Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block

ಭಾರತ vs ನ್ಯೂಜಿಲ್ಯಾಂಡ್: 2ನೇ ಟಿ20 ಪಂದ್ಯಕ್ಕೆ ಸಂಭಾವ್ಯ ಭಾರತ ತಂಡ

India’s predicted XI for 2nd T20 – Shubman Gill could make T20I debut

ಆಕ್ಲೆಂಡ್, ಫೆಬ್ರವರಿ 7: ನ್ಯೂಜಿಲ್ಯಾಂಡ್ ವಿರುದ್ಧ ಮೂರು ಪಂದ್ಯಗಳ ಟಿ20 ಸರಣಿಯ ಆರಂಭಿಕ ಪಂದ್ಯದಲ್ಲೇ ಮುಗ್ಗರಿಸಿರುವ ಭಾರತ ದ್ವಿತೀಯ ಪಂದ್ಯದಲ್ಲಿ ಮುಯ್ಯಿ ತೀರಿಸಿಕೊಳ್ಳುವುದರಲ್ಲಿದೆ. ಆಕ್ಲೆಂಡ್‌ನ ಈಡನ್ ಪಾರ್ಕ್‌ನಲ್ಲಿ ಫೆಬ್ರವರಿ 8ರಂದು ಇತ್ತಂಡಗಳು 2ನೇ ಪಂದ್ಯದ ಸವಾಲು ಸ್ವೀಕರಿಸಲಿವೆ.

ಮೊದಲ ಪಂದ್ಯದಲ್ಲಿ ಭಾರತದ ಸೋಲಿಗೆ ತಂಡದ ಬ್ಯಾಟಿಂಗ್‌ ವಿಭಾಗದ ನಿರ್ಲಕ್ಷ್ಯ ಕಾರಣವಾಗಿತ್ತು. ಆತಿಥೇಯ ನ್ಯೂಜಿಲ್ಯಾಂಡ್ ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲಿ ಬಲ ಪ್ರದರ್ಶಿಸಿದ್ದು ಪ್ರವಾಸಿ ಭಾರತವನ್ನು ಕಂಗೆಡಿಸಿತ್ತು. ಹೀಗಾಗಿ ಭಾರತ 80 ರನ್ ಸೋಲನುಭವಿಸಿತ್ತು. ಆದರೆ ದ್ವಿತೀಯ ಪಂದ್ಯದಲ್ಲಿ ಭಾರತ ತಿರುಗಿಬೀಳುವ ನಿರೀಕ್ಷೆಯಿದೆ.

ದ್ವಿತೀಯ ಟಿ20 ಪಂದ್ಯದಲ್ಲಿ ಯುವ ಬ್ಯಾಟ್ಸ್ಮನ್ ಶುಭ್‌ಮಾನ್‌ ಗಿಲ್ ಅವರು ಪಾದಾರ್ಪಣೆ ಮಾಡುವ ಸಂಭವವಿದೆ. ಜೊತೆಗೆ ಹಾರ್ದಿಕ್ ಪಾಂಡ್ಯ-ಕೃನಾಲ್ ಪಾಂಡ್ಯ ಸಹೋದರರ ಜೋಡಿ ಎರಡನೇ ಅಂತಾರಾಷ್ಟ್ರೀಯ ಪಂದ್ಯ ಆಡಿ ಗಮನ ಸೆಳೆಯಲು ಸಜ್ಜಾಗಿದೆ.

ಆಕ್ಲೆಂಡ್ ಪಂದ್ಯಕ್ಕೆ ಸಂಭಾವ್ಯ ಭಾರತ ತಂಡ: ರೋಹಿತ್ ಶರ್ಮಾ, ಶಿಖರ್ ಧವನ್, ಶುಭ್‌ಮಾನ್ ಗಿಲ್, ರಿಷಬ್ ಪಂತ್, ಎಂಎಸ್ ಧೋನಿ, ದಿನೇಶ್ ಕಾರ್ತಿಕ್, ಹಾರ್ದಿಕ್ ಪಾಂಡ್ಯ, ಕೃನಾಲ್ ಪಾಂಡ್ಯ, ಭುವನೇಶ್ವರ ಕುಮಾರ್, ಯುಜುವೇಂದ್ರ ಚಾಹಲ್, ಖಲೀಲ್ ಅಹ್ಮದ್.

Story first published: Thursday, February 7, 2019, 13:26 [IST]
Other articles published on Feb 7, 2019
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+