WTC Points Table: ವಿಂಡೀಸ್ ವಿರುದ್ಧ ಸರಣಿ ಗೆಲುವಿನ ನಂತರ ಭಾರತ ಅಂಕಪಟ್ಟಿಯಲ್ಲಿ ಯಾವ ಸ್ಥಾನದಲ್ಲಿದೆ?
ಟೀಮ್ ಇಂಡಿಯಾ ನವದೆಹಲಿಯಲ್ಲಿ ಅಮೋಘ ಪ್ರದರ್ಶನ ನೀಡಿ, ವಿಂಡೀಸ್ ವಿರುದ್ಧ 7 ವಿಕೆಟ್ ಜಯ ಸಾಧಿಸಿದೆ. ಈ ಮೂಲಕ ತವರಿನಲ್ಲಿ ವೆಸ್ಟ್ ಇಂಡೀಸ್ ವಿರುದ್ಧ ಆಡಿದ ಎರಡೂ ಪಂದ್ಯಗಳನ್ನು ಗೆದ್ದು ಬೀಗಿದೆ. ಈ ಮೂಲಕ ಗಿಲ್ ಪಡೆ ತವರಿನಲ್ಲಿ ಮೊದಲ ಟೆಸ್ಟ್ ಸರಣಿ ಗೆಲುವಿನ ನಗೆ ಬೀರಿದೆ. ಈ ಮೂಲಕ ಪ್ರಸಕ್ತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸೈಕಲ್‌ನಲ್ಲಿ ಮೊದಲ ಗೆಲುವಿನ ನಗೆ ಬೀರಿದೆ. ಈ ಮೂಲಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಸುಧಾರಣೆ ಕಂಡಿದೆ.
ಅಹಮದಾಬಾದ್ ಹಾಗೂ ದೆಹಲಿಯಲ್ಲಿ ಗೆಲುವು ಸಾಧಿಸಿರುವ ಭಾರತ ಅಬ್ಬರಿಸಿದೆ. ಈ ಗೆಲುವಿನ ಮೂಲಕ ಭಾರತ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್‌ನಲ್ಲಿ ಆಡಿದ 7 ಪಂದ್ಯಗಳಲ್ಇ 4 ಜಯ, 2 ಸೋಲು, 1 ಡ್ರಾ ಕಂಡಿದ್ದು, 52 ಅಂಕ ಕಲೆ ಹಾಕಿದೆ. ಅಲ್ಲದೆ ಗೆಲುವಿನ ಶೇಕಡಾ ವಾರು 61.90 ಆಗಿದೆ. ಈ ಮೂಲಕ ಭಾರತ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಈ ಸರಣಿ ಆರಂಭವಾಗವುದಕ್ಕೂ ಮೊದಲು ಟೀಮ್ ಇಂಡಿಯಾ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲೇ ಇತ್ತು. ಆದರೆ ಈಗ ಭಾರತ ತನ್ನ ಅಂಕವನ್ನು ಸುಧಾರಿಸಿಕೊಂಡಿದೆ.

ಆಸ್ಟ್ರೇಲಿಯಾ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ. ಆಸೀಸ್ ವೆಸ್ಟ್ ಇಂಡೀಸ್ ಪ್ರವಾಸದಲ್ಲಿ ಆಡಿದ ಮೂರು ಟೆಸ್ಟ್ ಪಂದ್ಯಗಳಲ್ಲಿ ಮೂರರಲ್ಲೂ ಜಯ ಸಾಧಿಸಿದ್ದು, 36 ಅಂಕ ಹಾಗೂ ಗೆಲುವಿನ ಶೇಕಡಾ ವಾರು 100ರೊಂದಿಗೆ ಅಂಕ ಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಕಾಯ್ದುಕೊಂಡಿದೆ. ಇನ್ನು ಶ್ರೀಲಂಕಾ ಸಹ ಆಡಿದ 2 ಪಂದ್ಯಗಳಲ್ಲಿ 1 ಗೆಲುವು, 1 ಸೋಲು ಕಂಡಿದ್ದು, 16 ಅಂಕ ಕಲೆ ಹಾಕಿದ್ದು, ಗೆಲುವಿನ ಶೇಕಡಾವಾರು 66 ಆಗಿದೆ.
ಉಳಿದ ತಂಡಗಳ ಫಲಿತಾಂಶ
ಇಂಗ್ಲೆಂಡ್ 43.33 ಅಂಕಗಳೊಂದಿಗೆ ನಾಲ್ಕನೇ ಸ್ಥಾನ, ಬಾಂಗ್ಲಾದೇಶ 16.67 ಅಂಕಗಳೊಂದಿಗೆ ಐದನೇ ಸ್ಥಾನ, ವೆಸ್ಟ್ ಇಂಡೀಸ್ ಆರನೇ ಸ್ಥಾನವನ್ನು ಪಡೆದಿದೆ. ನ್ಯೂಜಿಲೆಂಡ್, ಪಾಕಿಸ್ತಾನ, ದಕ್ಷಿಣ ಆಫ್ರಿಕಾ ತಂಡಗಳು ಇನ್ನು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ತನ್ನ ಖಾತೆಯನ್ನು ಓಪನ್ ಮಾಡುವ ಕನಸು ಕಾಣುತ್ತಿದೆ. ದಕ್ಷಿಣ ಆಫ್ರಿಕಾ ಹಾಗೂ ಪಾಕಿಸ್ತಾನ ತಂಡಗಳ ಪಂದ್ಯ ನಡೆಯುತ್ತಿದ್ದು, ಈ ಪಂದ್ಯದ ಮೇಲೆ ಎಲ್ಲರ ಚಿತ್ತ ನೆಟ್ಟಿದೆ.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications