For Quick Alerts
ALLOW NOTIFICATIONS  
For Daily Alerts
 

IND vs ENG 3rd ODI: ಮಹತ್ವದ ಸರಣಿಗೂ ಮುನ್ನ ಲಯಕ್ಕೆ ಮರಳಿದ ಟೀಮ್ ಇಂಡಿಯಾ ಸ್ಟಾರ್ಸ್‌

ಭಾರತ ಮತ್ತು ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ ಕೊನೆಯ ಪಂದ್ಯ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಎರಡೂ ಪಂದ್ಯಗಳನ್ನು ಗೆದ್ದು ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಸರಣಿ ವಶಪಡಿಸಿಕೊಂಡಿದೆ. ಇದೀಗ ಮೂರನೇ ಏಕದಿನ ಪಂದ್ಯವನ್ನು ಗೆದ್ದು ಸರಣಿಯನ್ನು ಕ್ಲೀನ್ ಸ್ವೀಪ್ ಮಾಡಲು ಟೀಮ್ ಇಂಡಿಯಾ ಮುಂದಾಗಿದೆ. ಮೂರನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡದ ಪರ ಶುಭಮನ್‌ ಗಿಲ್ ಶತಕ ಸಿಡಿಸಿದರು. ಗಿಲ್ ಶತಕದ ನೆರವಿನಿಂದ ಭಾರತ ಬೃಹತ್ ಮೊತ್ತ ಪೇರಿಸಿದೆ.

ಟೀಮ್ ಇಂಡಿಯಾ ನಿಗದಿತ 50 ಓವರ್‌ಗಳಲ್ಲಿ ಆಲೌಟಾಗುವ ಮೂಲಕ 356 ರನ್‌ ಕಲೆ ಹಾಕಿದೆ. ಇದೀಗ ಇಂಗ್ಲೆಂಡ್ ತಂಡ ಗೆಲುವಿಗೆ 357 ರನ್ ಗಳಿಸಬೇಕಾಗಿದೆ.

India Sets Target of 356 Runs for England After Batting First in the Third ODI

ಭಾರತ ತಂಡದ ಪರ ಶುಭಮನ್ ಗಿಲ್ ಅದ್ಭುತ ಶತಕ ಬಾರಿಸಿ ಮಿಂಚಿದರು. ಅವರಲ್ಲದೆ, ವಿರಾಟ್ ಕೊಹ್ಲಿ ಮತ್ತು ಶ್ರೇಯಸ್ ಅಯ್ಯರ್ ಅರ್ಧಶತಕ ಸಿಡಿಸುವ ಮೂಲಕ ಉತ್ತಮ ಇನ್ನಿಂಗ್ಸ್ ಆಡಿದರು. ಶುಭಮನ್ 112 ರನ್ ಗಳಿಸಿದರೆ, ಶ್ರೇಯಸ್ ಅಯ್ಯರ್ 78 ರನ್, ವಿರಾಟ್ ಕೊಹ್ಲಿ 52 ರನ್ ಮತ್ತು ಕೆಎಲ್ ರಾಹುಲ್ 40 ರನ್ ಕಲೆ ಹಾಕಿದರು.

ಇಂಗ್ಲೆಂಡ್ ಪರ ಸ್ಟಾರ್ ಸ್ಪಿನ್ನರ್ ಆದಿಲ್ ರಶೀದ್ 4 ವಿಕೆಟ್ ಕಬಳಿಸಿದರೆ, ಜೋ ರೂಟ್, ಮಾರ್ಕ್ ವುಡ್ ಮತ್ತು ಸಾಕಿಬ್ ಮಹಮೂದ್ ತಲಾ ಒಂದು ವಿಕೆಟ್ ಪಡೆದು ಟೀಮ್ ಇಂಡಿಯಾವನ್ನು ಆಲೌಟ್ ಮಾಡಿದರು.

ಇಂಗ್ಲೆಂಡ್ ಟಾಸ್ ಗೆದ್ದು ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿತು. ಹೀಗಾಗಿ ಟೀಮ್ ಇಂಡಿಯಾ ಪರ ನಾಯಕ ರೋಹಿತ್ ಶರ್ಮಾ ಮತ್ತು ಶುಭಮನ್‌ ಗಿಲ್ ಆರಂಭಿಕರಾಗಿ ಕಣಕ್ಕಿಳಿದರು. ಕೇವಲ 6 ರನ್‌ಗಳಿಗೆ ರೋಹಿತ್ ವಿಕೆಟ್ ಕಳೆದುಕೊಂಡರು. ಇದಾದ ನಂತರ, ಭಾರತಕ್ಕೆ ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಭದ್ರ ಬುನಾದಿ ಹಾಕಿದರು.

ಶುಭಮನ್ ಗಿಲ್ ಮತ್ತು ವಿರಾಟ್ ಕೊಹ್ಲಿ ಎರಡನೇ ವಿಕೆಟ್‌ಗೆ 116 ರನ್‌ಗಳ ಜೊತೆಯಾಟವಾಡಿದರು. ಕೊಹ್ಲಿ 52 ರನ್ ಗಳಿಸಿ ಅದ್ಭುತ ಆಟವಾಡಿದರೆ, ಗಿಲ್ ತಮ್ಮ ಏಕದಿನ ವೃತ್ತಿಜೀವನ 7ನೇ ಶತಕ ಸಿಡಿಸಿದರು. ಗಿಲ್ 102 ಎಸೆತಗಳಲ್ಲಿ 14 ಬೌಂಡರಿ ಮತ್ತು 1 ಸಿಕ್ಸರ್ ನೆರವಿನಿಂದ 112 ರನ್ ಗಳಿಸಿ ಮಿಂಚಿದರು. ಬಳಿಕ ಅಯ್ಯರ್ 64 ಎಸೆತಗಳಲ್ಲಿ 8 ಬೌಂಡರಿ ಮತ್ತು 2 ಸಿಕ್ಸರ್‌ಗಳ ಸಹಾಯದಿಂದ 78 ರನ್ ಗಳಿಸಿದರು. ಕೊನೆಯಲ್ಲಿ, ಕೆಎಲ್ ರಾಹುಲ್ 29 ಎಸೆತಗಳಲ್ಲಿ 3 ಬೌಂಡರಿ ಮತ್ತು 1 ಸಿಕ್ಸರ್‌ನೊಂದಿಗೆ 40 ರನ್ ಗಳಿಸುವ ಮೂಲಕ ಭಾರತ ತರ ಅಬ್ಬರಿಸಿದರು.

ಲಯಕ್ಕೆ ಸ್ಟಾರ್ಸ್

ಫೆಬ್ರವರಿ 19 ರಿಂದ ಆರಂಭವಾಗಲಿರುವ ಐಸಿಸಿ 2025ರ ಚಾಂಪಿಯನ್ಸ್ ಟ್ರೋಫಿ ಟೂರ್ನಿಗೂ ಟೀಮ್ ಇಂಡಿಯಾ ಮ್ಯಾನೇಜ್ಮೆಂಟ್‌ಗೆ ದೊಡ್ಡ ತಲೆ ನೋವು ಎದುರಾಗಿತ್ತು. ಕೆಲವು ದಿನಗಳಿಂದ ಟೀಮ್ ಇಂಡಿಯಾ ಟಾಪ್ ಆರ್ಡರ್ ಬ್ಯಾಟಿಂಗ್ ವಿಭಾಗ ಕಳಪೆ ಫಾರ್ಮ್ ಎದುರಿಸುತ್ತಿತ್ತು. ಇದೀಗ ಮಹತ್ವದ ಟೂರ್ನಿಗೂ ಮುನ್ನ ಟೀಮ್ ಇಂಡಿಯಾ ಸ್ಟಾರ್ಸ್‌ ಲಯಕ್ಕೆ ಮರಳಿದಿದ್ದಾರೆ. ಇಂಗ್ಲೆಂಡ್ ವಿರುದ್ದದ ಏಕದಿನ ಸರಣಿಯಲ್ಲಿ ನಾಯಕ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶುಭಮನ್ ಗಿಲ್, ಶ್ರೇಯಸ್ ಅಯ್ಯರ್ ಮತ್ತು ಕೆಎಲ್ ರಾಹುಲ್ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದ್ದಾರೆ. ಈ ಮೂಲಕ ಸ್ಟಾರ್ ಬ್ಯಾಟರ್‌ಗಳು ಫಾರ್ಮ್‌ಗೆ ಮರಳಿದ್ದಾರೆ. ಇದು ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸ ತರಿಸಿದೆ.

Story first published: Wednesday, February 12, 2025, 17:21 [IST]
Other articles published on Feb 12, 2025
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+