Jasprit Bumrah: ಏಷ್ಯಾ ಕಪ್‌ನಲ್ಲಿ ಬುಮ್ರಾ ಆಡ್ತಾರಾ? ಇಲ್ಲಿದೆ ಬಿಗ್ ಅಪ್‌ಡೇಟ್
ಮಂಗಳವಾರ ಮುಂಬೈನಲ್ಲಿ ಬಿಸಿಸಿಐ ಆಯ್ಕೆ ಸಮಿತಿಯ ಸಭೆ ನಡೆಯುವ ಸಾಧ್ಯತೆ ಇದೆ. ಈ ವೇಳೆ ಟೀಮ್ ಇಂಡಿಯಾವನ್ನು ಏಷ್ಯಾ ಕಪ್ ಟಿ20 ಟೂರ್ನಿಗೆ ತಂಡವನ್ನು ಪ್ರಕಟಿಸುವ ಸಾಧ್ಯತೆ ಇದೆ. ಟೀಮ್ ಇಂಡಿಯಾದಲ್ಲಿ ಯಾವೆಲ್ಲಾ ಆಟಗಾರರಿಗೆ ಅವಕಾಶ ಸಿಗುತ್ತದೆ ಎಂಬ ಬಗ್ಗೆ ಕುತೂಹಲ ಮನೆ ಮಾಡಿದೆ. ಭಾರತ ತಂಡದ ಟಿ20 ತಂಡದ ನಾಯಕ ಸೂರ್ಯಕುಮಾರ್ ಯಾದವ್ ಫಿಟ್ ಆಗಿದ್ದಾರೆ ಎಂದು ತಿಳಿದು ಬಂದಿದ್ದು, ಇವರೇ ತಂಡವನ್ನು ಮಹತ್ವದ ಟೂರ್ನಿಯಲ್ಲಿ ಮುನ್ನಡೆಸಲಿದ್ದಾರೆ.
ಟೀಮ್ ಇಂಡಿಯಾದಲ್ಲಿ ಯಾರ್ಕರ್ ಸ್ಪೇಷಲಿಸ್ಟ್ ಜಸ್ಪ್ರೀತ್ ಬುಮ್ರಾ ಅವರಿಗೆ ಅವಕಾಶ ಸಿಗುತ್ತದಾ ಎಂಬ ಪ್ರಶ್ನೆಗಳು ಇದ್ದವು. ಈ ಬಗ್ಗೆ ಬಿಸಿಸಿಐಗೆ ಜಸ್ಪ್ರೀತ್ ಬುಮ್ರಾ ತಮ್ಮ ನಿರ್ಧಾರವನ್ನು ಬಿಸಿಸಿಐಗೆ ತಿಳಿಸಿದ್ದಾರೆ. ಹಾಗಿದ್ದರೆ ಟೀಮ್ ಇಂಡಿಯಾ ಪರ ಬುಮ್ರಾ ಏಷ್ಯಾ ಕಪ್‌ನಲ್ಲಿ ಆಡುತ್ತಾರಾ ಎಂಬ ಪ್ರಶ್ನೆಗಳು ಆರಂಭವಾಗಿವೆ. ಇದಕ್ಕೆ ಉತ್ತರ ಇಲ್ಲಿದೆ.

ಇತ್ತೀಚಿಗೆ ಟೀಮ್ ಇಂಡಿಯಾ ಇಂಗ್ಲೆಂಡ್ ಪ್ರವಾಸವನ್ನು ಬೆಳೆಸಿದ್ದಾಗ ಜಸ್ಪ್ರೀತ್ ಬುಮ್ರಾ ಕೇವಲ ಮೂರು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಅಲ್ಲದೆ ತಾವು ಈ ಪ್ರವಾಸದಲ್ಲಿ ಕೇವಲ 3 ಟೆಸ್ಟ್ ಪಂದ್ಯಗಳನ್ನು ಆಡುವುದಾಗಿ ತಿಳಿಸಿದ್ದರು. ಅದರಂತೆ ಬುಮ್ರಾ ಲೀಡ್ಸ್, ಲಾರ್ಡ್ಸ್, ಮ್ಯಾಂಚೆಸ್ಟರ್‌ನಲ್ಲಿ ಕಣಕ್ಕೆ ಇಳಿದು ಮಿಂಚಿದ್ದರು. ವರ್ಕ್ ಲೋಡ್ ಮ್ಯಾನೇಜ್ಮೆಂಟ್‌ನ್ನು ಗಮನದಲ್ಲಿಟ್ಟುಕೊಂಡು ಅವರು ಕೇವಲ ಮೂರು ಟೆಸ್ಟ್ ಪಂದ್ಯಗಳನ್ನು ಆಡಿದ್ದರು. ಅಲ್ಲದೆ ಇವರು ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಆಡುತ್ತಾರಾ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಈಗ ಈ ಎಲ್ಲ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.
ಬುಮ್ರಾ ಆಡ್ತಾರಾ?
ಜಸ್ಪ್ರೀತ್ ಬುಮ್ರಾ ಏಷ್ಯಾ ಕಪ್ ಟಿ20 ಟೂರ್ನಿಗೆ ತಾವು ಲಭ್ಯ ಇರುವದಾಗಿ ತಿಳಿಸಿದ್ದಾರೆ. ಈ ಮೂಲಕ ಎದುರಾಳಿಗಳಿಗೆ ನಡುಕ ಆರಂಭವಾಗಿದೆ. ಅಂದಹಾಗೆ ಏಷ್ಯಾ ಕಪ್ ಟಿ20 ಟೂರ್ನಿ ಮುಗಿದ ಬೆನ್ನೆಲೆ ವಿಂಡೀಸ್ ತಂಡ ಭಾರತದ ಪ್ರವಾಸವನ್ನು ಬೆಳೆಸಲಿದೆ. ಈ ವೇಳೆ ವಿಂಡೀಸ್ 2 ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಬುಮ್ರಾ ಈ ಟೆಸ್ಟ್ ಸರಣಿಯಲ್ಲಿ ಆಡುವುದು ಬಹಳ ಮುಖ್ಯವಾಗಿತ್ತು. ಹೀಗಾಗಿ ಬುಮ್ರಾ ಏಷ್ಯಾ ಕಪ್‌ನಲ್ಲಿ ಆಡುತ್ತಾರೋ ಇಲ್ಲವೋ ಎಂಬ ಬಗ್ಗೆ ಪ್ರಶ್ನೆಗಳು ಎದ್ದಿದ್ದವು. ಈಗ ಈ ಪ್ರಶ್ನೆಗಳಿಗೆ ಉತ್ತರ ಸಿಕ್ಕಿದೆ.

ಸೆಪ್ಟಂಬರ್ 9 ರಿಂದ ಯುಎಇನಲ್ಲಿ ಭಾರತದ ಆತಿಥ್ಯದಲ್ಲಿ ಏಷ್ಯಾ ಕಪ್ ಟಿ20 ಟೂರ್ನಿ ನಡೆಯಲಿದೆ. ಈ ಟೂರ್ನಿಯಲ್ಲಿ ಒಟ್ಟು 8 ತಂಡಗಳು ಭಾಗವಹಿಸಲಿವೆ. ಈ 8 ತಂಡಗಳನ್ನು 2 ಗುಂಪುಗಳಲ್ಲಿ ವಿಂಗಡಿಸಲಾಗಿದೆ. ಭಾರತ ಹಾಗೂ ಪಾಕ್ ತಂಡಗಳು ಒಂದೇ ಗುಂಪಿನಲ್ಲಿ ಸ್ಥಾನ ಪಡೆದಿವೆ. ಇನ್ನು ಗುಂಪು ಹಂತದಲ್ಲಿ ಅಗ್ರ 2 ತಂಡಗಳು ಸೂಪರ್ 4 ಹಂತಕ್ಕೆ ಅರ್ಹತೆ ಪಡೆಯಲಿವೆ. ಈ ಹಂತದಲ್ಲೂ ಅಗ್ರ 2 ಸ್ಥಾನ ಪಡೆದಿರುವ ತಂಡಗಳು ಫೈನಲ್‌ಗೆ ಪ್ರವೇಶ ಪಡೆಯಲಿವೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications