For Quick Alerts
ALLOW NOTIFICATIONS  
For Daily Alerts
 

ICC Rankings: ಅಭಿಷೇಕ್‌, ವರುಣ್‌ ನಂಬರ್ 1 ಸ್ಥಾನ ಭದ್ರ: ಗಿಲ್‌ಗೆ ಬಡ್ತಿ

ಅಂತಾರಾಷ್ಟ್ರೀಯ ಕ್ರಿಕೆಟ್‌ ಮಂಡಳಿ (ಐಸಿಸಿ) ನೂತನವಾಗಿ ಬಿಡುಗಡೆಗೊಳಿಸಿದೆ. ಈ ವೇಳೆ ಟೀಮ್ ಇಂಡಿಯಾದ ಆಟಗಾರರು ಭರ್ಜರಿ ಲಾಭ ಪಡೆದಿದ್ದಾರೆ. ಇತ್ತೀಚಿನ ದಿನಗಳಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿರುವ ಟೀಮ್ ಇಂಡಿಯಾದ ಆರಂಭಿಕ ಅಭಿಷೇಕ್ ಶರ್ಮಾ ಶ್ರೇಯಾಂಕದಲ್ಲಿ ನಂಬರ್ ಒನ್‌ ಪಟ್ಟವನ್ನು ಭಧ್ರ ಪಡಿಸಿಕೊಂಡಿದ್ದಾರೆ. ಇನ್ನು ಶುಭಮನ್‌ ಗಿಲ್‌ ಟಿ20 ಶ್ರೇಯಾಂಕದಲ್ಲಿ ಬಡ್ತಿ ಪಡೆದಿದ್ದಾರೆ.

ಬುಧವಾರ ಬಿಡುಗಡೆಗೊಂಡ ಶ್ರೇಯಾಂಕದಲ್ಲಿ ಅಭಿಷೇಕ್‌ ಶರ್ಮಾ 907 ರೇಟಿಂಗ್ ಪಾಯಿಂಟ್‌ಗಳೊಂದಿಗೆ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಇವರು ಎರಡನೇ ಶ್ರೇಯಾಂಕದಲ್ಲಿರುವ ಇಂಗ್ಲೆಂಡ್ ತಂಡದ ಫಿಲ್ ಸಾಲ್ಟ್‌ ಅವರಿಗಿಂತ 63 ರೇಟಿಂಗ್‌ ಅಂಕಗಳಿಂದ ಹಿಂದಿದ್ದಾರೆ. ಇನ್ನು ಮೂರನೇ ಕ್ರಮಾಂಕದಲ್ಲಿ ಟೀಮ್ ಇಂಡಿಯಾದ ಸೂಪರ್‌ ಸ್ಟಾರ್ ಆಟಗಾರ ತಿಲಕ್‌ ವರ್ಮಾ ಒಂದು ಸ್ಥಾನವನ್ನು ಏರಿಕೆ ಕಂಡಿದ್ದಾರೆ. ಇವರು 791 ಅಂಕಗಳೊಂದಿಗೆ ಮೂರನೇ ಸ್ಥಾನಕ್ಕೆ ಬಡ್ತಿ ಪಡೆದಿದ್ದಾರೆ.

India players gain big in new ICC T20I rankings Abhishek Sharma solidifies top spot

ಒಂದು ವರ್ಷದ ಬಳಿಕ ಟಿ20 ಫಾರ್ಮೆಟ್‌ಗೆ ಕಂ ಬ್ಯಾಕ್ ಮಾಡಿದ್ದ ಶುಭಮನ್‌ ಗಿಲ್‌ ಪಾಕಿಸ್ತಾನ ವಿರುದ್ಧ ಅಮೋಘ ಇನಿಂಗ್ಸ್‌ ಕಟ್ಟಿದ್ದರು. ಇದರ ಪರಿಣಾಮ ಇವರು ಚುಟುಕು ಫಾರ್ಮೆಟ್‌ನಲ್ಲಿ ಬಡ್ತಿ ಪಡೆದಿದ್ದಾರೆ. ಗಿಲ್‌ ಏಳು ಸ್ಥಾನಗಳ ಜಿಗಿತವನ್ನು ಕಂಡಿದ್ದು, 574 ರೇಟಿಂಗ್ ಪಾಯಿಂಟ್‌ಗಳೊಂದಿಗೆ 32 ನೇ ಸ್ಥಾನದಲ್ಲಿದ್ದಾರೆ. ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ ಒಂದು ಸ್ಥಾನ ಏರಿಕೆ ಕಂಡಿದ್ದು, ಸದ್ಯ ಆರನೇ ಸ್ಥಾನದಲ್ಲಿದ್ದಾರೆ. 2025 ರ ಏಷ್ಯಾಕಪ್‌ನಲ್ಲಿ ಇದುವರೆಗೆ ಪಾಕಿಸ್ತಾನ ತಂಡಕ್ಕೆ ಅತ್ಯುತ್ತಮ ಬ್ಯಾಟ್ಸ್‌ಮನ್ ಆಗಿರುವ ಸಾಹಿಬ್‌ಜಾದಾ ಫರ್ಹಾನ್ 31 ಸ್ಥಾನಗಳ ಜಿಗಿತದೊಂದಿಗೆ 589 ರೇಟಿಂಗ್ ಪಾಯಿಂಟ್‌ಗಳೊಂದಿಗೆ 24 ನೇ ಸ್ಥಾನವನ್ನು ತಲುಪಿದ್ದಾರೆ.

ಕುಲ್‌ದೀಪ್‌ ಸ್ಥಾನ ಏರಿಕೆ

ಟಿ20 ಬೌಲಿಂಗ್ ಶ್ರೇಯಾಂಕದಲ್ಲಿ ವರುಣ್‌ ಚಕ್ರವರ್ತಿ ಮೊದಲ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಇವರು 747 ಅಂಕಗಳೊಂದಿಗೆ ನಂಬರ್‌ 1 ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಸ್ಟಾರ್‌ ಸ್ಪಿನ್ ಬೌಲರ್‌ಗಳಾದ ರವಿ ಬಿಷ್ಣೋಯಿ, ಅಕ್ಷರ್ ಪಟೇಲ್‌, ಅರ್ಷದೀಪ್‌ ಸಿಂಗ್‌ ಶ್ರೇಯಾಂಕದಲ್ಲಿ ಇಳಿಕೆ ಕಂಡಿದ್ದಾರೆ. ಭರವಸೆಯ ಸ್ಪಿನ್ ಬೌಲರ್‌ ಕುಲ್‌ದೀಪ್‌ ಯಾದವ್ 609 ಅಂಕಗಳೊಂದಿಗೆ 21ನೇ ಶ್ರೇಯಾಂಕದಲ್ಲಿದ್ದಾರೆ.

India players gain big in new ICC T20I rankings Abhishek Sharma solidifies top spot

ಟೀಮ್ ಇಂಡಿಯಾ ಏಷ್ಯಾ ಕಪ್‌ ಟಿ20 ಸರಣಿಯ ಲೀಗ್‌ ಹಂತದ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ, ಸೂಪರ್ 4 ಹಂತಕ್ಕೆ ಅರ್ಹತೆ ಪಡೆದಿದೆ. ಈ ಹಂತದಲ್ಲಿ ಪಾಕಿಸ್ತಾನ ವಿರುದ್ಧದ ತಾನು ಆಡಿದ ಮೊದಲ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿ ಜಯ ಸಾಧಿಸಿತ್ತು. ಬುಧವಾರ ಟೀಮ್ ಇಂಡಿಯಾ, ಬಾಂಗ್ಲಾ ವಿರುದ್ಧ ಕಾದಾಟವನ್ನು ನಡೆಸಲಿದೆ.

Story first published: Wednesday, September 24, 2025, 16:23 [IST]
Other articles published on Sep 24, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+