Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ಪಾಕಿಸ್ತಾನ ಪಂದ್ಯಕ್ಕೆ ಭಧ್ರತಾ ಸಿಬ್ಬಂದಿಗಳ ಸರ್ಪಗಾವಲು: ಹೇಗಿದೆ ಬಿಗಿ ಭದ್ರತೆ?

ತೀವ್ರ ಕುತೂಹಲ ಮೂಡಿಸಿರುವ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಪಂದ್ಯ ಶನಿವಾರ ಅಹ್ಮದಾಬಾದ್‌ನಲ್ಲಿ ಆಯೋಜನೆಯಾಗಲಿದೆ. ವಿಶ್ವದ ಅತ್ಯಂತ ದೊಡ್ಡ ಕ್ರೀಡಾಂಗಣ ಎಂಬ ಹೆಗ್ಗಳಿಕೆ ಹೊಂದಿರುವ ನರೇಂದ್ರ ಮೊದಿ ಕ್ರೀಡಾಂಗಣದಲ್ಲಿ 1,30,000 ಅಭಿಮಾನಿಗಳ ಸಾಮರ್ಥ್ಯ ಹೊಂದಿದ್ದು ಈ ರೋಚಕ ಕದನಕ್ಕೆ ಅಭಿಮಾನಿಗಳು ಕಿಕ್ಕಿರಿದು ಸೇರುವುದರಲ್ಲಿ ಅನುಮಾನವಿಲ್ಲ.

ಆದರೆ ಭಾರತ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಈ ಪಂದ್ಯ ಭದ್ರತೆಯ ದೃಷ್ಟಿಯಿಂದ ಸಾಕಷ್ಟು ಸೂಕ್ಷ್ಮವೂ ಆಗಿರುವ ಕಾರಣ ಬಿಗಿ ಭದ್ರತೆ ಅನಿವಾರ್ಯವಾಗಿದೆ. ಈ ಹಿನ್ನೆಲೆಯಲ್ಲಿ ಟೀಮ್ ಇಂಡಿಯಾ ಹಾಗೂ ಪಾಕಿಸ್ತಾನ ತಂಡಗಳ ನಡುವಿನ ಈ ಪಂದ್ಯ ರಕ್ಷಣಾ ಸಿಬ್ಬಂದಿಗಳ ಸರ್ಪಗಾವಲಿನಲ್ಲಿ ನಡೆಯಲಿದೆ.

India-Pakistan World Cup Match: Over 11,000 Security Personnel to Be DeployedinAhmedabad

ಗುಜರಾತ್ ಪೊಲೀಸರು, ನ್ಯಾಶನಲ್ ಸೆಕ್ಯೂರಿಟಿ ಗಾರ್ಡ್ಸ್, ಆರ್‌ಎಫ್ ಹೀಮ್ ಗಾರ್ಡ್ಸ್ ಸೇರಿದಂತೆ ಬರೊಬ್ಬರಿ 11,000ರದಷ್ಟು ಭಧ್ರತಾ ಸಿಬ್ಬಂದಿಗಳು ಈ ಪಂದ್ಯಕ್ಕೆ ರಕ್ಷಣೆ ನೀಡಲಿದ್ದಾರೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಪ್ರತಿಕ್ರಿಯೆ ನೀಡಿದ್ದು ಈ ಪಂದ್ಯಕ್ಕೆ ಬೆದರಿಕೆಗಳು ಇರುವ ಕಾರಣ ಈ ಪ್ರಮಾಣದ ಭದ್ರತೆಯನ್ನು ಕೈಗೊಳ್ಳಲಾಗಿದೆ ಎಂದಿದ್ದಾರೆ.

ಕಳೆದ 20 ವರ್ಷಗಳಲ್ಲಿ ಅಹಮದಾಬಾದ್ ನಗರದಲ್ಲಿ ನಡೆದ ಕ್ರಿಕೆಟ್ ಪಂದ್ಯಗಳಲ್ಲಿ ಎಂದಿಗೂ ಕೋಮುಗಲಭೆ ನಡೆದಿಲ್ಲ. ಹಾಗಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಹಲವಾರು ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಭದ್ರತಾ ಪಡೆಗಳನ್ನು ನಿಯೋಜಿಸಲಾಗುವುದು ಎಂದು ಅಹಮದಾಬಾದ್ ಪೊಲೀಸ್ ಕಮಿಷನರ್ ಜಿ ಎಸ್ ಮಲಿಕ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

ಇನ್ನೂ ಇದಕ್ಕೂ ಮುನ್ನ ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರು ಗೃಹ ಖಾತೆ ರಾಜ್ಯ ಸಚಿವ ಹರ್ಷ ಸಂಘವಿ, ರಾಜ್ಯ ಡಿಜಿಪಿ ವಿಕಾಸ್ ಸಹಾಯ್, ಜಿಎಸ್ ಮಲಿಕ್ ಮತ್ತು ಇತರ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಈ ಸಂದರ್ಭದಲ್ಲಿ ಭದ್ರತಾ ಯೋಜನೆಗಳನ್ನು ಖಚಿತಪಡಿಸಿಕೊಂಡಿದ್ದಾರೆ.

ಬಳಿಕ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪೊಲೀಸ್ ಕಮಿಷನರ್ ಜಿಎಸ್ ಮಲಿಕ್ ಮುಖ್ಯಮಂತ್ರಿಗಳು ಭದ್ರತಾ ಸಿದ್ಧತೆಗಳನ್ನು ಪರಿಶೀಲಿಸಿದ್ದಾರೆ ಮತ್ತು ಪಂದ್ಯದ ವೇಳೆ ಯಾವುದೇ ಅಹಿತಕರ ಘಟನೆ ನಡೆಯದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವಂತೆ ಪೊಲೀಸರಿಗೆ ಸೂಚಿಸಿದ್ದಾರೆ ಎಂದರು.

ಇನ್ನು ಈ ಪಂದ್ಯಕ್ಕೆ 7000ದಷ್ಟು ಪೊಲೀಸರು ಹಾಗೂ 4000ದಷ್ಟು ಹೋಮ್‌ಗಾರ್ಡ್‌ಗಳು ಕ್ರೀಡಾಂಗಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಜವಾಬ್ಧಾರಿ ವಹಿಸಿಕೊಳ್ಳಲಿದ್ದಾರೆ.ಇನ್ನು ಈ ಸಿಬ್ಬಂದಿಗಳ ಜೊತೆಗೆ ಹೆಚ್ಚುವರಿಯಾಗಿ ಮೂರು 'ಹಿಟ್ ಟೀಮ್‌' ಮತ್ತು ಎನ್ಎಸ್ಜಿಯ ಒಂದು ಆ್ಯಂಟಿ ಡ್ರೋನ್ ಜೊತೆಗೆ ಬಾಂಬ್ ಪತ್ತೆ ಮತ್ತು ವಿಲೇವಾರಿ ದಳದ ಒಂಬತ್ತು ತಂಡಗಳನ್ನು ಸಹ ಬಳಸಿಕೊಳ್ಳಲಾಗುತ್ತದೆ ಎಂದು ಪೊಲೀಸ್ ಕಮಿಷನರ್ ಜಿಎಸ್ ಮಲಿಕ್ ಮಾಹಿತಿ ನೀಡಿದ್ದಾರೆ.

Story first published: Tuesday, October 10, 2023, 13:56 [IST]
Other articles published on Oct 10, 2023
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+