಕಿಸ್ತಾನ ತಂಡಗಳ ಆಡುವ 11ರ ಬಳಗ
ಭಾರತ: ಶುಭ್ಮನ್ ಗಿಲ್, ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ಇಶಾನ್ ಕಿಶನ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಪಾಕಿಸ್ತಾನ: ಫಾಖರ್ ಜಮಾನ್, ಇಮಾಮ್-ಉಲ್-ಹಕ್, ಬಾಬರ್ ಅಜಮ್ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಅಘಾ ಸಲ್ಮಾನ್, ಇಫ್ತಿಕರ್ ಅಹ್ಮದ್, ಶಾದಾಬ್ ಖಾನ್, ಫಾಹೀಮ್ ಅಶ್ರಫ್, ಶಾಹೀನ್ ಶಾ ಅಫ್ರಿದಿ, ನಸೀಮ್ ಶಾ, ಹ್ಯಾರಿಸ್ ರೌಫ್.

Story first published: Sunday, September 10, 2023, 15:45 [IST]
Other articles published on Sep 10, 2023
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+