Suryakumar Yadav: ಇತಿಹಾಸ ನಿರ್ಮಿಸುವ ಕನಸಿನಲ್ಲಿ ಸೂರ್ಯ
ಬಹು ನಿರೀಕ್ಷಿತ ಏಷ್ಯಾ ಕಪ್ ಟಿ20 ಟೂರ್ನಿಗೆ ಸಿದ್ಧತೆಗಳು ಆರಂಭವಾಗಿವೆ. ಈಗಾಗಲೇ ಈ ಮೆಗಾ ಟೂರ್ನಿಗೆ ಟೀಮ್ ಇಂಡಿಯಾವನ್ನು ಪ್ರಕಟಿಸಲಾಗಿದೆ. ಭಾರತ ತಂಡವನ್ನು ಮಹತ್ವದ ಟೂರ್ನಿಯಲ್ಲಿ ಮಿಸ್ಟರ್ 360 ಖ್ಯಾತಿಯ ಸೂರ್ಯಕುಮಾರ್ ಯಾದವ್ ಮುನ್ನಡೆಸಲಿದ್ದಾರೆ. 2026ರಲ್ಲಿ ಟಿ20 ವಿಶ್ವಕಪ್ ನಡೆಯಲಿದೆ. ಹೀಗಾಗಿ ಈ ಬಾರಿ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯನ್ನು ಟಿ20 ಸ್ವರೂಪದಲ್ಲಿ ಆಡಿಸಲಾಗುತ್ತಿದೆ. ಈ ವರೆಗೆ ಭಾರತದ ಪರ ಒಬ್ಬ ನಾಯಕ ಮಾತ್ರ ಏಷ್ಯಾ ಕಪ್ ಟಿ20 ಗೆದ್ದ ಸಾಧನೆ ಮಾಡಿದ್ದಾರೆ.
ಸೂರ್ಯಕುಮಾರ್ ಯಾದವ್ ಸಹ ವಿಶೇಷ ಪಟ್ಟಿಗೆ ಸ್ಥಾನ ಪಡೆಯಲು ಪ್ಲ್ಯಾನ್ ಮಾಡಿಕೊಂಡಿದ್ದಾರೆ. ಇದಕ್ಕೂ ಮೊದಲು 2016ರಲ್ಲಿ ನಡೆದಿದ್ದ ಏಷ್ಯಾ ಕಪ್ ಟೂರ್ನಿಯಲ್ಲಿ ಮಹೇಂದ್ರ ಸಿಂಗ್ ಧೋನಿ ಪ್ರಶಸ್ತಿ ಎತ್ತಿದ್ದರು. ಈ ಟೂರ್ನಿಯ ಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ, ಬಾಂಗ್ಲಾದೇಶ ತಂಡವನ್ನು ಮಣಿಸಿತ್ತು. ಆ ದಿನ ನಡೆದಿದ್ದ ಫೈನಲ್ ಪಂದ್ಯದಲ್ಲಿ ಬಾಂಗ್ಲಾ ಮೊದಲು ಬ್ಯಾಟ್ ಮಾಡಿ 120 ರನ್‌ಗಳಿಸಿತು. ಇದಕ್ಕುತ್ತರವಾಗಿ ಬ್ಯಾಟ್ ಮಾಡಿದ ಭಾರತ 8 ವಿಕೆಟ್‌ಗಳಿಂದ ಪಂದ್ಯ ಗೆದ್ದಿತು. ಆ ಪಂದ್ಯದಲ್ಲಿ ಶಿಖರ್ ಧವನ್ 60 ರನ್ ಬಾರಿಸಿದ್ದರೆ, ವಿರಾಟ್ ಕೊಹ್ಲಿ 41 ರನ್ ಸಿಡಿಸಿದ್ದರು.

ಆ ಬಳಿಕ 2022ರಲ್ಲಿ ಏಷ್ಯಾ ಕಪ್‌ನ್ನು ಟಿ20 ಸ್ವರೂಪದಲ್ಲಿ ಆಡಿಸಲಾಗಿತ್ತು. ಆಗ ರೋಹಿತ್ ಶರ್ಮಾ ತಂಡವನ್ನು ಮುನ್ನಡೆಸಿದ್ದರು. ಆದರೆ ಈ ಟೂರ್ನಿಯ ಫೈನಲ್‌ಗೆ ಅರ್ಹತೆ ಪಡೆಯಲು ಭಾರತ ವಿಫಲವಾಗಿತ್ತು. ಈ ಟೂರ್ನಿಯಲ್ಲಿ ಶ್ರೀಲಂಕಾ ತಂಡ ಪಾಕ್ ಮಣಿಸಿ ಏಷ್ಯಾ ಕಪ್‌ಗೆ ಮುತ್ತಿಟ್ಟಿತ್ತು.
ಇತಿಹಾಸದ ಕನಸು
ಟೀಮ್ ಇಂಡಿಯಾ ಪರ T20 ಏಷ್ಯಾ ಕಪ್ ಎತ್ತಿರುವ ಸಾಧನೆ ಮಹೇಂದ್ರ ಸಿಂಗ್ ಧೋನಿ ಅವರಿಗೆ ಮಾತ್ರ ಸಲ್ಲುತ್ತದೆ. ಈಗ ಸೂರ್ಯ ಅವರಿಗೆ ಈ ಕಪ್ ಗೆಲ್ಲುವ ಸುವರ್ಣ ಅವಕಾಶ ಇದೆ. ಸೆ.29ರಂದು ನಡೆಯಲಿರುವ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಭಾರತ ತಂಡ ಜಯ ಸಾಧಿಸಿದರೆ, ಸೂರ್ಯ ಇತಿಹಾಸ ನಿರ್ಮಿಸುವ ಕನಸಿನಲ್ಲಿದೆ. ಏಕದಿನ ಏಷ್ಯಾ ಕಪ್ ಟೂರ್ನಿಯಲ್ಲಿ ರೋಹಿತ್ ಶರ್ಮಾ 2018, 2023ರಲ್ಲಿ ಗೆದ್ದು ಬೀಗಿದ್ದರು.
ಟೀಮ್ ಇಂಡಿಯಾ ಏಷ್ಯಾ ಕಪ್ ಟಿ20 ಟೂರ್ನಿಯಲ್ಲಿ ಸೆ.10 ರಂದು ತನ್ನ ಅಭಿಯಾನವನ್ನು ಆರಂಭಿಸಲಿದೆ. ಸೆ.14 ರಂದು ಭಾರತ ಹಾಗೂ ಪಾಕಿಸ್ತಾನ ನಡುವಣ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಈ ಬಾರಿ ಟಿ20 ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡದ ಉಪನಾಯಕರಾಗಿ ಶುಭಮನ್ ಗಿಲ್ ಆಯ್ಕೆ ಆಗಿದ್ದಾರೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications