ನವೆಂಬರ್ ಅಂತ್ಯದಲ್ಲಿ ಭಾರತ ಹಾಗೂ ಆಸ್ಟ್ರೇಲಿಯಾ ನಡುವಣ ಬಾರ್ಡರ್-ಗವಾಸ್ಕರ್ ಟ್ರೋಫಿ ನಡೆಯಲಿದೆ. ಈ ಸರಣಿಯಲ್ಲಿ ಉಭಯ ತಂಡಗಳು ತಲಾ ಐದು ಪಂದ್ಯಗಳನ್ನು ಆಡಲಿವೆ. ಈ ಸರಣಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಬಹಳ ಮಹತ್ವದಾಗಿದೆ. ಈಗಾಗಲೇ ತವರಿನಲ್ಲಿ ನಡೆದಿರುವ ನ್ಯೂಜಿಲೆಂಡ್ ವಿರುದ್ಧದ ಸರಣಿಯಲ್ಲಿ ಸೋಲು ಕಂಡಿರುವ ರೋಹಿತ್ ಪಡೆ ಒತ್ತಡಕ್ಕೆ ಸಿಲುಕಿದೆ. ಈಗ ಆಸೀಸ್ ವಿರುದ್ಧ ಗೆಲ್ಲಲೇ ಬೇಕಾದ ಅನಿವಾರ್ಯತೆಯಲ್ಲಿದೆ.
ಆಸ್ಟ್ರೇಲಿಯಾ ಪ್ರವಾಸದಲ್ಲಿ ಟೀಮ್ ಇಂಡಿಯಾ ಗೆಲುವು ಸಾಧಿಸುವುದು ಸುಲಭವಲ್ಲ. ಆದರೆ ಈ ಹಿಂದೆ ಈಗಾಗಲೇ ಎರಡು ಬಾರಿ ಈ ಸಾಧನೆ ಮಾಡಿರುವ ಹುಮ್ಮಸ್ಸು ಟೀಮ್ ಇಂಡಿಯದ್ದಾಗಿದೆ. ಭಾರತ ಹ್ಯಾಟ್ರಿಕ್ ಗೆಲುವಿನ ಕನಸು ಕಾಣುತ್ತಿದೆ.

ಈ ಪ್ರವಾಸಕ್ಕಾಗಿ ಟೀಮ್ ಇಂಡಿಯಾ ಆಟಗಾರರು ಎರಡು ಬ್ಯಾಚ್‌ಗಳಲ್ಲಿ ಆಸ್ಟ್ರೇಲಿಯಾ ಪ್ರವಾಸವನ್ನು ಬೆಳೆಸಿದ್ದಾರೆ. ಈ ಸರಣಿಯಲ್ಲಿ ಆಡಲು ಟೀಮ್ ಇಂಡಿಯಾದ ಮೊದಲ ಬ್ಯಾಚ್ ಭಾನುವಾರ (ನ.10)ರಂದು ಮುಂಬೈ ವಿಮಾನ ನಿಲ್ದಾಣದಿಂದ ಆಸ್ಟ್ರೇಲಿಯಾಕ್ಕೆ ತೆರಳಲಿದೆ.
ಆಕಾಶದೀಪ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್ ಮೊದಲ ಬ್ಯಾಚ್‌ನಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ. ಸಿರಾಜ್ ವಿಮಾನ ನಿಲ್ದಾಣದಲ್ಲಿ ಕೆಲವರೋಂದಿಗೆ ಕೈ ಕುಲುಕಿದ ವಿಡಿಯೋಗಳು ಕಂಡುಬಂದಿದೆ. ಜೈಸ್ವಾಲ್ ಕೂಡ ಅಭಿಮಾನಿಗಳಿಗೆ ಹಸ್ತಾಕ್ಷರ ನೀಡುತ್ತಿರುವುದು ಕಂಡುಬಂತು.

ಈ ಆಟಗಾರರೊಂದಿಗೆ ಭಾರತ ತಂಡದ ಸಹಾಯಕ ಕೋಚ್ ಅಭಿಷೇಕ್ ನಾಯರ್ ಕೂಡ ಇದ್ದರು. ಎರಡನೇ ಬ್ಯಾಚ್‌ನಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಮತ್ತು ಸೂಪರ್‌ಸ್ಟಾರ್ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಮುಂತಾದವರು ಆಸ್ಟ್ರೇಲಿಯಾಕ್ಕೆ ತೆರಳಲಿದ್ದಾರೆ.
ಆಕಾಶದೀಪ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್ ಸೇರಿದಂತೆ ಹಲವು ಆಟಗಾರರು ಮೊದಲ ಬ್ಯಾಚ್‌ನಲ್ಲಿ ಆಸ್ಟ್ರೇಲಿಯಾಕ್ಕೆ ತೆರಳಿದ್ದಾರೆ. ಸಿರಾಜ್ ವಿಮಾನ ಏರುವ ಮುನ್ನ ಹಲವರೊಂದಿಗೆ ಕೈ ಕುಲುಕುವದನ್ನು ಕಾಣಬಹುದಾಗಿದೆ. ಈ ಬ್ಯಾಚ್ ಜೊತೆ ಟೀಮ್ ಇಂಡಿಯಾದ ಬ್ಯಾಟಿಂಗ್ ಕೋಚ್ ಅಭಿಷೇಕ್ ನಾಯರ್ ಪ್ರಯಾಣ ಬೆಳೆಸಿದರು. ಎರಡನೇ ಬ್ಯಾಚ್‌ನಲ್ಲಿ ಮುಖ್ಯ ಕೋಚ್ ಗೌತಮ್ ಗಂಭೀರ್ ಹಾಗೂ ಹಲವು ಸ್ಟಾರ್ ಆಟಗಾರರು ಪ್ರಯಾಣ ಬೆಳೆಸಲಿದ್ದಾರೆ.
ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿ ಟೀಮ್ ಇಂಡಿಯಾ ಪಾಲಿಗೆ ಮಹತ್ವದಾಗಿದೆ. ಈ ಸರಣಿಯ ಐದು ಪಂದ್ಯಗಳಲ್ಲಿ ಟೀಮ್ ಇಂಡಿಯಾ ನಾಲ್ಕರಲ್ಲಿ ಜಯ ಸಾಧಿಸಬೇಕಿದೆ. ಅಂದಾಗ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಹಾದಿ ಸುಗಮವಾಗುತ್ತದೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಭಾರತ 58.330 ಗೆಲುವಿನ ಸರಾಸರಿಯೊಂದಿಗೆ ಎರಡನೇ ಸ್ಥಾನದಲ್ಲಿದೆ. ಬಾರ್ಡರ್-ಗವಾಸ್ಕರ್ ಟ್ರೋಫಿಗೆ ಭಾರತ ತಂಡವನ್ನು ಈಗಾಗಲೇ ಪ್ರಕಟಿಸಲಾಗಿದೆ, ಆದರೆ ನಾಯಕ ರೋಹಿತ್ ಶರ್ಮಾ ಮೊದಲ ಟೆಸ್ಟ್ ಪಂದ್ಯದಲ್ಲಿ ಆಡುವ ಬಗ್ಗೆ ಅನುಮಾನವಿದೆ. ಮತ್ತೊಂದೆಡೆ, ಆಸ್ಟ್ರೇಲಿಯಾ ಇದುವರೆಗೆ ಮೊದಲ ಟೆಸ್ಟ್ ಪಂದ್ಯಕ್ಕೆ ಮಾತ್ರ ತಂಡವನ್ನು ಪ್ರಕಟಿಸಿದೆ.