IND vs AUS 4th T20: ಆಸೀಸ್‌ಗೆ 168 ರನ್ ಗುರಿ ನೀಡಿದ ಭಾರತ
ಗೋಲ್ಡ್‌ಕಾಸ್ಟ್: ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯದಲ್ಲಿ ಟಾಸ್ ಸೋತ ಭಾರತ ಮೊದಲ ಬ್ಯಾಟಿಂಗ್ ಮಾಡಿತು. ಭಾರತದ ಆರಂಭಿಕ ಆಟಗಾರರಾದ ಅಭಿಷೇಕ್ ಶರ್ಮಾ ಹಾಗೂ ಶುಭಮನ್ ಗಿಲ್ ಜೋಡಿ ಮೊದಲ ವಿಕೆಟ್‌ಗೆ ಭರ್ಜರಿ ಜೊತೆಯಾಟದ ಕಾಣಿಕೆ ನೀಡಿತು. ಈ ಜೋಡಿ ಪವರ್ ಪ್ಲೇನಲ್ಲಿ ವಿಕೆಟ್ ಬೀಳದಂತೆ ನೋಡಿಕೊಂಡಿತು. ಮೊದಲ ವಿಕೆಟ್‌ಗೆ ಅಭಿಷೇಕ್ ಶರ್ಮಾ ಹಾಗ ಶಭಮನ್ ಗಿಲ್ ಜೊತೆಗೂಡಿ 6.4 ಓವರ್‌ಗಳಲ್ಲಿ 56 ರನ್ ಸೇರಿಸಿತು.
ಆರಂಭಿಕ ಆಟಗಾರ ಅಭಿಷೇಕ್ ಶರ್ಮಾ ತಮ್ಮ ನೈಜ್ಯ ಆಟವನ್ನು ಆಡಿದರು. ಇವರು 21 ಎಸೆತಗಳಲ್ಲಿ 3 ಬೌಂಡರಿ, 1 ಸಿಕ್ಸರ್ ಸಹಾಯದಿಂದ 28 ರನ್ ಬಾರಿಸಿ ಆಡಂ ಜಂಪಾಗೆ ವಿಕೆಟ್ ಒಪ್ಪಿಸಿದರು. ಈ ಮೂಲಕ ಅಭಿಷೇಕ್ ಶರ್ಮಾ ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸರಿಗಟ್ಟುವ ಆಸೆ ಕಮರಿದೆ.

ಬ್ಯಾಟಿಂಗ್‌ನಲ್ಲಿ ಬಡ್ತಿ ಪಡೆದ ಶಿವಂ ದುಬೆ 18 ಎಸೆತಗಳಲ್ಲಿ 1 ಬೌಂಡರಿ, 1 ಸಿಕ್ಸರ್ ಸಹಾಯದಿದ 22 ರನ್ ಬಾರಿಸಿದರು. ಇವರು ನಾತನ್ ಎಲ್ಲಿಸ್ ಅವರ ಸ್ಲೋವರ್ ಒನ್ ಎಸೆತವನ್ನು ತಪ್ಪಾಗಿ ಗ್ರಹಿಸಿ ಬೋಲ್ಡ್ ಆದರು.
ಜವಾಬ್ದಾರಿ ಮರೆತ ಬ್ಯಾಟರ್ಸ್
ದುಬೆ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದ ಸೂರ್ಯಕುಮಾರ್ ಯಾದವ್ ಅಭಿಮಾನಿಗಳನ್ನು ರಂಜಿಸಲು ಸಜ್ಜಾದರು. ಆಡಂ ಜಂಪಾ ಅವರು ಎಸೆದ ಇನಿಂಗ್ಸ್‌ನ 13ನೇ ಓವರ್‌ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸರ್‌ಗಳನ್ನು ಬಾರಿಸಿ ಟೀಮ್ ಇಂಡಿಯಾದ ನಾಯಕ ಅಬ್ಬರಿಸಿದರು. ಮೂರನೇ ವಿಕೆಟ್‌ೆ ಶುಭಮನ್ ಗಿಲ್ ಹಾಗೂ ಸೂರ್ಯಕುಮಾರ್ ಯಾದವ್ ಜೋಡಿ 16 ಓವರ್‌ಗಳಲ್ಲಿ 33 ರನ್ ಸಿಡಿಸಿತು. ಈ ವೇಳೆ ಉಪನಾಯಕ ಶುಭಮನ್ ಗಿಲ್ 39 ಎಸೆತಗಳಲ್ಲಿ 4 ಬೌಂಡರಿ, 1 ಸಿಕ್ಸರ್ ಸಹಾಯದಿಂದ 46 ರನ್ ಬಾರಿಸಿ ಔಟ್ ಆದರು. ಟೀಮ್ ಇಂಡಿಯಾದ ನಾಯಕ ಸೂರ್ಯಕುಮಾರ್ ಯಾದವ್ 10 ಎಸೆತಗಳಲ್ಲಿ 2 ಸಿಕ್ಸರ್ ಸೇರಿದಂತೆ 20ರನ್ ಬಾರಿಸಿ ಔಟ್ ಆದರು.
ಭರವಸೆಯ ಆಟಗಾರ ತಿಲಕ್ ವರ್ಮಾ, ಜಿತೇಶ್ ಶರ್ಮಾ ಆಡಂ ಜಂಪಾ ಅವರ ಸ್ಪಿನ್ ಮೋಡಿಗೆ ಬಲಿಯಾದರು. ಭರವಸೆಯ ಆಟಗಾರ ತಿಲಕ್ ವರ್ಮಾ, ಜಿತೇಶ್ ಶರ್ಮಾ ಆಡಂ ಜಂಪಾ ಅವರ ಸ್ಪಿನ್ ಮೋಡಿಗೆ ಬಲಿಯಾದರು. ಆಲ್‌ರೌಂಡರ್ ಅಕ್ಷರ್ ಪಟೇಲ್ 11 ಎಸೆತಗಳಲ್ಲಿ 1 ಬೌಂಡರಿ, 1 ಸಿಕ್ಸರ್ ಸಹಾಯದಿಂದ ಅಜೇಯ 21 ರನ್ ಬಾರಿಸಿದರು. ಆಸ್ಟ್ರೇಲಿಯಾ ತಂಡ ಸ್ಲಾಗ್ ಓವರ್‌ಗಳಲ್ಲಿ ಬಿಗುವಿನ ದಾಳಿ ನಡೆಸಿ ಮಿಂಚಿತು. ಭಾರತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟಕ್ಕೆ 167 ರನ್ ಸೇರಿಸಿತು. ಆಸ್ಟ್ರೇಲಿಯಾ ಪರ ನಾತನ್ ಎಲ್ಲಿಸ್ ಹಾಗೂ ಆಡಂ ಜಂಪಾ ತಲಾ 3 ವಿಕೆಟ್ ಕಬಳಿಸಿದರು.
- Male
- Female
- Others
- Under 18
- 18 to 25
- 26 to 35
- 36 to 45
- 45 to 55
- 55+


Click it and Unblock the Notifications