For Quick Alerts
ALLOW NOTIFICATIONS  
For Daily Alerts
 

IND vs NZ Test: ಹೇಗಿದೆ ಮುಂಬೈನಲ್ಲಿ ಟೀಮ್ ಇಂಡಿಯಾ ಅಂಕಿ ಅಂಶ:

ಭಾರತ ಹಾಗೂ ನ್ಯೂಜಿಲೆಂಡ್ ನಡುವಣ ಮೂರನೇ ಟೆಸ್ಟ್ ಪಂದ್ಯ ಮುಂಬೈನ ವಾಂಖೇಡೆ ಸ್ಟೇಡಿಯಂನಲ್ಲಿ ನಡೆಯಲಿದೆ. ಈಗಾಗಲೇ ಸರಣಿಯನ್ನು ಇನ್ನು ಒಂದು ಪಂದ್ಯ ಬಾಕಿ ಇರುವಂತೆ ವಶಕ್ಕೆ ಪಡೆದಿರುವ ನ್ಯೂಜಿಲೆಂಡ್‌ ಅಬ್ಬರಿಸಿದೆ. ಭಾರತ ತವರಿನಲ್ಲಿ 12 ವರ್ಷಗಳ ಬಳಿಕ ಸರಣಿ ಸೋಲನ್ನು ಅನುಭವಿಸಿದೆ. ಈ ಮೂಲಕ ಭಾರತ ಮತ್ತೆ ಗೆಲುವಿನ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿದೆ. ಅದಕ್ಕೆ ಭರ್ಜರಿ ವೇದಿಕೆ ಸಹ ಸಿದ್ಧವಾಗಿದೆ.

ನ್ಯೂಜಿಲೆಂಡ್‌ ಬೆಂಗಳೂರಿನಲ್ಲಿ ನಡೆದಿದ್ದ ಮೊದಲ ಟೆಸ್ಟ್‌ ಪಂದ್ಯದಲ್ಲಿ 8 ವಿಕೆಟ್‌ ಜಯ ಹಾಗೂ ಪುಣೆ ಟೆಸ್ಟ್‌ನಲ್ಲಿ 113 ರನ್‌ ಜಯ ಸಾಧಿಸಿದ್ದು, ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿದೆ. ಭಾರತ ಮೂರನೇ ಟೆಸ್ಟ್‌ ಪಂದ್ಯವನ್ನು ಗೆದ್ದು ಮಾನ ಉಳಿಸಿಕೊಳ್ಳುವ ಪ್ಲ್ಯಾನ್ ಮಾಡಿಕೊಂಡಿದೆ.

India Seeks Redemption in Final Test Against New Zealand at Mumbai s Invincible Wankhede Fortress

ಮುಂಬೈನಲ್ಲಿ ಟೀಮ್ ಇಂಡಿಯಾ ಗೆಲುವಿನ ಫೇವರಿಟ್‌ ತಂಡ. ಆದರೆ ನ್ಯೂಜಿಲೆಂಡ್ ತಂಡವನ್ನು ಕಡೆಗಣಿಸುವಂತಿಲ್ಲ. ಈ ಅಂಗಳದಲ್ಲಿ ಟೀಮ್ ಇಂಡಿಯಾ ಟೆಸ್ಟ್‌ ಕ್ರಿಕೆಟ್‌ನಲ್ಲಿ ತನ್ನ ಅಜೇಯ ಓಟವನ್ನು ಮುಂದುವರೆಸಿದೆ. ಈ ಅಂಗಳದಲ್ಲಿ ಟೀಮ್ ಇಂಡಿಯಾ ಅಂಕಿ ಅಂಶಗಳು ಭರ್ಜರಿಯಾಗಿವೆ.

ಟೀಮ್ ಇಂಡಿಯಾಕ್ಕೆ ಲಕ್ಕಿ ಗ್ರೌಂಡ್

ಮುಂಬೈನ ವಾಂಖೆಡೆ ಅಂಗಳದಲ್ಲಿ 2021ರಲ್ಲಿ ಕೊನೆಯ ಬಾರಿಗೆ ಟೆಸ್ಟ್‌ ಪಂದ್ಯವನ್ನು ಆಡಲಾಗಿದೆ. ಈ ಪಂದ್ಯದಲ್ಲಿ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳು ಕಾದಾಟ ನಡೆಸಿದ್ದವು. ಆಗ ಭಾರತ ಆ ಪಂದ್ಯವನ್ನು 372 ರನ್‌ಗಳಿಂದ ಗೆದ್ದು ಕೊಂಡಿತ್ತು. ಸುಮಾರು ಮೂರು ವರ್ಷಗಳ ಬಳಿಕ ಈ ಮೈದಾನದಲ್ಲಿ ಟೆಸ್ಟ್‌ ಪಂದ್ಯ ನಡೆಯಬೇಕಿದೆ. 2016 ರಲ್ಲಿ ಈ ಅಂಗಳದಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟೆಸ್ಟ್‌ ಪಂದ್ಯ ನಡೆದಿತ್ತು. ಆಗಲೂ ಟೀಮ್ ಇಂಡಿಯಾ ಇನಿಂಗ್ಸ್ ಮತ್ತು 36 ರನ್‌ಗಳಿಂದ ಗೆದ್ದುಕೊಂಡಿತ್ತು.

India Seeks Redemption in Final Test Against New Zealand at Mumbai s Invincible Wankhede Fortress

2013ರಲ್ಲಿ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಈ ಮೈದಾನದಲ್ಲಿ ಫೈಟ್ ನಡೆಸಿದ್ದವು. ಆ ಪಂದ್ಯದಲ್ಲೂ ಟೀಮ್ ಇಂಡಿಯಾ ಇನಿಂಗ್ಸ್ ಮತ್ತು 36 ರನ್‌ಗಳಿಂದ ಗೆದ್ದುಕೊಂಡಿತ್ತು. ಭಾರತ ತಂಡ ಈ ಅಂಗಳದಲ್ಲಿ 11 ವರ್ಷಗಳಿಂದ ಟೀಮ್ ಇಂಡಿಯಾ ಸೋಲು ಕಂಡಿಲ್ಲ. ಭಾರತ 2012ರಲ್ಲಿ ಕೊನೆಯ ಬಾರಿಗೆ ಟೆಸ್ಟ್‌ ಪಂದ್ಯವನ್ನು ಈ ಅಂಗಳದಲ್ಲಿ ಸೋತಿತ್ತು. ಆ ಪಂದ್ಯವನ್ನು ಇಂಗ್ಲೆಂಡ್ 10 ವಿಕೆಟ್‌ಗಳ ಜಯ ಸಾಧಿಸಿತ್ತು.

ಕ್ಲೀನ್ ಸ್ವೀಪ್ ಭಯ

ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್‌ಗಳು ಅಬ್ಬರದ ಪ್ರದರ್ಶನ ನೀಡಬೇಕಿದೆ. ಅಂದಾಗ ಮಾತ್ರ ಸರಣಿಯಲ್ಲಿ ಕ್ಲೀನ್ ಸ್ವೀಪ್‌ ಭಯದಿಂದ ಪಾರಾಗಬಹುದು. ಹೀಗಾಗಿ ಈ ಅಂಗಳದಲ್ಲಿ ಟೀಮ್ ಇಂಡಿಯಾ ಸಮಯೋಚಿತ ಬ್ಯಾಟಿಂಗ್ ಮಾಡಿ ಅಬ್ಬರಿಸುವ ಅನಿವಾರ್ಯತೆ ಇದೆ. ಅಂದಾಗ ಮಾತ್ರ ಆಸೀಸ್ ಪ್ರವಾಸಕ್ಕೆ ಆತ್ಮವಿಶ್ವಾಸದಿಂದ ತೆರಳಲು ಸಾಧ್ಯ. ಈ ಸರಣಿಯಲ್ಲಿ ಟೀಮ್ ಇಂಡಿಯಾದ ಬ್ಯಾಟರ್‌ಗಳು ತಮ್ಮ ಪಾತ್ರವನ್ನು ಸರಿಯಾಗಿ ನಿಭಾಯಿಸುತ್ತಿಲ್ಲ. ಇವರು ಅಮೋಘ ಬ್ಯಾಟಿಂಗ್ ಪ್ರದರ್ಶನ ನೀಡಿದರೆ ಮಾತ್ರ ಗೆಲುವಿನ ಆಸೆ ಫಲಿಸುತ್ತದೆ.

Story first published: Monday, October 28, 2024, 22:19 [IST]
Other articles published on Oct 28, 2024
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+