For Quick Alerts
ALLOW NOTIFICATIONS  
For Daily Alerts
 

ಏಕದಿನ ಕ್ರಿಕೆಟ್‌: ಸ್ಮೃತಿ ಮಂಧಾನ ಹೊಸ ದಾಖಲೆ; ಒಂದೇ ವರ್ಷದಲ್ಲಿ 1362 ರನ್!

ಭಾರತೀಯ ಮಹಿಳಾ ಕ್ರಿಕೆಟ್‌ ಇತಿಹಾಸದಲ್ಲಿ ಪ್ರಸಕ್ತ ವರ್ಷವನ್ನು ಸುವರ್ಣ ಅಕ್ಷರದಲ್ಲಿ ಬರೆದಿಡುವಂತಹ ವರ್ಷವಾಗಿದೆ. ಈ ವರ್ಷದಲ್ಲಿ ಟೀಮ್ ಇಂಡಿಯಾ ಚೊಚ್ಚಲ ಬಾರಿಗೆ ಏಕದಿನ ವಿಶ್ವಕಪ್ ಗೆದ್ದು ಇತಿಹಾಸ ಸೃಷ್ಟಿಸಿದೆ. ಈ ವರ್ಷದಲ್ಲಿ ಟೀಮ್ ಇಂಡಿಯಾದ ಆಟಗಾರ್ತಿಯರು ಅಮೋಘ ಪ್ರದರ್ಶನ ನೀಡಿದ್ದಾರೆ. ಈ ವರ್ಷ ಏಕದಿನ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ಭಾರತೀಯ ಆಟಗಾರ್ತಿಯರ ಬಗ್ಗೆ ಮಾಹಿತಿ ಇಲ್ಲಿದೆ.

ಈ ವರ್ಷ ಭಾರತದ ಪರ ಏಕದಿನ ಕ್ರಿಕೆಟ್‌ನಲ್ಲಿ ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿ ರನ್‌ಗಳ ಶಿಖರ ಏರಿದ್ದು ಸ್ಮೃತಿ ಮಂಧಾನ. ಇವರು ಪ್ರಸಕ್ತ ವರ್ಷ ಅಮೋಘ ಫಾರ್ಮ್‌ ಹೊಂದಿದ್ದರು. ಸ್ಮೃತಿ ಆಡಿದ 23 ಪಂದ್ಯಗಳಲ್ಲಿ 61ರ ಸರಾಸರಿಯಲ್ಲಿ 1362 ರನ್‌ ಕಲೆ ಹಾಕಿದ್ದಾರೆ. ಈ ವೇಳೆ 5 ಶತಕ ಹಾಗೂ 5 ಅರ್ಧಶತಕಗಳನ್ನು ಸಿಡಿಸಿದ್ದಾರೆ. ಸ್ಮೃತಿ ಭಾರತ ಅಷ್ಟೇ ಅಲ್ಲ ವಿಶ್ವದಲ್ಲೇ ಅತಿ ಹೆಚ್ಚು ರನ್‌ ಕಲೆ ಹಾಕಿದ ಆಟಗಾರ್ತಿಯರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

India s Historic Year Top Run-Scorers in Women s ODIs as Smriti Mandhana Leads the Charts

ಭಾರತದ ಪರ ಏಕದಿನ ಫಾರ್ಮೆಟ್‌ನಲ್ಲಿ ಅತಿ ಹೆಚ್ಚು ರನ್‌ಗಳನ್ನು ಪ್ರತಿಕಾ ರಾವಲ್‌ ಸಹ ಕಲೆ ಹಾಕಿದ್ದಾರೆ. ಇವರು ಭಾರತದಲ್ಲಿ ನಡೆದಿದ್ದ ವಿಶ್ವಕಪ್‌ನಲ್ಲಿ ರನ್‌ ಕಲೆ ಹಾಕಿ ಭರವಸೆ ಮೂಡಿಸಿದ್ದಾರೆ. ಇವರು ಈ ವರ್ಷ ಆಡಿದ 21 ಏಕದಿನ ಪಂದ್ಯಗಳಲ್ಲಿ 51ರ ಸರಾಸರಿಯಲ್ಲಿ 976 ರನ್‌ ಕಲೆ ಹಾಕಿದ್ದಾರೆ. ಈ ವೇಳೆ 2 ಶತಕ ಹಾಗೂ 6 ಅರ್ಧಶತಕಗಳು ಸೇರಿವೆ. ಅಲ್ಲದೆ ಇವರು ವಿಶ್ವ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿ ನಿಲ್ಲುತ್ತಾರೆ. ವಿಶ್ವ ಕ್ರಿಕೆಟ್‌ನಲ್ಲಿ ಅತಿ ಹೆಚ್ಚು ರನ್ ಕಲೆ ಹಾಕಿದ ಬ್ಯಾಟರ್‌ಗಳ ಪಟ್ಟಿಯಲ್ಲಿ ದಕ್ಷಿಣ ಆಫ್ರಿಕಾದ ಲಾರಾ ವೋಲ್ವಾರ್ಡ್ (1074 ರನ್) ಅವರಿಗೆ ಎರಡನೇ ಸ್ಥಾನ.

ಜೆಮಿಮಾ ಅಬ್ಬರ

ಏಕದಿನ ವಿಶ್ವಕಪ್‌ನ ಸೆಮಿಫೈನಲ್‌ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ಜೆಮಿಮಾ ರೋಡ್ರಿಗಸ್‌ ಅವರಿಗೂ ಈ ಪಟ್ಟಿಯಲ್ಲಿ ಸ್ಥಾನ ನೀಡಲಾಗಿದೆ. ಇವರು ಆಡಿದ 20 ಪಂದ್ಯಗಳಲ್ಲಿ 51ರ ಸರಾಸರಿಯಲ್ಲಿ 771 ರನ್‌ ಕಲೆ ಹಾಕಿದ್ದಾರೆ. ಇದರಲ್ಲಿ ಮೂರು ಶತಕಗಳು ಹಾಗೂ 2 ಅರ್ಧಶತಕ ಸೇರಿವೆ. ಈ ಪಟ್ಟಿಯಲ್ಲಿ ಐದನೇ ಸ್ಥಾನದಲ್ಲಿ ಭರವಸೆಯ ಮಧ್ಯಮ ಕ್ರಮಾಂಕದ ಆಟಗಾರ್ತಿ ಹರ್ಲಿನ್ ಡಿಯೋಲ್‌ ಅವರಿಗೆ ಸ್ಥಾನ. ಇವರು ಆಡಿದ 21 ಪಂದ್ಯಗಳಲ್ಲಿ 34ರ ಸರಾಸರಿಯಲ್ಲಿ 613 ರನ್‌ ಸಿಡಿಸಿದ್ದಾರೆ. ಇದರಲ್ಲಿ 2 ಅರ್ಧಶತಕಗಳು ಸೇರಿವೆ.

Story first published: Friday, December 19, 2025, 10:09 [IST]
Other articles published on Dec 19, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+