IND vs ENG: ರವಿ ಬಿಷ್ಣೋಯಿ ಔಟ್? ಟೀಮ್ ಇಂಡಿಯಾ ಪ್ಲೇಯಿಂಗ್ 11ನಲ್ಲಿ ಮಹತ್ವದ ಬದಲಾವಣೆಯ ಗಾಳಿ
IND vs ENG 3rd T20I: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತದ ಟಿ20 ಕ್ರಿಕೆಟ್ ತಂಡದ ನೂತನ ನಾಯಕ ಶ್ರೇಯಸ್ ಅಯ್ಯರ್ ಸದ್ಯ ತಮ್ಮ ಮೊದಲ ಗೆಲುವಿಗಾಗಿ ತೀವ್ರ ಹೋರಾಟ ನಡೆಸುತ್ತಿದ್ದಾರೆ. ಈಗಾಗಲೇ ಸತತ ಎರಡು ಸೋಲು ಕಂಡಿರುವ ಟೀಮ್ ಇಂಡಿಯಾ ಭರ್ಜರಿ ಕಮ್‌ಬ್ಯಾಕ್ ಮಾಡಲು ಮಹತ್ವದ ಬದಲಾವಣೆಗೆ ಮುಂದಾಗಿದೆ ಎನ್ನುವ ಮಾಹಿತಿ ತಿಳಿದುವಂದಿದೆ.
ಐರ್ಲೆಂಡ್ ಪ್ರವಾಸದಲ್ಲೂ ನಿರೀಕ್ಷಿತ ಯಶಸ್ಸು ಕಾಣದ ಭಾರತ ಈಗ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಯ ಎರಡು ಪಂದ್ಯಗಳಲ್ಲೂ ಹಿನ್ನಡೆ ಅನುಭವಿಸಿದೆ. ಮ್ಯಾಂಚೆಸ್ಟರ್‌ನಲ್ಲಿ ನಡೆದ ಎರಡನೇ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ 4 ವಿಕೆಟ್‌ಗಳ ಸೋಲು ಕಂಡಿರುವ ಟೀಮ್ ಇಂಡಿಯಾ ಸರಣಿಯಲ್ಲಿ 1-0 ಇಂದ ಹಿಂದೆ ಬಿದ್ದಿದೆ.

ಚೊಚ್ಚಲ ಪಂದ್ಯದಲ್ಲಿ 14 ರನ್ ಸಿಡಿಸಿದ ವೈಭವ್
ಆದ್ದರಿಂದ ನಾಟಿಂಗ್‌ಹ್ಯಾಮ್‌ನ ಟ್ರೆಂಟ್ ಬ್ರಿಡ್ಜ್ ಸ್ಟೇಡಿಯಂನಲ್ಲಿ ನಡೆಯಲಿರುವ ನಿರ್ಣಾಯಕ ಮೂರನೇ ಟಿ20 ಪಂದ್ಯಕ್ಕೆ ಭಾರತದ ಪ್ಲೇಯಿಂಗ್ 11ನಲ್ಲಿ ಕೆಲವು ಪ್ರಮುಖ ಬದಲಾವಣೆಗಳನ್ನು ಮಾಡಲು ನಾಯಕ ಮತ್ತು ಮ್ಯಾನೇಜ್‌ಮೆಂಟ್ ಮುಂದಾಗಿದೆ. ಕಳೆದ ಪಂದ್ಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡುವ ಮೂಲಕ ಸಚಿನ್ ತೆಂಡೂಲ್ಕರ್ ಅವರ ದಾಖಲೆಯನ್ನು ಮುರಿದಿದ್ದ ಬಿಹಾರದ ಯುವ ಆಟಗಾರ ವೈಭವ್ ಸೂರ್ಯವಂಶಿ ತಮ್ಮ ಚೊಚ್ಚಲ ಪಂದ್ಯದಲ್ಲಿ ಕೇವಲ 14 ರನ್ ಗಳಿಸಿ ಔಟಾಗಿದ್ದರು.
ಆದರೆ ಅವರು ಆಡಿದ ಬಿಗ್ ಶಾಟ್‌ಗಳು ಕ್ರಿಕೆಟ್ ವಲಯದಲ್ಲಿ ಭಾರಿ ಪ್ರಶಂಸೆಗೆ ಪಾತ್ರವಾಗಿವೆ. ಸತತ ವೈಫಲ್ಯ ಅನುಭವಿಸುತ್ತಿದ್ದ ಸಂಜು ಸ್ಯಾಮ್ಸನ್ ಬದಲಿಗೆ ವೈಭವ್‌ಗೆ ಅವಕಾಶ ನೀಡಲಾಗಿದೆ. ಆದ್ದರಿಂದ ಕೇವಲ ಒಂದು ಪಂದ್ಯದ ಪ್ರದರ್ಶನದ ಆಧಾರದ ಮೇಲೆ ಅವರನ್ನು ತಂಡದಿಂದ ಕೈಬಿಡುವುದು ಸೂಕ್ತವಲ್ಲ ಎಂಬ ಅಭಿಪ್ರಾಯ ಕೇಳಿಬರುತ್ತಿದೆ.
ಇಶಾನ್ ಕಿಶನ್ ಬದಲಿಗೆ ಸಂಜು ತರಲು ಚಿಂತನೆ
ಮತ್ತೊಂದೆಡೆ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್ ಕೂಡ ಸ್ಥಿರ ಪ್ರದರ್ಶನ ನೀಡಲು ವಿಫಲರಾಗುತ್ತಿದ್ದಾರೆ. ಕಳೆದ ಪಂದ್ಯದಲ್ಲಿ 49 ರನ್ ಗಳಿಸಿದರೂ ಸಹ ಅವರ ಬ್ಯಾಟಿಂಗ್ ವೇಗ ಅತ್ಯಂತ ನಿಧಾನಗತಿಯಲ್ಲಿತ್ತು. ಹೀಗಾಗಿ ಇಶಾನ್ ಕಿಶನ್ ಅವರನ್ನು ಪ್ಲೇಯಿಂಗ್ 11ನಿಂದ ಹೊರಗಿಟ್ಟು, ಸಂಜು ಸ್ಯಾಮ್ಸನ್ ಅವರನ್ನು ಮೂರನೇ ಕ್ರಮಾಂಕದಲ್ಲಿ ಆಡಿಸುವ ಸಾಧ್ಯತೆಗಳ ಬಗ್ಗೆಯೂ ಚರ್ಚೆಗಳು ನಡೆಯುತ್ತಿವೆ.
ರವಿ ಬಿಷ್ಣೋಯ್ ಔಟ್? ಪ್ರಿನ್ಸ್ ಯಾದವ್‌ಗೆ ಚಾನ್ಸ್..
ಕಳೆದ ಪಂದ್ಯದಲ್ಲಿ ಭಾರತದ ಸೋಲಿಗೆ ಪ್ರಮುಖ ಕಾರಣವಾಗಿದ್ದು ದುಬಾರಿ ಬೌಲಿಂಗ್. ಅದರಲ್ಲೂ ಸ್ಪಿನ್ನರ್ ರವಿ ಬಿಷ್ಣೋಯ್ ಪ್ರಮುಖ ಓವರ್‌ಗಳಲ್ಲಿ ದುಬಾರಿಯಾಗಿ ಪರಿಣಮಿಸಿದ್ದು ತಂಡಕ್ಕೆ ಮುಳುವಾಯಿತು. ಇಂಗ್ಲೆಂಡ್‌ನ ಪಿಚ್‌ಗಳು ವೇಗದ ಬೌಲಿಂಗ್‌ಗೆ ಹೆಚ್ಚಿನ ನೆರವು ನೀಡುವುದರಿಂದ ಮೂರು ಜನ ಸ್ಪಿನ್ನರ್‌ಗಳೊಂದಿಗೆ ಕಣಕ್ಕಿಳಿಯುವ ಭಾರತದ ಪ್ರಯೋಗ ವಿಫಲವಾಗಿದೆ.
ಆದ್ದರಿಂದ ಮೂರನೇ ಪಂದ್ಯದಲ್ಲಿ ರವಿ ಬಿಷ್ಣೋಯ್ ಅವರನ್ನು ತಂಡದಿಂದ ಹೊರಗಿಟ್ಟು, ಅವರ ಜಾಗದಲ್ಲಿ ಯುವ ವೇಗಿ ಪ್ರಿನ್ಸ್ ಯಾದವ್ ಅವರಿಗೆ ತಂಡದಲ್ಲಿ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ. ತಂಡದಲ್ಲಿ ಅಕ್ಷರ್ ಪಟೇಲ್ ಮತ್ತು ವರುಣ್ ಚಕ್ರವರ್ತಿ ಸ್ಪಿನ್ ವಿಭಾಗವನ್ನು ಮುನ್ನಡೆಸಲಿದ್ದಾರೆ.
ಭಾರತದ ಸಂಭಾವ್ಯ ಪ್ಲೇಯಿಂಗ್ 11
ಶ್ರೇಯಸ್ ಅಯ್ಯರ್ (ನಾಯಕ), ವೈಭವ್ ಸೂರ್ಯವಂಶಿ, ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್/ಇಶಾನ್ ಕಿಶನ್ (ವಿಕೆಟ್ ಕೀಪರ್), ತಿಲಕ್ ವರ್ಮಾ, ಶಿವಂ ದುಬೆ, ಅಕ್ಷರ್ ಪಟೇಲ್, ಹರ್ಷಿತ್ ರಾಣಾ, ಪ್ರಿನ್ಸ್ ಯಾದವ್, ಅರ್ಷದೀಪ್ ಸಿಂಗ್, ವರುಣ್ ಚಕ್ರವರ್ತಿ.
ಒಟ್ಟಿನಲ್ಲಿ ಹೇಳುವುದಾದರೆ ಸರಣಿಯಲ್ಲಿ ಕಮಬ್ಯಾಕ್ ಮಾಡಲು ಭಾರತ ತಂಡಕ್ಕೆ ಈ ಪಂದ್ಯ ಅತ್ಯಂತ ನಿರ್ಣಾಯಕವಾಗಿದೆ. ನಾಯಕ ಶ್ರೇಯಸ್ ಅಯ್ಯರ್ ತಮ್ಮ ತಂತ್ರಗಾರಿಕೆಯಲ್ಲಿ ಎಷ್ಟರ ಮಟ್ಟಿಗೆ ಯಶಸ್ವಿಯಾಗಲಿದ್ದಾರೆ ಎಂಬುದನ್ನು ಕಾದುನೋಡಬೇಕಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications