ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತದ ಅಪ್‌ಡೇಟೆಡ್ ತಂಡ ಪ್ರಕಟ, ತಂಡದಲ್ಲಿ ಪ್ರಮುಖ ಬದಲಾವಣೆ!

ಲಂಡನ್: ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ತಂಡ ಆಗಸ್ಟ್ 4ರಿಂದ ಸೆಪ್ಟೆಂಬರ್ 14ರ ವರೆಗೆ ಆತಿಥೇಯರ ವಿರುದ್ಧ ಐದು ಪಂದ್ಯಗಳ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೂ ಮುನ್ನ ಬೋರ್ಡ್ ಆಫ್ ಕಂಟ್ರೋಲ್ ಫಾರ್ ಕ್ರಿಕೆಟ್ ಇನ್ ಇಂಡಿಯಾ (ಬಿಸಿಸಿಐ) ಅಪ್‌ಡೇಟೆಡ್ ತಂಡ ಪ್ರಕಟಿಸಿದೆ. ವಿಶೇಷವೆಂದರೆ ಇಂಗ್ಲೆಂಡ್ ವಿರುದ್ಧದ ಟೆಸ್ಟ್‌ಗಾಗಿ ಪ್ರಕಟಿಸಲಾಗಿರುವ ತಂಡದಲ್ಲಿ ಶ್ರೀಲಂಕಾ ಪ್ರವಾಸದಲ್ಲಿರುವ ಇಬ್ಬರ ಹೆಸರುಗಳು ಕಾಣಿಸಿಕೊಂಡಿವೆ.
ಭಾರತ ಮತ್ತು ಕೌಂಟಿ ಸೆಲೆಕ್ಟ್ XI ಮಧ್ಯೆ ಈ ಮೊದಲು ಅಭ್ಯಾಸ ಪಂದ್ಯ ನಡೆದಿತ್ತು. ಈ ವೇಳೆ ಭಾರತ ತಂಡದಿಂದ ಇಬ್ಬರು ಗಾಯಕ್ಕೀಡಾಗಿ ತಂಡದಿಂದ ಹೊರ ಬಿದ್ದಿದ್ದರು. ಆವೇಶ್ ಖಾನ್ ಮತ್ತು ವಾಷಿಂಗ್ಟನ್ ಸುಂದರ್ ಮೂರು ದಿನಗಳ ಅಭ್ಯಾಸ ಪಂದ್ಯದ ವೇಳೆ ಗಾಯಕ್ಕೀಡಾಗಿ ಟೆಸ್ಟ್ ಸರಣಿಯಿಂದ ಹೊರ ಬಿದ್ದಿದ್ದರು.

ಎರಡು ಪ್ರಮುಖ ಬದಲಾವಣೆ
ವಿಶೇಷವೆಂದರೆ ಶ್ರೀಲಂಕಾ ಪ್ರವಾಸದಲ್ಲಿದ್ದ ಪೃಥ್ವಿ ಶಾ ಮತ್ತು ಸೂರ್ಯಕುಮಾರ್ ಯಾದವ್ ಅವರನ್ನು ಇಂಗ್ಲೆಂಡ್ ಟೆಸ್ಟ್ ಸರಣಿಯ ತಂಡದಲ್ಲಿ ಪ್ರಟಿಸಲಾಗಿದೆ. ಶಾ ಮತ್ತು ಯಾದವ್ ಈಗ ಶ್ರೀಲಂಕಾ ಪ್ರವಾಸದಲ್ಲಿರುವ ಮತ್ತೊಂದು ಭಾರತ ತಂಡದಲ್ಲಿ ಆತಿತೇಯರ ವಿರುದ್ಧ ಟಿ20ಐ ಸರಣಿ ಆಡುತ್ತಿದ್ದಾರೆ. ಈ ಸರಣಿ ಜುಲೈ 29ಕ್ಕೆ ಕೊನೆಗೊಳ್ಳಲಿದೆ.

ಶ್ರೀಲಂಕಾ ಪ್ರವಾಸ ಯಶಸ್ವಿ
ವಿರಾಟ್ ಕೊಹ್ಲಿ ನಾಯಕತ್ವದ ಭಾರತೀಯ ಒಂದು ತಂಡದ ಇಂಗ್ಲೆಂಡ್‌ನಲ್ಲಿದ್ದರೆ, ಶಿಖರ್ ಧವನ್ ನಾಯಕತ್ವದ ಮತ್ತೊಂದು ತಂಡ ಶ್ರೀಲಂಕಾದಲ್ಲಿದೆ. ಶ್ರೀಲಂಕಾ ಪ್ರವಾಸದಲ್ಲಿರುವ ತಂಡ ಸರಣಿಯನ್ನು ಯಶಸ್ವಿಯಾಗಿಸುವುದರಲ್ಲಿದೆ. ಈಗಾಗಲೇ ಮೂರು ಪಂದ್ಯಗಳ ಏಕದಿನ ಸರಣಿಯನ್ನು ಭಾರತ 2-1ರಿಂದ ಜಯಿಸಿದೆ. ಮೂರು ಪಂದ್ಯಗಳ ಟಿ20ಐ ಸರಣಿಯಲ್ಲೂ ಭಾರತ 1-0ಯ ಮುನ್ನಡೆಯಲ್ಲಿದೆ.

ಇಂಗ್ಲೆಂಡ್ ಟೆಸ್ಟ್ ಸರಣಿಗೆ ಭಾರತೀಯ ತಂಡ
ರೋಹಿತ್ ಶರ್ಮಾ, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ವಿರಾಟ್ ಕೊಹ್ಲಿ (ಸಿ), ಅಜಿಂಕ್ಯ ರಹಾನೆ (ವಿಸಿ), ಹನುಮ ವಿಹಾರಿ, ರಿಷಭ್ ಪಂತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್‌ಪ್ರೀತ್ ಬುಮ್ರಾ, ಇಶಾಂತ್ ಶರ್ಮಾ, ಮೊಹಮ್ಮದ್ ಸಿರಾಜ್, ಶಾರ್ದೂಲ್ ಠಾಕೂರ್, ಉಮೇಶ್ ಯಾದವ್, ಕೆಎಲ್ ರಾಹುಲ್, ವೃದ್ಧಿಮಾನ್ ಸಾಹ (ವಿಕೆ), ಅಭಿಮನ್ಯು ಈಶ್ವರನ್, ಪೃಥ್ವಿ ಶಾ, ಸೂರ್ಯಕುಮಾರ್ ಯಾದವ್
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications