IND W vs ENG W: ಸೆಮಿಫೈನಲ್ ತಲುಪಲು ಭಾರತಕ್ಕೆ ಜಯ ಅನಿವಾರ್ಯ: ಭಾನುವಾರ ಇಂಗ್ಲೆಂಡ್ ವಿರುದ್ಧ ಕಾದಾಟ
ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ ವಿರುದ್ಧ ಮಹಿಳಾ ಏಕದಿನ ವಿಶ್ವಕಪ್ ಲೀಗ್ ಹಂತದಲ್ಲಿ ಬ್ಯಾಕ್ ಟು ಬ್ಯಾಕ್ ಎರಡು ಸೋಲು ಕಂಡಿರುವ ಟೀಮ್ ಇಂಡಿಯಾ ಭಾನುವಾರ ಪುಟಿದೇಳುವ ಲೆಕ್ಕಾಚಾರದಲ್ಲಿದೆ. ಇಂಗ್ಲೆಂಡ್ ವಿರುದ್ಧ ನಡೆಯಲಿರುವ ಮಹತ್ವದ ಪಂದ್ಯದಲ್ಲಿ ಟೀಮ್ ಇಂಡಿಯಾ ಸೊಗಸಾದ ಪ್ರದರ್ಶನ ನೀಡಿ ಜಯದ ಟ್ರ್ಯಾಕ್‌ಗೆ ಮರಳಲು ಪ್ಲ್ಯಾನ್ ಮಾಡಿಕೊಂಡಿದೆ. ಇನ್ನು ಟೀಮ್ ಇಂಡಿಯಾ ಭಾನುವಾರದ ಪಂದ್ಯಕ್ಕಾಗಿ ಬದಲಾವಣೆ ಮಾಡಿಕೊಳ್ಳುವ ಸಾಧ್ಯತೆ ಇದ್ದು, ಆಸೀಸ್ ವಿರುದ್ಧ ಮಾಡಿದ್ದ ತಪ್ಪನ್ನು ಮೆಟ್ಟಿನಿಲ್ಲುವ ಯೋಜನೆಯನ್ನು ಹರ್ಮನ್ ಪ್ರೀತ ಪಡೆ ಮಾಡಿಕೊಂಡಿದೆ.
ಅಂಕಿ ಅಂಶಗಳ ಲೆಕ್ಕಾಚಾರದಲ್ಲಿ ಟೀಮ್ ಇಂಡಿಯಾ ಕೊಂಚ ಹಿನ್ನಡೆ ಅನುಭವಿಸುತ್ತಿದೆ. ಆದರೆ ಸದ್ಯದ ತಂಡದ ಪ್ರದರ್ಶನವನ್ನು ಗಮನಿಸಿದರೆ, ಇದನ್ನೆಲ್ಲಾ ಮೆಟ್ಟಿನಿಲ್ಲುವ ಕ್ಷಮತೆಯನ್ನು ಆಟಗಾರ್ತಿಯರು ಹೊಂದಿದ್ದಾರೆ. ಒಟ್ಟಾರ ಉಭಯ ತಂಡಗಳು ಏಕದಿನ ಕ್ರಿಕೆಟ್‌ನಲ್ಲಿ 79 ಬಾರಿ ಮುಖಾಮುಖಿ ಆಗಿದ್ದು, ಭಾರತ 36, ಇಂಗ್ಲೆಂಡ್ 41ರಲ್ಲಿ ಜಯ ಸಾಧಿಸಿದೆ.

ಉಭಯ ತಂಡಗಳು ಸೆಮಿಫೈನಲ್ ಮೇಲೆ ಕಣ್ಣು ನೆಟ್ಟಿದ್ದು ಈ ಪಂದ್ಯದಲ್ಲಿ ಜಯ ಸಾಧಿಸುವುದು ಅನಿರವಾರ್ಯವಾಗಿದೆ. ಇಂಗ್ಲೆಂಡ್ ಆಡಿದ 4 ಪಂದ್ಯಗಳಲ್ಲಿ ಒಂದೇ ಒಂದು ಸೋಲನ್ನು ಕಂಡಿಲ್ಲ. 3 ಪಂದ್ಯಗಳಲ್ಲಿ ಜಯ ಸಾಧಿಸಿದರೆ, 1 ಪಂದ್ಯ ರದ್ದಾಗಿದೆ. ಇಂಗ್ಲೆಂಡ್ 7 ಅಂಕ ಕಲೆ ಹಾಕಿ ಅಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದೆ. ಇನ್ನು ಭಾರತ ಆಡಿದ 4 ಪಂದ್ಯಗಳಲ್ಲಿ 2 ಜಯ, 2 ಸೋಲು ಕಂಡಿದ್ದು, ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನದಲ್ಲಿದೆ. ಈ ಪಂದ್ಯದಲ್ಲಿ ಜಯ ಸಾಧಿಸಿ ಸೆಮಿಫೈನಲ್ ಆಸೆ ಜೀವಂತವಾಗಿರಿಸಿಕೊಳ್ಳಲು ಭಾರತ ಪ್ಲ್ಯಾನ್ ಮಾಡಿಕೊಂಡಿದೆ.
ಒತ್ತಡದಲ್ಲಿ ನೀಡಬೇಕು ಸಂಘಟಿತ ಪ್ರದರ್ಶನ
ಟೀಮ್ ಇಂಡಿಯಾದಲ್ಲಿ ಸ್ಟಾರ್ ಆಟಗಾರ್ತಿಯರ ಬಳಗವೇ ಇದೆ. ಆಸ್ಟ್ರೇಲಿಯಾ ವಿರುದ್ಧ ನೀಡಿದ್ದ ಪ್ರದರ್ಶನವನ್ನು ಇಂಗ್ಲೆಂಡ್ ವಿರುದ್ಧ ಪುನಾರವರ್ತಿಸುವ ಅವಶ್ಯಕತೆ ಇದೆ. ಇನ್ನು ಸ್ಟಾರ್ ಆರಂಭಿಕ ಆಟಗಾರ್ತಿಯರಾದ ಸ್ಮೃತಿ ಮಂಧಾನ, ಪ್ರತಿಕಾ ರಾವಲ್ ಜೋಡಿಯ ಮೇಲೆ ನಿರೀಕ್ಷೆಗಳು ಹೆಚ್ಚಿವೆ. ಈ ಜೋಡಿ ಆಸ್ಟ್ರೇಲಿಯಾ ವಿರುದ್ಧ ಅಮೋಘ ಪ್ರದರ್ಶನ ನೀಡಿತ್ತು. ನಾಯಕಿ ಹರ್ಮನ್‌ಪ್ರೀತ್ ಕೌರ್ ಮತ್ತು ಜೆಮಿಮಾ ರೊಡ್ರಿಗಸ್ ಚಿಕ್ಕ ಚಿಕ್ಕ ಇನಿಂಗ್ಸ್ ಕಟ್ಟುತ್ತಿದ್ದಾರೆ. ಆದರೆ ಅದನ್ನೇ ದೊಡ್ಡದಾಗಿ ಕನ್ವರ್ಟ್ ಮಾಡುವಲ್ಲಿ ವಿಫಲರಾಗುತ್ತಿದ್ದಾರೆ. ಹೀಗಾಗಿ ಇವರ ಮೇಲೆ ಜವಾಬ್ದಾರಿ ಹೆಚ್ಚಿದೆ. ರಿಚಾ ಘೋಷ್ ದಕ್ಷಿಣ ಆಫ್ರಿಕಾ ವಿರುದ್ಧ ನೀಡಿದ್ದ ಪ್ರದರ್ಶನವನ್ನೇ ಮತ್ತೆ ನೀಡಬೇಕಿದೆ.

ಆಲ್‌ರೌಂಡರ್ ದೀಪ್ತಿ ಶರ್ಮಾ, ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗುತ್ತಿದ್ದಾರೆ. ಇನ್ನು ವೇಗದ ಬೌಲರ್‌ಗಳಾದ ರೇಣುಕಾ ಸಿಂಗ್, ಕ್ರಾಂತಿ ಗೌಡ್, ವೇಗದ ಬೌಲಿಂಗ್‌ನಲ್ಲಿ ತಂಡಕ್ಕೆ ಬಲ ತುಂಬುವ ಆಟಗಾರ್ತಿಯರಾಗಿದ್ದಾರೆ. ಇನ್ನು ಶ್ರೀ ಚರಣಿ ತಂಡ ತಮ್ಮ ಮೇಲೆ ಇಟ್ಟ ನಂಬಿಕೆಗೆ ಪೂರಕವಾಗಿ ಬೌಲ್ ಮಾಡಬೇಕಿದೆ. ಸ್ನೇಹಾ ರಾಣ ಹಾಗೂ ರಾಧಾ ಯಾದವ್ ಇಬ್ಬರಲ್ಲಿ ಒಬ್ಬರಿಗೆ ಅವಕಾಶ ಸಿಗುವ ಸಾಧ್ಯತೆ ಇದೆ.
ಭಾರತದ ಸಂಭಾವ್ಯ ತಂಡ: ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ, ಪ್ರತೀಕಾ ರಾವಲ್, ಹರ್ಲೀನ್ ಡಿಯೋಲ್, ಜೆಮಿಮಾ ರಾಡ್ರಿಗಸ್, ದೀಪ್ತಿ ಶರ್ಮಾ, ರಿಚಾ ಘೋಷ್, ರೇಣುಕಾ ಸಿಂಗ್ ಠಾಕೂರ್, ಕ್ರಾಂತಿ ಗೌಡ್, ಅರುಂಧತಿ ರೆಡ್ಡಿ ಮತ್ತು ಸ್ನೇಹಾ ರಾಣ/ ರಾಧಾ ಯಾದವ್.
ಗೆಲುವಿನ ಕನಸು
ಈಗಾಗಲೇ ಟೂರ್ನಿಯಲ್ಲಿ ಸಂಘಟಿತ ಆಟದ ಪ್ರದರ್ಶನ ನೀಡುತ್ತಿರುವ ಇಂಗ್ಲೆಂಡ್ ಟೀಮ್ ಇಂಡಿಯಾ ಸವಾಲನ್ನು ಮೆಟ್ಟಿ ನಿಲ್ಲುವ ಕನಸು ಕಾಣುತ್ತಿದೆ. ಇಂಗ್ಲೆಂಡ್ ತಂಡದ ಸ್ಟಾರ್ ಆಟಗಾರ್ತಿಯರು ಅಮೋಘ ಪ್ರದರ್ಶನ ನೀಡುತ್ತಿದ್ದು, ಭಾರತಕ್ಕೆ ಕಾಟ ನೀಡಬಲ್ಲರು.
ಸಂಭಾವ್ಯ ಇಂಗ್ಲೆಂಡ್ ತಂಡ: ಟಾಮಿ ಬ್ಯೂಮಾಂಟ್, ಆಮಿ ಜೋನ್ಸ್ (ವಿಕೆಟ್ ಕೀಪರ್), ಹೀದರ್ ನೈಟ್, ನ್ಯಾಟ್ ಸಿವರ್-ಬ್ರಂಟ್ (ಕ್ಯಾಪ್ಟನ್), ಸೋಫಿಯಾ ಡಂಕ್ಲೆ, ಆಲಿಸ್ ಕ್ಯಾಪ್ಸಿ, ಎಮ್ಮಾ ಲ್ಯಾಂಬ್, ಚಾರ್ಲಿ ಡೀನ್, ಸೋಫಿ ಎಕ್ಲೆಸ್ಟೋನ್, ಲಿನ್ಸೆ ಸ್ಮಿತ್, ಲಾರೆನ್ ಬೆಲ್.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications