ಇಂಗ್ಲೆಂಡ್ ವಿರುದ್ಧದ ಟಿ20ಐ ಸರಣಿಗೆ ಟೀಮ್ ಇಂಡಿಯಾ ಪ್ರಕಟ!

ನವದೆಹಲಿ: ಭಾರತಕ್ಕೆ ಪ್ರವಾಸ ಬಂದಿರುವ ಇಂಗ್ಲೆಂಡ್ ಕ್ರಿಕೆಟ್ ತಂಡ ಆತಿಥೇಯರ ವಿರುದ್ಧ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಆಡುತ್ತಿದೆ. ಟೆಸ್ಟ್ ಸರಣಿಯ ಆರಂಭಿಕ ಎರಡು ಪಂದ್ಯಗಳು ಮುಗಿದಿದ್ದು, ಸರಣಿ 1-1ರಿಂದ ಸಮಬಲಗೊಂಡಿದೆ. ಟೆಸ್ಟ್ ಬಳಿಕ 5 ಪಂದ್ಯಗಳ ಟಿ20ಐ ಸರಣಿ ಆರಂಭಗೊಳ್ಳಲಿವೆ. ಮಾರ್ಚ್ 12ರಿಂದ ಟಿ20ಐ ಸರಣಿ ಆರಂಭಗೊಳ್ಳಲಿದ್ದು, ಎಲ್ಲಾ ಪಂದ್ಯಗಳು ಅಹ್ಮದಾಬಾದ್‌ನ ಸರ್ದಾರ್ ಪಟೇಲ್ ಸ್ಟೇಡಿಯಂನಲ್ಲಿ ನಡೆಯಲಿವೆ.
ಇಂಗ್ಲೆಂಡ್-ಭಾರತ ಪ್ರವಾಸ ಸರಣಿ ಒಟ್ಟಿಗೆ 3 ಸರಣಿಗಳನ್ನು ಒಳಗೊಂಡಿವೆ. 4 ಪಂದ್ಯಗಳ ಟೆಸ್ಟ್, 5 ಪಂದ್ಯಗಳ ಟಿ20ಐ ಮತ್ತು 3 ಪಂದ್ಯಗಳ ಏಕದಿನ ಸರಣಿ ಇದರಲ್ಲಿ ಸೇರಿವೆ. ಈ ಸರಣಿಗಳಲ್ಲಿ ಟಿ20ಐ ಸರಣಿಗೆ ಸಂಬಂಧಿಸಿ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಭಾರತ ತಂಡ ಪ್ರಕಟಿಸಿದೆ.

ಯಾದವ್, ತೆವಾಟಿಯಾಗೆ ಕರೆ
ಮುಂಬೈ ಬ್ಯಾಟ್ಸ್‌ಮನ್ ಸೂರ್ಯಕುಮಾರ್ ಯಾದವ್, ಹರ್ಯಾಣ ಆಲ್ ರೌಂಡರ್ ರಾಹುಲ್ ತೆವಾಟಿಯಾ ಮತ್ತು ಬಿಹಾರ್ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್ ಇಶಾನ್ ಕಿಶನ್‌ಗೆ ಈ ಬಾರಿ ಟೀಮ್ ಇಂಡಿಯಾಕ್ಕೆ ಚೊಚ್ಚಲ ಕರೆ ಲಭಿಸಿದೆ. ಮೂವರೂ ಕೂಡ ಟಿ20ಐ ಮೂಲಕ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡುವ ನಿರೀಕ್ಷೆಯಿದೆ.

ನಾಯಕ, ಉಪನಾಯಕ
ಬಿಸಿಸಿಐ ಶನಿವಾರ (ಫೆಬ್ರವರಿ 20) ಪ್ರಕಟಿಸಿರುವ ತಂಡದಲ್ಲಿ ನಾಯಕರಾಗಿ ವಿರಾಟ್ ಕೊಹ್ಲಿ, ಉಪನಾಯಕರಾಗಿ ಹಿಟ್‌ಮ್ಯಾನ್ ರೋಹಿತ್ ಶರ್ಮಾ ಹೆಸರಿಸಲ್ಪಟ್ಟಿದ್ದಾರೆ. ವಿಕೆಟ್ ಕೀಪರ್‌ಗಳಾಗಿ ಯುವ ಬ್ಯಾಟ್ಸ್‌ಮನ್ ಕಮ್ ವಿಕೆಟ್ ಕೀಪರ್‌ಗಳಾದ ರಿಷಭ್ ಪಂತ್ ಮತ್ತು ಇಶಾನ್ ಕಿಶನ್ ಹೆಸರಿಸಲ್ಪಟ್ಟಿದ್ದಾರೆ.

ಬಲಿಷ್ಠ ಭಾರತ ತಂಡ
ಟಿ20ಐ ನಿಟ್ಟಿನಲ್ಲಿ ಬಲಿಷ್ಠ ತಂಡವನ್ನು ಬಿಸಿಸಿಐ ಪ್ರಕಟಿಸಿದೆ. ಚುಟುಕು ಮಾದರಿಗೆ ಒಪ್ಪುವಂತ ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ, ಶ್ರೇಯಸ್ ಐಯ್ಯರ್, ಟಿ ನಟರಾಜನ್, ರಾಹುಲ್ ತೆವಾಟಿಯಾ, ವಾಷಿಂಗ್ಟನ್ ಸುಂದರ್ ಹೀಗೆ ಪ್ರಮುಖ ಆಟಗಾರರೆಲ್ಲರೂ ಪ್ರಕಟಿತ ತಂಡದಲ್ಲಿ ಕಾಣಿಸಿಕೊಂಡಿದ್ದಾರೆ.

ಟಿ20ಐಗೆ ಟೀಮ್ ಇಂಡಿಯಾ
ವಿರಾಟ್ ಕೊಹ್ಲಿ (ನಾಯಕ), ರೋಹಿತ್ ಶರ್ಮಾ (ಉಪನಾಯಕ), ಶಿಖರ್ ಧವನ್, ಶ್ರೇಯಸ್ ಅಯ್ಯರ್, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ರಿಷಭ್ ಪಂತ್ (ವಿಕೆ), ಇಶಾನ್ ಕಿಶನ್ (ವಿಕೆ), ಯುಜುವೇಂದ್ರ ಚಾಹಲ್, ವರುಣ್ ಚಕ್ರವರ್ತಿ, ಅಕ್ಸರ್ ಪಟೇಲ್, ವಾಷಿಂಗ್ಟನ್ ಸುಂದರ್, ರಾಹುಲ್ ತೆವಾಟಿಯಾ, ಟಿ ನಟರಾಜನ್, ಭುವನೇಶ್ವರ್ ಕುಮಾರ್, ದೀಪಕ್ ಚಾಹರ್, ನವದೀಪ್ ಸೈನಿ, ಶಾರ್ದೂಲ್ ಠಾಕೂರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications