ನ್ಯೂಜಿಲೆಂಡ್ ವಿರುದ್ಧದ ಟಿ20ಐಗೆ ಭಾರತ ತಂಡ ಪ್ರಕಟ, ಧೋನಿ ಇಲ್ಲ

ನವದೆಹಲಿ, ಜನವರಿ 13: ಶ್ರೀಲಂಕಾ ವಿರುದ್ಧದ ಮೂರು ಪಂದ್ಯಗಳ ಟಿ20ಐ ಸರಣಿಯನ್ನು ಗೆದ್ದುಕೊಂಡಿರುವ ವಿರಾಟ್ ಕೊಹ್ಲಿ ಪಡೆ ಈಗ ಆಸ್ಟ್ರೇಲಿಯಾ ಹಾಗೂ ನ್ಯೂಜಿಲೆಂಡ್ ಸರಣಿಗೆ ಸಜ್ಜಾಗಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಜನವರಿ 14ರಿಂದ ಆರಂಭವಾಗಲಿದೆ. ಇದಾದ ಬಳಿಕ ಕಿವೀಸ್ ವಿರುದ್ಧ ಟೀಂ ಇಂಡಿಯಾ ಸೆಣಸಲಿದೆ. ನ್ಯೂಜಿಲೆಂಡ್ ವಿರುದ್ಧದ ಸರಣಿಗೆ ಟೀಂ ಇಂಡಿಯಾ ಪ್ರಕಟಿಸಲಾಗಿದ್ದು, ಯಾವುದೇ ಅಚ್ಚರಿ ಕಂಡು ಬಂದಿಲ್ಲ.
ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿಯ ಆಯ್ಕೆ ಸಮಿತಿ ಪ್ರಕಟಿಸಿರುವ ತಂಡದಲ್ಲಿ ಮಾಜಿ ನಾಯಕ ಎಂ ಎಸ್ ಧೋನಿ ಅನುಪಸ್ಥಿತಿ ಎದ್ದು ಕಾಣುತ್ತಿದೆ. ಮಿಕ್ಕಂತೆ ತಂಡದಲ್ಲಿ ಮೂವರು ಓಪನರ್ ಗಳಿದ್ದಾರೆ. ರೋಹಿತ್ ಶರ್ಮ ತಂಡಕ್ಕೆ ಮರಳಿದ್ದಾರೆ. ಜಸ್ ಪ್ರೀತ್ ಬೂಮ್ರಾ ಬೌಲಿಂಗ್ ಸಾರಥ್ಯ ವಹಿಸಲಿದ್ದು, ಭುವನೇಶ್ವರ್ ಕುಮಾರ್ ಗೆ ಸ್ಥಾನ ಕಲ್ಪಿಸಲಾಗಿಲ್ಲ. ವಿಕೆಟ್ ಕೀಪರ್ ರಿಷಬ್ ಪಂತ್ ಗೆ ಮತ್ತೆ ಅವಕಾಶ ಸಿಕ್ಕಿದ್ದು, ಶ್ರೀಲಂಕಾ ವಿರುದ್ಧ ಒಂದು ಪಂದ್ಯವಾಡಿದ ಸಂಜು ಸಾಮ್ಸನ್ ಮತ್ತೆ ಅವಕಾಶ ವಂಚಿತರಾಗಿದ್ದಾರೆ.
ಆಕ್ಲೆಂಡ್ ನಲ್ಲಿ ನ್ಯೂಜಿಲೆಂಡ್ ವಿರುದ್ಧದ 5 ಪಂದ್ಯಗಳ ಟಿ20ಐ ಸರಣಿ ಜನವರಿ 24ರಿಂದ ಆರಂಭವಾಗಲಿದೆ. ಏಕದಿನ ಹಾಗೂ ಟೆಸ್ಟ್ ತಂಡಗಳನ್ನು ಇನ್ನೂ ಪ್ರಕಟಿಸಬೇಕಿದೆ. ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಪ್ರಕಟಿಸಿರುವ ತಂಡ ಹೀಗಿದೆ:
ವಿರಾಟ್ ಕೊಹ್ಲಿ(ನಾಯಕ), ರೋಹಿತ್ ಶರ್ಮ(ಉಪ ನಾಯಕ), ಕೆಎಲ್ ರಾಹುಲ್, ಶಿಖರ್ ಧವನ್, ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ರಿಷಬ್ ಪಂತ್ (ವಿಕೆಟ್ ಕೀಪರ್), ಶಿವಂ ದುಬೆ, ಕುಲದೀಪ್ ಯಾದವ್, ಯುಜುವೇಂದ್ರ ಚಾಹಲ್, ವಾಷಿಂಗ್ಟನ್ ಸುಂದರ್, ಜಸ್ ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications